ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

Date:

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ ಅಧಿಕ ಮೊತ್ತದ ಅವ್ಯವಹಾರ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

- Advertisement -

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಿಂಧನೂರು ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ಯಾಮಸುಂದರ ಕಾಳೇಕರ್ ಅವರು 15 ದಿನಗಳ ರಜೆಯಲ್ಲಿದ್ದ ಸಂದರ್ಭದಲ್ಲಿ, ಅವರ ಸ್ಥಾನಕ್ಕೆ ಪ್ರಭಾರ ವಹಿಸಿಕೊಂಡಿದ್ದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರು 18ಕ್ಕೂ ಹೆಚ್ಚು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಹಲವು ಪತ್ರ ವ್ಯವಹಾರ ನಡೆಸಿದ್ದರು. ಈ ವೇಳೆ ಸುಮಾರು ₹10 ಕೋಟಿ ಮೊತ್ತದ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಕುರಿತು ನಡೆಸಿದ ತನಿಖೆಯಲ್ಲಿ ಅಧಿಕಾರ ದುರುಪಯೋಗ ಹಾಗೂ ಅವ್ಯವಹಾರ ನಡೆದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸೆ.28ರಂದು ನಾಗರಾಜ ಪ್ರಭಾ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೊರಡಿಸಿದ್ದಾರೆ.

ಪ್ರಕರಣದ ಹಿನ್ನೆಲೆ :ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ಯಾಮಸುಂದರ ಕಾಳೇಕರ್ ಅವರು 2024ರ ಜೂನ್ 20ರಿಂದ ಜುಲೈ 5ರವರೆಗೆ ರಜೆಯಲ್ಲಿದ್ದ ಸಂದರ್ಭದಲ್ಲಿ ನಾಗರಾಜ ಪ್ರಭಾ ಅವರಿಗೆ 15 ದಿನಗಳ ಪ್ರಭಾರ ನೀಡಲಾಗಿತ್ತು. ಈ ವೇಳೆ ನಾಗರಾಜ ಪ್ರಭಾ ಅವರ ವಿರುದ್ಧ ಈಗಾಗಲೇ ಕಚೇರಿ ಮಟ್ಟದಲ್ಲಿ ಹಲವು ದೂರುಗಳು ಹಾಗೂ ವಿಚಾರಣೆಗಳು ಬಾಕಿ ಇದ್ದವು. ಸರ್ಕಾರದ ಹಂತದಲ್ಲಿಯೂ ಗಂಭೀರ ಸ್ವರೂಪದ ವಿಚಾರಣೆ ಬಾಕಿ ಇರುವಾಗಲೇ ಅವರಿಗೆ ಪ್ರಭಾರ ಜವಾಬ್ದಾರಿ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಶ್ಯಾಮಸುಂದರ ಕಾಳೇಕ‌ರ್ ರಜೆಯಲ್ಲಿದ್ದ ಸಂದರ್ಭದಲ್ಲಿ ನಾಗರಾಜ ಪ್ರಭಾ ಅವರು ಸಿಇಒ ಅವರ ಲಿಖಿತ ಆದೇಶವಿಲ್ಲದೆ ತೊಟ್ಟಿ ಸಿಟಿಸಿ ಸೃಷ್ಟಿಸಿ ಪ್ರಭಾರ ವಹಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ನಿಯಮಗಳ ಪ್ರಕಾರ ಶಿಸ್ತು ಕ್ರಮ ಅಥವಾ ವಿಚಾರಣೆ ಬಾಕಿ ಇರುವ ಅಧಿಕಾರಿಯನ್ನು ಹಣಕಾಸು ಹೊಣೆಗಾರಿಕೆ ಹೊಂದಿರುವ ಹುದ್ದೆಯಿಂದ ದೂರ ಇಲ್ಲಿ ಸಬೇಕಾಗುತ್ತದೆ. ಆದರೆ ನಾಗರಾಜ ಪ್ರಭಾ ಅವರ ವಿಚಾರದಲ್ಲಿ ಈ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿದೆ.

ಸಹಾಯಕ ಕಾರ್ಯಪಾಲಕ ಅಭಿಯಂತರ ಲಭ್ಯವಿದ್ದ ಸಂದರ್ಭದಲ್ಲಿ ಕಿರಿಯ ಅಭಿಯಂತರರಿಗೆ ಪ್ರಭಾರ ನೀಡಲು ಅವಕಾಶವಿಲ್ಲದಿದ್ದರೂ ನಾಗರಾಜ ಪ್ರಭಾ ಅವರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ಆರೋಪಿಸಲಾಗಿದ್ದು, ಇದೇ ಅವಕಾಶವನ್ನು ಬಳಸಿಕೊಂಡು 15 ದಿನಗಳ ಅವಧಿಯಲ್ಲಿ ಸುಮಾರು 10 ಕೋಟಿ ರೂ. ಮೊತ್ತದ ಬಿಲ್‌ಗಳಿಗೆ ಸಹಿ ಮಾಡಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪೂರ್ಣ ಪ್ರಮಾಣದ ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ಯಾಮಸುಂದರ ಕಾಳೇಕರ್ ಅವರು ಎಸ್‌ಬಿಆರ್‌ನಲ್ಲಿ ಅಂಡರ್‌ಲೈನ್ ಮಾಡಿ ಸಹಿ ಮಾಡಿದ ನಂತರವೂ ನಾಗರಾಜ ಪ್ರಭಾ ಅವರು ಮತ್ತೆ ಸಹಾಯಕ ಕಾರ್ಯಪಾಲಕ ಅಭಿಯಂತರರ ಹೆಸರಿನಲ್ಲಿ ಸಹಿ ಮಾಡಿ ಹಣಕಾಸು ಅಧಿಕಾರ ಚಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಕ್ರಿಮಿನಲ್‌ ಹಾಗೂ ಆರ್ಥಿಕ ಅವ್ಯವಹಾರದ ಆರೋಪಗಳ ಹಿನ್ನೆಲೆಯಲ್ಲಿ ನಾಗರಾಜ ಪ್ರಭಾ ಅವರನ್ನು ಅಮಾನತುಗೊಳಿಸಿರುವುದು ಕ್ರಮಬದ್ಧವಾಗಿದ್ದರೂ, ಈವರೆಗೆ ಕ್ರಿಮಿನಲ್ ಪ್ರಕರಣ ದಾಖಲಿಸದೆ ಕೇವಲ ಇಲಾಖಾ ವಿಚಾರಣೆಗೆ ಸೀಮಿತಗೊಳಿಸಿರುವುದು ಚರ್ಚೆ ಹಾಗೂ ಅನುಮಾನಗಳಿಗೆ ಕಾರಣವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...