ಸಿಂಧನೂರು | ತಿಡಿಗೋಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ: ದಲಿತರಿಗೆ ದೇವಸ್ಥಾನ ಪ್ರವೇಶ

Date:

ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತ ಸಮುದಾಯದವರು ದೇವಸ್ಥಾನ ಪ್ರವೇಶಿಸುವ ಮೂಲಕ ಸಾಮಾಜಿಕ ಸಮಾನತೆ ಮತ್ತು ಸೌಹಾರ್ದತೆಯ ಮಹತ್ವವನ್ನು ಸಾರಿದ ಐತಿಹಾಸಿಕ ಕ್ಷಣಕ್ಕೆ ಇಂದು ಸಾಕ್ಷಿಯಾಯಿತು.

- Advertisement -

ಇತ್ತೀಚೆಗೆ ದಲಿತರ ಮೇಲೆ ದೌರ್ಜನ್ಯ ನಡೆದಿದ್ದ ತಿಡಿಗೋಳ ಗ್ರಾಮಕ್ಕೆ ಸೋಮವಾರ ಸಂಜೆ ಜಿಲ್ಲಾಧಿಕಾರಿ ಭೇಟಿ ನೀಡಿ, ಗ್ರಾಮದಲ್ಲಿ ಉಂಟಾಗಿದ್ದ ಸಾಮಾಜಿಕ ಸಂಘರ್ಷಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದರು. ಎರಡೂ ಸಮುದಾಯಗಳ ಜನರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿ, ಬಳಿಕ ಪರಸ್ಪರ ಸಂವಾದಕ್ಕೆ ಅವಕಾಶ ಕಲ್ಪಿಸಿದರು. ಸವರ್ಣೀಯರ ಸಹಕಾರದೊಂದಿಗೆ ದಲಿತ ಸಮುದಾಯದವರಿಗೆ ಗ್ರಾಮದ ಆಂಜನೇಯ ದೇವಸ್ಥಾನ ಪ್ರವೇಶಿಸಲು ಅವಕಾಶ ಮಾಡಿಕೊಡುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

ದೇವಸ್ಥಾನ ಪ್ರವೇಶದ ಸಮಸ್ಯೆ ಇತ್ಯರ್ಥಗೊಳಿಸುವುದರ ಜೊತೆಗೆ ದಲಿತರ ಕೇರಿಯಲ್ಲಿನ ಮೂಲಸೌಕರ್ಯ ಕೊರತೆಗಳ ನಿವಾರಣೆಗೂ ಜಿಲ್ಲಾಧಿಕಾರಿಗಳು ಮುಂದಾದರು. ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕಾಗಿ ಸ್ಥಳದಲ್ಲಿಯೇ ₹25 ಲಕ್ಷ ಮಂಜೂರು ಮಾಡಿದ್ದು, ಮೊದಲ ಹಂತವಾಗಿ ₹12 ಲಕ್ಷದ ಚೆಕ್ ವಿತರಿಸಿದರು.

Advertisements
1000003653

ಗ್ರಾಮದಲ್ಲಿ ವಸತಿ ಸೌಲಭ್ಯವಿಲ್ಲದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವ ಉದ್ದೇಶದಿಂದ 2.5 ಎಕರೆ ಜಮೀನು ಮಂಜೂರು ಮಾಡಲಾಗಿದ್ದು, ಮನೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕುಡಿಯುವ ನೀರು ಮತ್ತು ವಿದ್ಯುತ್ ಸಂಪರ್ಕ ಸೇರಿದಂತೆ ಹಲವು ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವುದಾಗಿ ತಿಳಿಸಿದರು.

ಪರಿಶಿಷ್ಟ ಸಮುದಾಯದ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ವಿಬಿಜಿ-ರಾಮ್-ಜಿ ಯೋಜನೆಯಡಿ ಒಂದು ತಿಂಗಳ ಕಾಲ ನಿರಂತರ ಉದ್ಯೋಗ ನೀಡುವಂತೆ ತಾಲೂಕು ಪಂಚಾಯಿತಿ ಇಒ ಚಂದ್ರಶೇಖರ ಅವರಿಗೆ ಸೂಚನೆ ನೀಡಿದರು. ಅಲ್ಲದೆ, ಗ್ರಂಥಾಲಯ, ಶಾಲೆ, ಅಂಗನವಾಡಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಅವಕಾಶಗಳಿಗೆ ಆದ್ಯತೆಯ ಮೇರೆಗೆ ಪರಿಶಿಷ್ಟ ಜಾತಿಯ ಮಹಿಳೆಯರು ಹಾಗೂ ಯುವಕರನ್ನು ಪರಿಗಣಿಸಿ ಉದ್ಯೋಗ ಕಲ್ಪಿಸುವುದಾಗಿ ತಿಳಿಸಿದರು.

ಭೂಹೀನ ಕುಟುಂಬಗಳು ಜಮೀನು ಕೋರಿ ಅರ್ಜಿ ಸಲ್ಲಿಸಿದರೆ ಮುಂದಿನ ದಿನಗಳಲ್ಲಿ ನಿಯಮಾನುಸಾರ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಾಮರಸ್ಯ, ಸಹಬಾಳ್ವೆಯೇ ನಾಡಿನ ಸಂಸ್ಕೃತಿಯ ಜೀವಾಳ: ಸಚಿವ ಡಾ. ಅಜಯ್ ಸಿಂಗ್

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕುಮಾರ ಕಾಂದೂ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೃಷ್ಣ, ಯೋಜನಾ ನಿರ್ದೇಶಕ ಶರಣಬಸವ ಕೆಸರಟ್ಟಿ, ಡಿವೈಎಸ್‌ಪಿ ಚಂದ್ರಶೇಖರ ನಾಯಕ, ತಹಶೀಲ್ದಾರ್ ಅರುಣ್ ಎಚ್. ದೇಸಾಯಿ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

1000003654
1000003654 1
1000003655
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ನಾಡ ಹಬ್ಬದಲ್ಲೇ ಆಂಗ್ಲ ಭಾಷೆ ಬಳಕೆ: ಕನ್ನಡಿಗರ ಆಕ್ರೋಶ 

ಜಿಲ್ಲೆಯ ಮೂಡಿಗೆರೆ ತಾಲೂಕು ಕೇಂದ್ರದಲ್ಲಿ ನಡೆದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು...

ಬಾಗಲಕೋಟೆ | ಜನಗಣತಿ-2027ಕ್ಕೆ ಸಿದ್ಧತೆ: ಜಿಲ್ಲೆಯ 120 ಅಧಿಕಾರಿಗಳಿಗೆ ತರಬೇತಿ

ಜಿಲ್ಲೆಯಾದ್ಯಂತ ಜನಗಣತಿ-2027ರ ಕಾರ್ಯವನ್ನು ಯಶಸ್ವಿಯಾಗಿ ಹಾಗೂ ವ್ಯವಸ್ಥಿತವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಜಿಲ್ಲೆಯ...

ಧಾರವಾಡ | ಜನರ ಸಮಸ್ಯೆಗಳಿಗೆ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್

"ಪ್ರಜಾಸೇವಾ ಕಾರ್ಯಕ್ರಮಗಳ ಮೂಲಕ ಜಿಲ್ಲಾಡಳಿತದ ಎಲ್ಲಾ ಇಲಾಖೆಗಳ ಅಧಿಕಾರಿಗಳನ್ನು ಗ್ರಾಮ ಪಂಚಾಯತಿ...

ವಿಜಯಪುರ |ಹಾಲಿನ ದರ ಏರಿಕೆ ಹಿಂಪಡೆಯಿರಿ, ಬಸ್ ದರ ಹೆಚ್ಚಳ ಕೈಬಿಡಿ: ಎಎಪಿ ಆಗ್ರಹ

ಹಾಲಿನ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು ಹಾಗೂ ರಾಜ್ಯದ ಸಾರಿಗೆ ಸಂಸ್ಥೆಗಳ...