ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

Date:

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸುವ ಮಹತ್ವಾಕಾಂಕ್ಷೆಯ ಉದ್ದೇಶದಿಂದ ಸುಮಾರು ₹30 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ಸುಸಜ್ಜಿತ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಇನ್ನೂ ಸಾರ್ವಜನಿಕ ಸೇವೆಗೆ ಮುಕ್ತವಾಗದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

- Advertisement -

ಕೋಟ್ಯಂತರ ರೂಪಾಯಿ ಸಾರ್ವಜನಿಕರ ತೆರಿಗೆ ಹಣದಲ್ಲಿ ನಿರ್ಮಿಸಿರುವ ಆಸ್ಪತ್ರೆ ಉದ್ಘಾಟನೆಗೆ ಸಿದ್ಧವಾಗಿದ್ದರೂ ಕಾರ್ಯಾರಂಭಕ್ಕೆ ಮುಹೂರ್ತ ನಿಗದಿಯಾಗದಿರುವುದು ಜನರಲ್ಲಿ ಅಸಮಾಧಾನ, ಆಕ್ರೋಶ ಹಾಗೂ ಹಲವು ಅನುಮಾನಗಳಿಗೆ ಕಾರಣವಾಗಿದೆ. ಲಿಂಗಸೂಗೂರು ನಗರದ ತಾಯಿ ಮತ್ತು ಮಕ್ಕಳ ಆರೋಗ್ಯ ರಕ್ಷಣೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ನಿರ್ಮಿಸಿರುವ ಈ ಆಸ್ಪತ್ರೆ ಕಾರ್ಯಾರಂಭ ಮಾಡಿದರೆ ತಾಲೂಕಿನ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ದೊಡ್ಡ ಮಟ್ಟದ ಅನುಕೂಲವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

ವಿಶೇಷವಾಗಿ ಗರ್ಭಿಣಿಯರು, ಬಾಣಂತಿಯರು, ನವಜಾತ ಶಿಶುಗಳು ಹಾಗೂ ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುವ ಪುಟ್ಟ ಮಕ್ಕಳಿಗೆ ಒಂದೇ ಸೂರಿನಡಿ ಅಗತ್ಯ ವೈದ್ಯಕೀಯ ಸೇವೆ ದೊರೆಯಲಿದೆ. ಆದರೆ ಆಸ್ಪತ್ರೆಯ ಕಟ್ಟಡ ನಿರ್ಮಾಣ ಪೂರ್ಣಗೊಂಡು ಅಗತ್ಯ ಸೌಲಭ್ಯಗಳು ಲಭ್ಯವಿದ್ದರೂ ಸೇವೆ ಆರಂಭವಾಗದಿರುವುದು ಸಾರ್ವಜನಿಕರ ನಿರೀಕ್ಷೆಗೆ ತಣ್ಣೀರೆರಚಿದಂತಾಗಿದೆ.

ಎರಡು ಮಹಡಿಗಳಲ್ಲಿ ಅತ್ಯಾಧುನಿಕ ಸೌಲಭ್ಯಗಳ ವ್ಯವಸ್ಥೆ

ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಎರಡು ಮಹಡಿಗಳನ್ನು ಹೊಂದಿದ್ದು, ರೋಗಿಗಳಿಗೆ ಅಗತ್ಯವಿರುವ ಹಲವು ವೈದ್ಯಕೀಯ ಹಾಗೂ ಮೂಲಸೌಕರ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಹೊರರೋಗಿಗಳ ವಿಭಾಗ (ಒಪಿಡಿ), ತೀವ್ರ ನಿಗಾ ಘಟಕ (ಐಸಿಯು), ನವಜಾತ ಶಿಶುಗಳ ವಿಶೇಷ ಆರೈಕೆ ಘಟಕ (ಎಂಎನ್‌ಸಿಯು), ಸಮಾಲೋಚನಾ ಕೊಠಡಿ, ಶಿಶುಗಳಿಗೆ ಹಾಲುಣಿಸುವ ಪ್ರತ್ಯೇಕ ಕೊಠಡಿ ಸೇರಿದಂತೆ ಹಲವು ವ್ಯವಸ್ಥೆಗಳನ್ನು ನಿರ್ಮಿಸಲಾಗಿದೆ.

ವೈದ್ಯರು ಹಾಗೂ ಸಿಬ್ಬಂದಿಗೆ ವಸತಿ ಗೃಹ, ರೋಗಿಗಳು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಲಿಫ್ಟ್ ವ್ಯವಸ್ಥೆ ಸೇರಿದಂತೆ ಆಸ್ಪತ್ರೆಯ ಕಾರ್ಯನಿರ್ವಹಣೆಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. ತಾಯಿ ಮತ್ತು ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದಂತೆ ವಿಶೇಷ ಆರೈಕೆ ನೀಡುವ ದೃಷ್ಟಿಯಿಂದ ಕಟ್ಟಡವನ್ನು ಯೋಜಿತ ರೀತಿಯಲ್ಲಿ ನಿರ್ಮಿಸಲಾಗಿದೆ.

ಸಕಲ ಸೌಲಭ್ಯಗಳಿರುವ ಆಸ್ಪತ್ರೆಯಲ್ಲಿ ಅಗತ್ಯ ವೈದ್ಯಕೀಯ ಉಪಕರಣಗಳ ಅಳವಡಿಕೆ, ವೈದ್ಯರು, ಶುಶ್ರೂಷಕರು ಹಾಗೂ ಇತರೆ ಸಿಬ್ಬಂದಿಗಳ ನೇಮಕಾತಿ ಅಥವಾ ನಿಯೋಜನೆ, ಆಡಳಿತಾತ್ಮಕ ಅನುಮತಿಗಳು ಮತ್ತು ಇತರೆ ಕಾರ್ಯಾರಂಭದ ಸಿದ್ಧತೆಗಳು ಯಾವ ಹಂತದಲ್ಲಿವೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಸಾರ್ವಜನಿಕರಿಗೆ ಲಭ್ಯವಾಗುತ್ತಿಲ್ಲ. ಕಟ್ಟಡ ನಿರ್ಮಾಣಕ್ಕೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿರುವ ಸರ್ಕಾರ, ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ವಿಳಂಬ ಮಾಡುತ್ತಿರುವುದೇಕೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಖಾಸಗಿ ಆಸ್ಪತ್ರೆಗಳ ಅವಲಂಬನೆ ತಪ್ಪುವುದಾದರೂ ಯಾವಾಗ?

ಸದ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ವೈದ್ಯಕೀಯ ಸೇವೆ ಪಡೆಯಲು ಸಾರ್ವಜನಿಕರು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲೂ ಗರ್ಭಿಣಿಯರ ತಪಾಸಣೆ, ಹೆರಿಗೆ, ತುರ್ತು ಚಿಕಿತ್ಸೆ ಹಾಗೂ ನವಜಾತ ಶಿಶುಗಳ ಆರೈಕೆಗೆ ವಿಶೇಷ ವೈದ್ಯಕೀಯ ಸೌಲಭ್ಯಗಳ ಅಗತ್ಯವಿದೆ.

ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆರಂಭವಾದರೆ ಗರ್ಭಿಣಿಯರಿಗೆ ನಿಯಮಿತ ತಪಾಸಣೆ, ಸುರಕ್ಷಿತ ಹೆರಿಗೆ, ತುರ್ತು ವೈದ್ಯಕೀಯ ನೆರವು ಹಾಗೂ ಮಕ್ಕಳಿಗೆ ಅಗತ್ಯ ಚಿಕಿತ್ಸೆ ಸ್ಥಳೀಯವಾಗಿಯೇ ದೊರೆಯುವ ಸಾಧ್ಯತೆಯಿದೆ. ಇದರಿಂದ ದೂರದ ನಗರಗಳ ಆಸ್ಪತ್ರೆಗಳಿಗೆ ತೆರಳುವ ಅನಿವಾರ್ಯತೆ ಕಡಿಮೆಯಾಗುವುದರ ಜೊತೆಗೆ ಸರ್ಕಾರಿ ಆರೋಗ್ಯ ವ್ಯವಸ್ಥೆಯ ಮೇಲಿನ ಒತ್ತಡವೂ ತಗ್ಗಬಹುದು.

ಆಸ್ಪತ್ರೆ ಆರಂಭವಾಗದಿರುವುದರಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳ ಮೊರೆ ಹೋಗಬೇಕಾದ ಪರಿಸ್ಥಿತಿ ಮುಂದುವರಿದಿದೆ. ಹೆರಿಗೆ ಹಾಗೂ ಮಕ್ಕಳ ಚಿಕಿತ್ಸೆಗೆ ಸಾವಿರಾರು ರೂಪಾಯಿ ವೆಚ್ಚ ಮಾಡಬೇಕಾಗಿದ್ದು, ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ಇದು ದೊಡ್ಡ ಹೊರೆಯಾಗಿದೆ. ಗ್ರಾಮೀಣ ಪ್ರದೇಶಗಳಿಂದ ನಗರಗಳಿಗೆ ಪ್ರಯಾಣಿಸಿ ಚಿಕಿತ್ಸೆ ಪಡೆಯುವುದು ಮತ್ತೊಂದು ಸಂಕಷ್ಟವಾಗಿದೆ.

ಜನಪ್ರತಿನಿಧಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ತಾಲೂಕಿನ ಜನರ ಆರೋಗ್ಯದ ಹಿತದೃಷ್ಟಿಯಿಂದ ನಿರ್ಮಿಸಿರುವ ಇಂತಹ ಮಹತ್ವದ ಆಸ್ಪತ್ರೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವ ವಿಚಾರದಲ್ಲಿ ಜನಪ್ರತಿನಿಧಿಗಳು ಹೆಚ್ಚಿನ ಆಸಕ್ತಿ ತೋರಬೇಕಿತ್ತು. ಆದರೆ ಆಸ್ಪತ್ರೆ ನಿರ್ಮಾಣ ಪೂರ್ಣಗೊಂಡು ಉದ್ಘಾಟನೆಗೆ ಕಾಯುತ್ತಿರುವುದರ ನಡುವೆಯೂ ಅದರ ಕಾರ್ಯಾರಂಭದ ಬಗ್ಗೆ ಸ್ಪಷ್ಟ ಕಾಲಮಿತಿ ಪ್ರಕಟವಾಗದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ಈ ವಿಚಾರದಲ್ಲಿ ಸರ್ಕಾರದ ಗಮನ ಸೆಳೆದು ಆಸ್ಪತ್ರೆ ಶೀಘ್ರ ಆರಂಭವಾಗುವಂತೆ ಒತ್ತಡ ಹೇರಬೇಕಾಗಿದೆ. ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಾಕಿ ಇರುವ ಕಾಮಗಾರಿಗಳು, ಉಪಕರಣಗಳ ವ್ಯವಸ್ಥೆ, ಸಿಬ್ಬಂದಿ ನಿಯೋಜನೆ ಹಾಗೂ ಆಡಳಿತಾತ್ಮಕ ಅನುಮತಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕಿದೆ. ಕೇವಲ ಕಟ್ಟಡ ನಿರ್ಮಾಣ ಮಾಡಿ ಉದ್ಘಾಟನೆಯ ನಿರೀಕ್ಷೆಯಲ್ಲಿ ಇಡುವುದರಿಂದ ಸಾರ್ವಜನಿಕರಿಗೆ ಯಾವುದೇ ಪ್ರಯೋಜನವಿಲ್ಲ. ಆಸ್ಪತ್ರೆಯ ನಿಜವಾದ ಯಶಸ್ಸು ಅದು ಪ್ರತಿದಿನವೂ ರೋಗಿಗಳಿಗೆ ಗುಣಮಟ್ಟದ ಸೇವೆ ಒದಗಿಸುವುದರಲ್ಲಿದೆ.

ಆಸ್ಪತ್ರೆ ಕಟ್ಟಿದ್ದಷ್ಟೇ ಅಭಿವೃದ್ಧಿಯಲ್ಲ, ಜನರಿಗೆ ಸೇವೆ ಸಿಗಬೇಕು!

₹30 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕೇವಲ ಸುಂದರ ಕಟ್ಟಡವಾಗಿ ಉಳಿಯಬಾರದು. ಅದು ಬಡವರ ಪಾಲಿಗೆ ಆರೋಗ್ಯದ ಭರವಸೆಯಾಗಬೇಕು. ಗ್ರಾಮೀಣ ಭಾಗದ ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆ ಸೌಲಭ್ಯ, ನವಜಾತ ಶಿಶುಗಳಿಗೆ ಸೂಕ್ತ ಆರೈಕೆ ಹಾಗೂ ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ದೊರೆಯುವ ಆರೋಗ್ಯ ಕೇಂದ್ರವಾಗಿ ರೂಪುಗೊಳ್ಳಬೇಕು ಎಂಬುದು ಜನರ ಹಕ್ಕೊತ್ತಾಯ.

ಸರ್ಕಾರ ಮತ್ತು ಜಿಲ್ಲಾಡಳಿತ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಆಸ್ಪತ್ರೆ ಕಾರ್ಯಾರಂಭಕ್ಕೆ ಇರುವ ಅಡೆತಡೆಗಳನ್ನು ನಿವಾರಿಸಬೇಕು. ಜನಪ್ರತಿನಿಧಿಗಳು ಮೌನ ಮುರಿದು ಜನರ ಪರವಾಗಿ ಧ್ವನಿ ಎತ್ತಬೇಕು. ಇಲ್ಲವಾದರೆ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಆಸ್ಪತ್ರೆ ಇದ್ದರೂ ಬಡವರು ಖಾಸಗಿ ಆಸ್ಪತ್ರೆಗಳ ಬಾಗಿಲು ತಟ್ಟುವ ದುಸ್ಥಿತಿ ಮುಂದುವರಿಯಲಿದೆ.

ಜನರ ತೆರಿಗೆ ಹಣದಲ್ಲಿ ಆಸ್ಪತ್ರೆ ನಿರ್ಮಾಣವಾಗಿದೆ; ಆದರೆ ಆ ಆಸ್ಪತ್ರೆಯ ಸೇವೆ ಜನರಿಗೆ ದೊರೆಯುವುದು ಯಾವಾಗ? ಗರ್ಭಿಣಿಯರು ಮತ್ತು ಪುಟ್ಟ ಮಕ್ಕಳ ಆರೋಗ್ಯದ ವಿಚಾರದಲ್ಲಾದರೂ ಆಡಳಿತ ವ್ಯವಸ್ಥೆ ಇನ್ನೆಷ್ಟು ದಿನ ವಿಳಂಬ ಮಾಡಲಿದೆ? ಎಂಬ ಪ್ರಶ್ನೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉತ್ತರ ನೀಡಬೇಕಿದೆ.

ಇದನ್ನೂ ಓದಿ : ಮುಂಡಗೋಡ | ನೀರು ಕೇಳುವ ನೆಪದಲ್ಲಿ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿ

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಲ್ಕಿ | ಅಪಘಾತದಲ್ಲಿ ಮೃತಪಟ್ಟ ಹನುಮಂತ ಕುಟುಂಬಸ್ಥರಿಗೆ ಭೀಮರಾಜ್ ಸೇನೆ ನೆರವು

ರಸ್ತೆ ಅಪಘಾತದಲ್ಲಿ ಮೃತಪಟ್ಟ ಭಾಲ್ಕಿ ತಾಲೂಕಿನ ಕಣಜಿ ಗ್ರಾಮದ ಹನುಮಂತ ತಂದೆ...

ಮಂಡ್ಯ | ಭಾರತಕ್ಕಾಗಿ ಯುವಶಕ್ತಿ ಧ್ಯೇಯದಡಿ ಎನ್ಎಸ್ಎಸ್ ಶಿಬಿರ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ. ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ...

ಕೆರೆ ತುಂಬಿಸಲು ಅಜಿತ್ ಪವಾರ್ ಅವರನ್ನು ಕರೆತರಬೇಕೇ? – ವಿವಾದಕ್ಕೀಡಾದ ಆನಂದರಾಜ್ ಅಂಬೇಡ್ಕರ್ ಹೇಳಿಕೆ

ಮಹಾರಾಷ್ಟ್ರದ ಬರಗಾಲ ಮತ್ತು ಜಲ ಸಂರಕ್ಷಣಾ ನೀತಿಗಳ ಕುರಿತು ಟೀಕಿಸುವ ಭರದಲ್ಲಿ,...

ಬೀದರ್‌ | ಬಿದ್ರಿ ಕಲಾವಿದೆ ಶಾಂತಾಬಾಯಿ ಕಾಂಬಳೆಗೆ ನಿವೇಶನ, ಮನೆ, ಜಮೀನು ಮಂಜೂರಾತಿಗೆ ಒತ್ತಾಯ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ, ಹಿರಿಯ ಬಿದ್ರಿ ಕಲಾವಿದೆ ಶಾಂತಾಬಾಯಿ ಕಾಂಬಳೆ...