ರಾಯಚೂರು | ಹೆದ್ದಾರಿ ಕಾಮಗಾರಿಗೆ ಸರ್ವಿಸ್ ರಸ್ತೆಗೆ ರೈತರ ಆಗ್ರಹ: ಪೊಲೀಸ್ ಬಂದೋಬಸ್ತ್

Date:

ಮಸ್ಕಿ ತಾಲ್ಲೂಕಿನ ಗೋನವಾರ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಭಾರತಮಾಲಾ ಯೋಜನೆಯಡಿ ನಿರ್ಮಾಣವಾಗುತ್ತಿರುವ 748(ಎ) ಬೆಳಗಾವಿ-ಹೈದರಾಬಾದ್ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸರ್ವಿಸ್ ರಸ್ತೆ, ಹೆಚ್ಚುವರಿ ಸೇತುವೆ ನಿರ್ಮಾಣ ಹಾಗೂ ಬೆಳೆ ಪರಿಹಾರಕ್ಕೆ ಆಗ್ರಹಿಸಿ ರೈತರು ಕಾಮಗಾರಿಗೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದರು.

- Advertisement -

ಗೋನವಾರ ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಕೃಷಿ ಜಮೀನುಗಳಿಗೆ ತೆರಳಲು ಸೇತುವೆ ಹಾಗೂ ಸರ್ವಿಸ್ ರಸ್ತೆ ನಿರ್ಮಿಸುವಂತೆ ಸುಮಾರು ಬಾರಿ ಪ್ರತಿಭಟನೆ ಮಾಡಿದರು ಒತ್ತಾಯದಿಂದ ಒಕ್ಕೆಲೆಬ್ಬಿಸುತ್ತಿದ್ದಾರೆ. ಹೆದ್ದಾರಿ ಕಾಮಗಾರಿಯಿಂದ ಗ್ರಾಮಸ್ಥರು ಹಾಗೂ ರೈತರಿಗೆ ಕೃಷಿ ಜಮೀನುಗಳಿಗೆ ತೆರಳಲು ತೊಂದರೆಯಾಗಲಿದೆ. ಜಮೀನುಗಳ ನಡುವೆ ಸಂಚಾರ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದ್ದು, ಮಳೆಗಾಲದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಹೆದ್ದಾರಿ ಕಾಮಗಾರಿಯಿಂದ ಹಲವು ಎಕರೆ ಪ್ರದೇಶದ ಬೆಳೆಗಳಿಗೆ ಹಾನಿಯಾಗಿದ್ದು, ಕೆಲವೆಡೆ ಹೊಲಗಳಿಗೆ ಹೋಗುವ ಸಾಂಪ್ರದಾಯಿಕ ಮಾರ್ಗಗಳು ಮುಚ್ಚಲ್ಪಟ್ಟಿವೆ. ಈಗಾಗಲೇ ನಿರ್ಮಿಸಿರುವ ಯೋಜನಾ ವಿನ್ಯಾಸದಲ್ಲಿ ರೈತರ ಸಮಸ್ಯೆಗಳಿಗೆ ಸಮರ್ಪಕ ಪರಿಹಾರ ಕಲ್ಪಿಸಿಲ್ಲ ಎಂದು ಅಧಿಕಾರಿಗಳ ಗಮನಕ್ಕೆ ತಂದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಸ್ಥಳಕ್ಕೆ ಸಹಾಯಕ ಆಯುಕ್ತ ಬಸವಣ್ಣೆಪ್ಪ ಕಲ್ಲಶೆಟ್ಟಿ, ತಹಶೀಲ್ದಾರ್ ಮಂಜುನಾಥ ಬೋಗಾವತಿ, ಡಿವೈಎಸ್‌ಪಿ ದತ್ತಾತ್ರೇಯ ಕರ್ನಾಡ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ ರೈತರೊಂದಿಗೆ ಸುದೀರ್ಘ ಮಾತುಕತೆ ನಡೆಸಿದರು.

ಅಧಿಕಾರಿಗಳ ಭರವಸೆಯ ಬಳಿಕ ಪ್ರತಿಭಟನಾ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ತಿಳಿಗೊಂಡಿತು. ರೈತರು ತಾತ್ಕಾಲಿಕವಾಗಿ ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದು, ನೀಡಿದ ಭರವಸೆಗಳನ್ನು ಶೀಘ್ರದಲ್ಲಿ ಅನುಷ್ಠಾನಗೊಳಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಐದನಾಳ ಎಸ್‌ಸಿ ವಾರ್ಡ್‌ನಲ್ಲಿ ರಸ್ತೆ-ಚರಂಡಿ ದುರಸ್ತಿಗೆ ಮಹಿಳೆಯರ ಮನವಿ

ಪ್ರತಿಭಟನೆಯಲ್ಲಿ ಗೋನವಾರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು, ರೈತ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದಲ್ಲಿ ಪರೀಕ್ಷಾ ಅಕ್ರಮ: KSOU ಕೇಂದ್ರದಲ್ಲಿ ಪುಸ್ತಕ, ಮೊಬೈಲ್ ಬಳಸಿ ‘ಕಾಪಿ’ ಮಾಡಲು ಅವಕಾಶ; ವಿಡಿಯೋ ವೈರಲ್

ಶಿವಮೊಗ್ಗದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಪರೀಕ್ಷಾ ಕೇಂದ್ರದಲ್ಲಿ...

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗಣಂಗೂರು ಟೋಲ್‌ನಲ್ಲಿ ರೈತರಿಂದ ಹೆದ್ದಾರಿ ತಡೆ

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವುದು, ಸಕ್ಕರೆ ಬೆಲೆ ಪರಿಷ್ಕರಣೆ, ಕಳೆದ ಸಾಲಿನ...

ಕರ್ನಾಟಕ ಪಶ್ಚಿಮ ಪದವೀಧರ ಚುನಾವಣೆ: ಜಿಲ್ಲೆಗಳಲ್ಲಿ  ಶೇ.75.62 ರಷ್ಟು ಮತದಾನ

"ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಮತ್ತು...

ಗದಗ | ಇಂದು ಅಮರ ಮಹಾವೀರ ಕವನ ಸಂಕಲನ ಲೋಕಾರ್ಪಣೆ

ಅಮರ ಮಾಹಾವೀರ ಕವನ ಸಂಕಲನ ಲೋಕಾರ್ಪಣೆ ಸಮಾರಂಭದಲ್ಲಿ ಕವನ ಸ್ಪರ್ಧೆಗಳಲ್ಲಿನ ವಿಜೇತರಿಗೆ...