ರಾಯಚೂರು | ರೈತರಿಗೆ ಉದ್ಯೋಗ, ಭೂ ಪರಿಹಾರಕ್ಕೆ ಆಗ್ರಹಿಸಿ ಹಟ್ಟಿ ಚಿನ್ನದ ಗಣಿ ಮುಂದೆ ಪ್ರತಿಭಟನೆ

Date:

ಹಟ್ಟಿ ಚಿನ್ನದ ಗಣಿ ಕಂಪನಿಯು ರೈತರಿಗೆ ಉದ್ಯೋಗ ಹಾಗೂ ಭೂ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆಗ್ರಹಿಸಿ ಭೂ ಹಕ್ಕು ವಂಚಿತ ಹೋರಾಟ ಸಮಿತಿ ಪದಾಧಿಕಾರಿಗಳು ಹಾಗೂ ರೈತರು ಶುಕ್ರವಾರ ಗಣಿ ಕಂಪನಿ ಮುಂದೆ ಪ್ರತಿಭಟನೆ ನಡೆಸಿದರು.

- Advertisement -

ರೈತರ 450 ಎಕರೆ ಭೂಮಿಯಲ್ಲಿ ಗಣಿ ಕಂಪನಿಯ ಹೆಸರು ನಮೂದಿಸಲಾಗಿದೆ. ಜಮೀನು ಮಾರಾಟ, ಬ್ಯಾಂಕ್‌ ಸಾಲ, ಇತರೆ ಸೌಲಭ್ಯ ಪಡೆಯಲು ರೈತರಿಗೆ ಸಾಧ್ಯವಾಗುತ್ತಿಲ್ಲ. ಅದನ್ನು ಸರಿಪಡಿಸಿ ಎಂದು ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಪ್ರತಿಭಟನಾ ಸ್ಥಳಕ್ಕೆ ಪಿಐ ಶಿವಾನಂದ ಧಾವಿಸಿ, ಸಮಸ್ಯೆ ಆಲಿಸುವಾಗ ರೈತರ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ನಮ್ಮ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದೇವೆ. ಸಾವು-ನೋವು ಸಂಭವಿಸಿದರೆ ಗಣಿ ಕಂಪನಿ ಅಧಿಕಾರಿಗಳು ಹೊಣೆ’ ಎಂದರು.

ಸಂಧಾನ ವಿಫಲ-ಹೋರಾಟ ಮುಂದು ವರಿಕೆ: ಕಂಪನಿ ಹಿರಿಯ ವ್ಯವಸ್ಥಾಪಕ ಯಮನೂರಪ್ಪ ಪ್ರತಿಭಟನಾ ಸ್ಥಳಕ್ಕೆ ಬಂದು, ವ್ಯವಸ್ಥಾಪಕ ನಿರ್ದೇಶಕರಿಗೆ ಸಮಸ್ಯೆ ಬಗ್ಗೆ ತಿಳಿಸಲಾಗಿದೆ. ನಿಯೋಗ ರಚಿಸಿ, ಕಂಪನಿ ಅಧ್ಯಕ್ಷರ ನೇತೃತ್ವದಲ್ಲಿ ಮುಖ್ಯಮಂತ್ರಿ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಲಾಗುವುದು ಎಂದರು.

ಇದಕ್ಕೆ ಒಪ್ಪದ ರೈತರು ಮೌಖಿಕವಾಗಿ ಬೇಡ, ಲಿಖಿತ ರೂಪದಲ್ಲಿ ಕೊಡಿ ಎಂದು ರೈತರು ಪಟ್ಟು ಹಿಡಿದರು. ರೈತರ ಮನವೊಲಿಸುವಲ್ಲಿ ಗಣಿಕಂಪನಿ ಅಧಿಕಾರಿಗಳು ವಿಫಲರಾದರು. ನಮ್ಮ ಹಕ್ಕು ಸಿಗುವರೆಗೂ ಹೋರಾಟ ನಿಲ್ಲದು. ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಹಾಗೂ ಭೂ ಪರಿಹಾರ ಒದಗಿಸಿಕೊಡಬೇಕು ಎಂದು ರೈತರು ಪಟ್ಟುಹಿಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ: ರವಿಹಂಜ ಬಂಧನಕ್ಕೆ ಲಿಂಗಾಯತ ಮಹಾಸಭಾ ಆಗ್ರಹ

ಭೂ ಹಕ್ಕು ವಂಚಿತ ಹೋರಾಟ ಸಮಿತಿ ಪದಾಧಿಕಾರಿಗಳಾದ ಶಿವಾನಂದ, ಶಿವಪುತ್ರಪ್ಪ, ಬಾಬು ನಾಯಿಕೊಡಿ, ಯಂಕೋಬ ಪವಾಡೆ, ಮಹಿಳೆಯರಾದ ಈರಮ್ಮ ಸರಸ್ವತಿ, ಸಿಂಧು, ಗಣಿ ಕಂಪನಿ ವಿವಿರ ಇಲಾಖೆ ಅಧಿಕಾರಿಗಳಾದ ವಿಧಾತ್ರಿ, ಜಗನ್ ಮೋಹನ್, ರಮೇಶ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಕನ್ನಡ-ಬ್ಯಾರಿ ನಿಘಂಟು: ಮುದ್ರಣ ಪೂರ್ವ ಪ್ರತಿ ಹಸ್ತಾಂತರ

ಕಳೆದ ಒಂದು ವರ್ಷದಿಂದ ಬ್ಯಾರಿ ಸಮುದಾಯದ ಸುಮಾರು 20ಕ್ಕೂ ಹೆಚ್ಚು ಬರಹಗಾರರ...

ಕನ್ನಡ ಭಾಷೆ, ಸಂಸ್ಕೃತಿ ಉಳಿಸುವುದು ಎಲ್ಲರ ಹೊಣೆ: ಎ.ಎಸ್. ಪೊನ್ನಣ್ಣ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ...

SIR | ಜ. 20ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ; ಆಕ್ಷೇಪಣಾ ಅರ್ಜಿ ಸಲ್ಲಿಕೆಗೆ ಡಿ. 31 ಕೊನೆಯ ದಿನ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2027ನೇ ಸಾಲಿನ ಮತದಾರರ ಪಟ್ಟಿಯ ವಿಶೇಷ...

ಬಾಗಲಕೋಟೆ |ರೈತರನ್ನು ಸಬಲರನ್ನಾಗಿಸಿದಾಗ ತೋಟಗಾರಿಕೆ ವಿವಿ ಸ್ಥಾಪನೆಯ ಉದ್ದೇಶ ಸಾರ್ಥಕ;ಆರ್. ಗಿರೀಶ್

ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸಿ, ತೋಟಗಾರಿಕೆಯಲ್ಲಿ ಯುವಕರಿಗೆ ಉದ್ಯಮಶೀಲತೆಯ ಅವಕಾಶ ಕಲ್ಪಿಸಿದಾಗ ಮಾತ್ರ...