ಬಿತ್ತನೆ ಮಾಡಲು ಹೊಲಕ್ಕೆ ತೆರಳಿದ್ದ ವೇಳೆ ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿದ್ದು, ಮತ್ತೋರ್ವ ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಂಧನೂರು ತಾಲೂಕಿನ ಜಂಗಮರಹಟ್ಟಿ (ಡಿ) ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು ದ್ಯಾಮಪ್ಪ (35) ಎಂದು ಗುರುತಿಸಲಾಗಿದೆ.
ಬುಧವಾರ ಸಂಜೆ ಸುಮಾರು 4.30 ಗಂಟೆ ವೇಳೆಗೆ ದ್ಯಾಮಪ್ಪ ಅವರು ತಮ್ಮತಾಯಿ ದ್ಯಾಮವ್ವ ಅವರೊಂದಿಗೆ ಹೊಲದಲ್ಲಿ ಬಿತ್ತನೆ ಮಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದಿದೆ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಬಸವರಾಜ ಆತ್ಮಹತ್ಯೆ ಪ್ರಕರಣ: 15 ಮಂದಿ ವಿರುದ್ಧ ಕೇಸ್, ಮೂವರ ಬಂಧನ
ಇದೇ ವೇಳೆ ಪಕ್ಕದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತ ಅಯ್ಯಪ್ಪ (51) ಅವರಿಗೂ ಸಿಡಿಲು ಬಡಿದಿದ್ದು, ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.




