ರಾಯಚೂರು | ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ; ರವಿ ಬೋಸರಾಜು ವಿರುದ್ಧ ಮುಸ್ಲಿಂ ನಾಯಕರ ಗಂಭೀರ ಆರೋಪ

Date:

ರಾಯಚೂರು ಜಿಲ್ಲಾ ಕಾಂಗ್ರೆಸ್‌ನಲ್ಲಿನ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ರವಿ ಬೋಸರಾಜು ವಿರುದ್ಧ ಅಲ್ಪಸಂಖ್ಯಾತ ಸಮುದಾಯದ ನಾಯಕರು ಗಂಭೀರ ಆರೋಪ ಮಾಡುತ್ತಿದ್ದಾರೆ. ʼಮುಸ್ಲಿಂ ಪರ ಎಂದು ಪೋಸು ನೀಡುವ ರವಿ ಬೋಸರಾಜು ಅವರು ವಾಸ್ತವದಲ್ಲಿ ಸಮುದಾಯದ ಬೆಳವಣಿಗೆಯನ್ನು ತುಳಿಯುತ್ತಿದ್ದಾರೆʼ ಎಂದು ಅವರು ಕಿಡಿಕಾರಿದ್ದಾರೆ.

- Advertisement -

ಕಳೆದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಮಹ್ಮದ್ ಶಾಲಂ ಅವರನ್ನು ಕೇವಲ ಮುಸ್ಲಿಂ ಏರಿಯಾಗಳಿಗೆ ಸೀಮಿತಗೊಳಿಸಿ, ಬೇರೆ ಸಮುದಾಯದ ಬಡಾವಣೆಗಳಿಗೆ ಪ್ರಚಾರಕ್ಕೆ ಹೋಗದಂತೆ ತಡೆಯಲಾಯಿತು. ಈ ಕುರಿತು ಬೋಸರಾಜು ಅವರಿಗೆ ಮಾಹಿತಿ ನೀಡದಂತೆ ಜಾಗರೂಕತೆ ವಹಿಸಲಾಗಿತ್ತು. ಅಭ್ಯರ್ಥಿ ಕೇವಲ 3000 ಮತಗಳಿಂದ ಸೋತಾಗ, ಹೈಕಮಾಂಡ್ ನಾಯಕ ವೇಣುಗೋಪಾಲ್ ಅವರು ರವಿ ಬೋಸರಾಜು ಅವರಿಗೆ ʼಮುಂದಿನ ಚುನಾವಣೆಯ ಸಿದ್ಧತೆಗಾಗಿ ನೀನೇ ಅಭ್ಯರ್ಥಿಯನ್ನು ಸೋಲಿಸಿದ್ದೀಯಾʼ ಎಂದು ನೇರವಾಗಿ ಪ್ರಶ್ನಿಸಿದ್ದರು ಎನ್ನುವುದು ಈಗ ಚರ್ಚೆಯಾಗುತ್ತಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಮುಸ್ಲಿಂ ಸಮುದಾಯದ ಅಧಿಕಾರಿಗಳಿಗೂ ಕೆಲಸ ಮಾಡಲು ಬಿಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ʼಲೋಕಸಭಾ ಚುನಾವಣೆ ವೇಳೆ ಬಂದಿದ್ದ ರೋಷನ್ ಜಮೀರ್ ಎಂಬ ಅಧಿಕಾರಿಗೆ ಕೇವಲ ಮೂರು ತಿಂಗಳು ಮಾತ್ರ ಅವಕಾಶ ನೀಡಿ ವಾಪಸ್ ಕಳುಹಿಸಲಾಗಿದೆ. ಇನ್ನು ನೂರು ಎಕರೆ ವಕ್ಫ್ ಆಸ್ತಿ ಕಬಳಿಸಿರುವ ವೀರಭದ್ರ ಎಂಬುವವರನ್ನು ರಕ್ಷಿಸಲು ವಕ್ಫ್ ಬೋರ್ಡ್‌ಗೆ ಡಮ್ಮಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಕೇವಲ ಮುಸ್ಲಿಂ ಸಮುದಾಯಕ್ಕೆ ಕಿಟ್ ಹಂಚಿರುವುದು ಕೇವಲ ಚುನಾವಣಾ ಗಿಮಿಕ್ ಆಗಿದೆ. ʼಹಿಂದೂ ಬಡವರು ಜಿಲ್ಲೆಯಲ್ಲಿ ಇಲ್ಲವೇ? ಎರಡೂ ಸಮುದಾಯದವರು ಒಟ್ಟಾಗಿ ಬಾಳುವಾಗ ಕೇವಲ ಒಂದು ಸಮುದಾಯಕ್ಕೆ ಕಿಟ್ ನೀಡಿ ಸಮಾಜದಲ್ಲಿ ತಪ್ಪು ಅಭಿಪ್ರಾಯ ಮೂಡಿಸಲಾಗುತ್ತಿದೆʼ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ರಾಯಚೂರು | ಬಿಸಿಲಿನ ತಾಪ ಹೆಚ್ಚಳ; ಸರ್ಕಾರಿ ಕಚೇರಿ ಸಮಯದಲ್ಲಿ ಎರಡು ತಿಂಗಳ ಬದಲಾವಣೆ

ನಿಮಗೆ ನಿಜವಾಗಿಯೂ ಮುಸ್ಲಿಂ ಸಮುದಾಯದ ಮೇಲೆ ಕಾಳಜಿ ಇದ್ದರೆ, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಕೊಡಿಸುವುದಾಗಿ ಪ್ರಮಾಣ ಮಾಡಿ ಹೇಳಲಿ. ನನಗೆ ಟಿಕೆಟ್ ಬೇಡ ಎಂದು ರವಿ ಬೋಸರಾಜು ಸ್ಪಷ್ಟಪಡಿಸಲಿ ಎಂದು ಬಹಿರಂಗ ಸವಾಲು ಹಾಕಿದ್ದಾರೆ. ಹಿಟ್ಲರ್ ಸಂಸ್ಕೃತಿ ಬಿಟ್ಟು ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಮಗೆ ಟಿಕೆಟ್ ತಪ್ಪಿಸಲು ರವಿ ಬೋಸರಾಜು ಕಾರಣ ಎಂದು ಹೇಳಿದ್ದಾರೆ. ಅಹಿಂದ ಹೆಸರಿನಲ್ಲಿ ಹಿಂದುಳಿದ ಸಮುದಾಯಗಳನ್ನು ದಾರಿತಪ್ಪಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ತಕ್ಷಣ ಮಧ್ಯಪ್ರವೇಶಿಸಿ ಜನಸಂಖ್ಯೆ ಆಧಾರದ ಮೇಲೆ ಮುಸ್ಲಿಂ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಮುದಾಯವು ಕಾಂಗ್ರೆಸ್ ಕೈಬಿಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಾಂಜಾ ಮಾರಾಟ ಪ್ರಕರಣ: ಮೂವರು ಆರೋಪಿಗಳಿಗೆ ತಲಾ 1 ವರ್ಷ ಜೈಲು, ₹25 ಸಾವಿರ ದಂಡ

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ...

ರಾಯಚೂರು | ಮದರಕಲ್ ಅಂಬಾ ಮಠದ ವಿರುದ್ಧ ಸುಳ್ಳು ಆರೋಪ: ಅಮರೇಶ್ ಪಾಟೀಲ್

ದೇವದುರ್ಗ ತಾಲ್ಲೂಕು ಮದರಕಲ್‌ ಗ್ರಾಮದ ಅವದೂತ ರಾಜಯೋಗಿ ಸಂತ ನಾಮದೇವಗೌಡ ಶರಣರ...

ರಾಯಚೂರು | ಪೋತ್ನಾಳ ಹಳ್ಳಕ್ಕೆ ನೀರು ಹರಿಸಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಅಮೀನ್ ಪಾಷಾ ದಿದ್ದಗಿ

ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಜನರು ಹಾಗೂ ಜಾನುವಾರುಗಳಿಗೆ...

ರಾಯಚೂರು | ಕಸದ ರಾಶಿಯಲ್ಲಿ ಆರೋಗ್ಯ ಇಲಾಖೆಯ ಔಷಧಿಗಳು ಪತ್ತೆ

ನಗರದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಕೋಟೆಯ ಕಂದಕದ ಬಳಿ ಆರೋಗ್ಯ ಇಲಾಖೆಗೆ...