ಯುವಕನೋರ್ವನನ್ನು ಕತ್ತು ಸೀಳಿ ಹತ್ಯೆಗೈದಿರುವ ಘಟನೆ ರಾಯಚೂರು ನಗರದ ಕುಲಸುಂಬಿ ಕಾಲೋನಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ತಿರುಪತಿ ಹತ್ಯೆಯಾದ ಯುವಕ ಎಂದು ಗುರುತಿಸಲಾಗಿದೆ. ಆರೋಪಿಗಳು ತಿರುಪತಿ ವಾಸವಿದ್ದ ಮನೆಯಲ್ಲೇ ಅವರನ್ನು ಹತ್ಯೆಗೈದು, ಬಳಿಕ ಮನೆಗೆ ಬೀಗ ಹಾಕಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಮನೆಯ ಸುತ್ತಮುತ್ತ ತೀವ್ರ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮನೆಯ ಬೀಗ ಮುರಿದು ಪರಿಶೀಲನೆ ನಡೆಸಿದಾಗ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಏಮ್ಸ್ ಸ್ಥಾಪನೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.




