ರಾಯಚೂರು | ಜನಗಣತಿ ಪ್ರಜಾಪ್ರಭುತ್ವ ವ್ಯವಸ್ಥೆಯ ಬಲಪಡಿಸುವ ಬುನಾದಿ: ಜುಬಿನ್‌ ಮಹೋಪಾತ್ರ

Date:

ಜನಗಣತಿ ಎಂಬುವುದು ದೇಶದ ಅಭಿವೃದ್ಧಿ, ಪ್ರಗತಿ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಬುನಾದಿಯಾಗಿದೆ ಎಂದು ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮಹೋಪಾತ್ರ ಹೇಳಿದರು.

- Advertisement -

ಅವರಿಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಹಾನಗರ ಪಾಲಿಕೆಯಿಂದ ಹಮ್ಮಿಕೊಂಡಿದ್ದ ಭಾರತದ ಜನಗಣತಿ 2026ರ ಅಂಗವಾಗಿ ಗಣತಿದಾರರಿಗೆ ಹಾಗೂ ಮೇಲ್ವಿಚಾರಕರಿಗೆ ಮೊದಲನೇ ಹಂತದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಣತಿಯೆಂಬುದು ಸರ್ಕಾರದ ಒಂದು ಕಾರ್ಯಚಟುವಟಿಕೆಯಲ್ಲ. ಇದು ದೇಶದ ಸಮಗ್ರ ಅಭಿವೃದ್ಧಿಗೆ ಕಡ್ಡಾಯವಾಗಿ ಬೇಕಾಗಿರುವ ಅಂಕಿ ಅಂಶಗಳಾಗಿವೆ. ಗಣತಿ ಎಂಬುವುದು ಈಗಿನ ಚಟುವಟಿಕೆಯಲ್ಲ. ಪ್ರಾಚೀನ ಕಾಲದ ವೇದಗಳಲ್ಲಿಯೂ ಗಣತಿಯ ಬಗ್ಗ ಉಲ್ಲೇಖವಿದೆ ಎಂದರು.

ಗಣತಿಗಳು ಪ್ರತಿ ಹತ್ತು ವರ್ಷಗಳಿಗೊಮ್ಮೆ ಆಗುತ್ತದೆ. ಅದರಂತೆ 2011ರಲ್ಲಿ ಜನಗಣತಿಯಾಗಿತ್ತು. ನಂತರ 2021ರಲ್ಲಿ ಜನಗಣತಿಯಾಗಬೇಕಿತ್ತು. ಆದರೆ ಕೋವಿಡ್ ಸಂದರ್ಭವಿದ್ದರಿಂದ ಆಗಿರಲಿಲ್ಲ. ಇದೀಗ 15 ವರ್ಷಗಳ ನಂತರ ಜನಗಣತಿ ಆರಂಭವಾಗುತ್ತಿದ್ದು, ಪ್ರತಿಯೊಬ್ಬ ಗಣತಿದಾರರ ಮತ್ತು ಮೇಲ್ವಿಚಾರಕರೂ. ಶ್ರಮ ವಹಿಸಿ, ನಿಷ್ಠೆಯಿಂದ ಗಣತಿ ಕಾರ್ಯವನ್ನು ಮಾಡಬೇಕು ಎಂದರು.

ಇಂದಿನಿಂದ 45 ದಿನಗಳ ವರೆಗೆ ಮನೆ ಮನೆಗಳಿಗೆ ಗಣತಿದಾರರು ಹೋಗಿ ಕಟ್ಟಡಗಳು, ಕುಡಿಯುವ ನೀರಿನ ವ್ಯವಸ್ಥೆ, ರಸ್ತೆ, ಕುಟುಂಬಗಳ ಬದುಕಿನ ಅಂಶಗಳ ಮಾಹಿತಿಯನ್ನು ಸಂಗ್ರಹಿಸುತ್ತಾರೆ. ನಂತರ ಮಾಹಿತಿಗಳನ್ನು ಕ್ರೂಡಿಕರಿಸಿ, ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗುತ್ತದೆ. ಈ ವರದಿಯನ್ನು ಆದರಿಸಿ, ಜನರಿಗೆ ಉತ್ತಮ ಸೌಲಭ್ಯಗಳನ್ನು ನೀಡಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ದೇಶವು ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದೆ. ದೇಶದಲ್ಲಿ ಮೊದಲ ಬಾರಿಗೆ 1872ರಲ್ಲಿ ಜನಗಣತಿಯನ್ನು ಮಾಡಲಾಗಿತ್ತು. ಅದು ದಾಖಲೆಯ ಗಣತಿಯಾಗಿತ್ತು. ನಂತರ 1921ರಲ್ಲಿ ಮಾದರಿ ಗಣತಿಯಾಗಿದ್ದು, 2021ಕ್ಕೆ ಮಾದರಿ ಗಣತಿಯು 100 ವರ್ಷಗಳನ್ನು ಪೂರ್ಣಗೊಳಿಸಿದ್ದು, ಅದಾದ ನಂತರ ಇದೀಗ ಮತ್ತೆ ಜನಗಣತಿ ಆರಂಭವಾಗುತ್ತಿದೆ. ಈ ಬಾರಿಯ ಗಣತಿ ಡಿಜಿಟಲ್ ಆಗಿರುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ರಾಯಚೂರು | ಬಿಸಿಲಿನ ತಾಪ ಹೆಚ್ಚಳ; ಸರ್ಕಾರಿ ಕಚೇರಿ ಸಮಯದಲ್ಲಿ ಎರಡು ತಿಂಗಳ ಬದಲಾವಣೆ

ಗಣತಿ ಕಾರ್ಯ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಯಾರೂ ಕೂಡ ನಿರ್ಲಕ್ಷ್ಯವಹಿಸದೇ, ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಪಾಲಿಕೆಯ ಉಪ ಆಯುಕ್ತ ಶರಣಪ್ಪ ಸತ್ಯಂಪೇಟ್, ಸದಸ್ಯ ಕಾರ್ಯದರ್ಶಿ ಕೃಷ್ಣ ಶಾವಂತಗೇರ, ವಲಯ ಆಯುಕ್ತ ಮಲ್ಲಿಕಾರ್ಜುನ, ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೋಸಗಿ, ಕಂದಾಯ ಅಧಿಕಾರಿಗಳಾದ ರವಿ.ಎಸ್.ಅಂಗಡಿ, ಶಂಶಾಲA ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಭಸ್ಮ

ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...