ರಾಯಚೂರು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ, ಗ್ರೇಡ್-1 ತಹಶೀಲ್ದಾರ್ ಸುರೇಶ್ ವರ್ಮಾ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಯಚೂರು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ ಅವರನ್ನು ಧಾರವಾಡದಲ್ಲಿರುವ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕೇಂದ್ರ ಕಚೇರಿಯ ಮುಖ್ಯ ಆಡಳಿತಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ರಾಯಚೂರು ಮಹಾನಗರ ಪಾಲಿಕೆಯ ತಹಶೀಲ್ದಾರ್ ಸಂತೋಷ್ ರಾಣಿ ಅವರನ್ನು ಕಲಬುರಗಿ ಜಿಲ್ಲಾ ಪಂಚಾಯಿತಿಯ ಸಹಾಯಕ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಲಾಗಿದೆ. ರಾಯಚೂರು ತಾಲ್ಲೂಕಿನ ಗ್ರೇಡ್-1 ತಹಶೀಲ್ದಾರ್ ಸುರೇಶ್ ವರ್ಮಾ ಅವರನ್ನು ದೇವದುರ್ಗದ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ದೇವದುರ್ಗದ ಗ್ರೇಡ್-1 ತಹಶೀಲ್ದಾರ್ ನಾಗಮ್ಮ ಅವರನ್ನು ಕೊಪ್ಪಳ ಜಿಲ್ಲಾ ಪಂಚಾಯಿತಿಯ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಲಾಗಿದೆ. ಸಿಂಧನೂರಿನ ಮುನಿರಾಬಾದ್-ಮೆಹಬೂಬನಗರ ರೈಲು ಮಾರ್ಗ ಯೋಜನೆಯ ವಿಶೇಷ ತಹಶೀಲ್ದಾರ್ ಹಾಗೂ ವಿಶೇಷ ಭೂಸ್ವಾಧೀನಾಧಿಕಾರಿ ಶ್ರುತಿ ಅವರನ್ನು ರಾಯಚೂರು ಜಿಲ್ಲಾ ಪಂಚಾಯಿತಿಯ ಸಹಾಯಕ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಅವರ ತೆರವಾದ ಸ್ಥಾನಕ್ಕೆ ಚಿತ್ತಾಪುರದ ಗ್ರೇಡ್-1 ತಹಶೀಲ್ದಾರ್ ನಾಗಯ್ಯ ಅವರನ್ನು ನೇಮಕ ಮಾಡಲಾಗಿದೆ.
ಶಾಲಾ ಶಿಕ್ಷಣ ಇಲಾಖೆಯ (ಆಡಳಿತ) ಉಪನಿರ್ದೇಶಕ ಮಲ್ಲಿಕಾರ್ಜುನ ಅವರನ್ನು ಕಲಬುರಗಿಯ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯ ಜಂಟಿ ನಿರ್ದೇಶಕ (ಪರೀಕ್ಷೆ) ಹುದ್ದೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ರಕ್ತನಿಧಿ ಕೇಂದ್ರ ಸ್ಥಾಪನೆ ಜೀವ ರಕ್ಷಣೆಯ ಮಹತ್ವದ ಕಾರ್ಯ: ಸಂಸದ ಜಿ.ಕುಮಾರ ನಾಯಕ
ಇದೇ ವೇಳೆ, ಜಮಖಂಡಿಯ ಬಾಗಲಕೋಟೆ ವಿಶ್ವವಿದ್ಯಾಲಯದ ಕುಲಸಚಿವ ಸೋಮಲಿಂಗ ಗೋಪಾಲ ಗೆಣ್ಣೂರ ಅವರನ್ನು ತೆರವಾದ ಹುದ್ದೆಗೆ ನೇಮಕ ಮಾಡಲಾಗಿದೆ.





