ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

Date:

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಸೂಚಿಸಿದರು.

- Advertisement -

ನಗರದ ಸಿಯಾತಲಾಬ್ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ತಾಲೂಕು ನಿಯಂತ್ರಣ ಸಮಿತಿಯ ಸಮನ್ವಯ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಂಜಾಬ್ ಚುನಾವಣೆ | 6 ವರ್ಷಗಳ ಬಳಿಕ ಮತ್ತೆ...

2020ರ ಐತಿಹಾಸಿಕ ರೈತ ಹೋರಾಟದ ವೇಳೆ ಮುರಿದುಬಿದ್ದಿದ್ದ ಶಿರೋಮಣಿ ಅಕಾಲಿ ದಳ (SAD) ಮತ್ತು ಬಿಜೆಪಿ  ಮೈತ್ರಿ ಆರು ವರ್ಷಗಳ ಬಳಿಕ ಮತ್ತೆ ಜೀವ ಪಡೆದುಕೊಂಡಿದೆ. 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ...

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರತ್ಯಕ್ಷದರ್ಶಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್‌ಗೆ ಕಾನೂನು ಕುಣಿಕೆಯಿಂದ ಮುಕ್ತಿ ಸಿಗುತ್ತದೆಯೇ? ಪೊಲೀಸರು...

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ...

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳು ಪ್ರತಿದಿನ ತೊಂದರೆ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕನಿಷ್ಠ ಅಗತ್ಯಗಳ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ...

ಬಾಲ್ಯವಿವಾಹದಿಂದ ಮಕ್ಕಳ ಶಿಕ್ಷಣ ಮತ್ತು ಭವಿಷ್ಯದ ಮೇಲೆ ಉಂಟಾಗುವ ಪರಿಣಾಮಗಳ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸಬೇಕು. ಶಾಲೆಗಳಿಗೆ ನಿರಂತರವಾಗಿ ಗೈರುಹಾಜರಾಗುವ ಮಕ್ಕಳ ಬಗ್ಗೆ ಶಿಕ್ಷಕರು ವಿಶೇಷ ಗಮನಹರಿಸಿ, ಮನೆಗಳಿಗೆ ಭೇಟಿ ನೀಡಿ ಪೋಷಕರೊಂದಿಗೆ ಸಮನ್ವಯ ಸಾಧಿಸಬೇಕು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಬಾಲ್ಯವಿವಾಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತರಬೇಕು ಎಂದು ತಿಳಿಸಿದರು.

ದೌರ್ಜನ್ಯ ಪ್ರಕರಣಗಳ ಸಂತ್ರಸ್ತರಿಗೆ ತ್ವರಿತ ನ್ಯಾಯ, ರಕ್ಷಣೆ, ಪರಿಹಾರ ಹಾಗೂ ಪುನರ್ವಸತಿ ಸೌಲಭ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ದೌರ್ಜನ್ಯ ತಡೆ ಕಾಯ್ದೆಯಡಿ ದೊರೆಯುವ ಕಾನೂನು ರಕ್ಷಣೆ ಮತ್ತು ಸರ್ಕಾರಿ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಸಿಯಾತಲಾಬ್ ವ್ಯಾಪ್ತಿಯಲ್ಲಿ ಕಂಡುಬರುತ್ತಿರುವ ವ್ಯಸನದ ಸಮಸ್ಯೆ ನಿವಾರಣೆಗೆ ಆರೋಗ್ಯ ಇಲಾಖೆಯಿಂದ ಅಗತ್ಯ ಚಿಕಿತ್ಸೆ ಮತ್ತು ನೆರವು ಒದಗಿಸಲಾಗುವುದು. ತುರ್ತು ಸಂದರ್ಭಗಳಲ್ಲಿ ಪೊಲೀಸ್ ಸಹಾಯವಾಣಿ 112 ಹಾಗೂ ಮಕ್ಕಳ ಸಹಾಯವಾಣಿ 1098 ಅನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ ಭಯದಲ್ಲಿ ವಿದ್ಯಾರ್ಥಿಗಳು!

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ರಾಯಚೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ಈಶ್ವರ ಕುಮಾರ್ ಕಾಂದೂ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸುಸ್ಥಿರ ಕೃಷಿ ಮತ್ತು ಹವಾಮಾನ ಸ್ಥಿತಿಸ್ಥಾಪಕತೆಗೆ ಒತ್ತು: ನ.25ರಿಂದ ರಾಷ್ಟ್ರೀಯ ಸಮ್ಮೇಳನ

ಸುಸ್ಥಿರ ಮತ್ತು ಹವಾಮಾನ ಸ್ಥಿತಿಸ್ಥಾಪಕ ಕೃಷಿಯಲ್ಲಿ ಸಸ್ಯ ಆರೋಗ್ಯ, ರೋಗ ನಿರ್ವಹಣೆ...

ರಾಯಚೂರು | ಕೊತ್ತಪೇಟೆಯಲ್ಲಿ 450 ಕೆ.ಜಿ. ಅಕ್ರಮ ಪಡಿತರ ಅಕ್ಕಿ ಜಪ್ತಿ

ನಗರದ ಕೊತ್ತಪೇಟೆ ಪ್ರದೇಶದ ಕೊರವರ ಓಣಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 450...

ಬಂಗಾರಪೇಟೆ | ಕೇಂದ್ರ ಸಚಿವ ಕುಮಾರಸ್ವಾಮಿ ನಾಮಫಲಕ ತೆರವು: ಯಲುವಗುಳಿ ನಾಗರಾಜ್ ಖಂಡನೆ

ಮಂಡ್ಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕೇಂದ್ರ ಸಚಿವ...

ಚಿಂತಾಮಣಿ | ಅನ್ನದಾತರ ಭೂಮಿಗೆ ಅರಣ್ಯ ಇಲಾಖೆ ಕಾಂಪೌಂಡ್: ಭುಗಿಲೆದ್ದ ರೈತರ ಆಕ್ರೋಶ!

ತಾಲೂಕಿನಾದ್ಯಂತ ನೂರಾರು ವರ್ಷಗಳಿಂದ ರೈತರು ಸಾಗುವಳಿ ಮಾಡಿಕೊಂಡು ಬರುತ್ತಿರುವ, lಖಾತೆ ಹಾಗೂ...