ಸಿಂಧನೂರು | ಲಾರಿ-ಹಾಲಿನ್‌ ಟ್ಯಾಂಕ್‌ ಮುಖಾಮುಖಿ ಡಿಕ್ಕಿ : ಓರ್ವ ಸಾವು, ಹಲವರಿಗೆ ಗಾಯ

Date:

ಸಿಂಧನೂರು ತಾಲ್ಲೂಕಿನ ಹಂಚಿನಾಳ ಕ್ಯಾಂಪ್ ಹೆಚ್.ಪಿ.ಕಂಪನಿ ಸಮೀಪ ಲಾರಿ ಮತ್ತು ಹಾಲಿನ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಚಾಲಕ ಸಾವನ್ನಪ್ಪಿದ್ದು, ಹಾಲಿನ ಟ್ಯಾಂಕರ್ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಹಲವರಿಗೆ ಗಾಯಗಳಾಗಿವೆ.

- Advertisement -

ಗೊಬ್ಬರ ತುಂಬಿದ ಲಾರಿಯ ಚಾಲಕ ರಾಯಚೂರಿನ ಸಿಯಾತಲಾಬ್‌ನ ನಿವಾಸಿ ಶೇಖ್ ಅಬ್ದುಲ್ಲಾ (23) ಮೃತ ಚಾಲಕ. ಆರೋಗ್ಯ ಹಾಲಿನ ಟ್ಯಾಂಕರ್ ಚಾಲಕ ಶ್ರೀಕಾಂತ ಎನ್ನುವವನ ಸ್ಥಿತಿ ಗಂಭೀರವಾಗಿದ್ದು, ಇಷಾಕ್ ಹಾಗೂ ರಾಜಾಸಾಬ್ ಎನ್ನುವವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಗೊಬ್ಬರ ತುಂಬಿದ ಲಾರಿ ಸಿಂಧನೂರು ಕಡೆಯಿಂದ ಕಾರಟಗಿ ಕಡೆಗೆ ಹೊರಟಿದ್ದು, ಹಾಲಿನ ಟ್ಯಾಂಕರ್ ಕಾರಟಗಿಯಿಂದ ಸಿಂಧನೂರಿನ ಕಡೆಗೆ ಬರುವಾಗ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಇದೇ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಬೈಕ್, ಲಾರಿಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಕಾರಟಗಿ ತಾಲ್ಲೂಕಿನ ಗುಂಡೂರು ಗ್ರಾಮದ ಆಂಜನೇಯ, ವಿರೂಪಾಕ್ಷಿ ಮತ್ತು ಕರಿಬಸ್ಸಪ್ಪ ಎನ್ನುವವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

ಘಟನೆಯ ತೀವ್ರತೆಗೆ ಲಾರಿ, ಆರೋಗ್ಯ ಹಾಲಿನ ಟ್ಯಾಂಕ್ ಮತ್ತು ಬೈಕ್ ನಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಹಿನ್ನಲೆ ಕೆಲ ಕಾಲ ಸಂಚಾರಿ ಸಮಸ್ಯೆ ಎದುರಾಯಿತು.

ಇದನ್ನೂ ಓದಿ : ಬೀದರ | ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ : 105 ಸಿಲಿಂಡರ್ ವಶಕ್ಕೆ, ನಾಲ್ವರ ಬಂಧನ

ಡಿವೈಎಸ್ಪಿ ಚಂದ್ರಶೇಖರ, ಗ್ರಾಮೀಣ ಸಿಪಿಐ ವಿನಾಯಕ, ಪಿಎಸ್‌ಐ ಮೌನೇಶ ಅವರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಶಕಗಳಿಂದ ಬಸ್ ಸಂಪರ್ಕ ಕಾಣದ ಕೋಳೂರು: 4 ಕಿಮೀ ನಡದೇ ಶಾಲೆ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು

ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸಾರಿಗೆ ಸಮಸ್ಯೆಯನ್ನು ತಕ್ಷಣ ಗಮನಕ್ಕೆ ತೆಗೆದುಕೊಂಡು,...

ರಾಯಚೂರು | ನೀರಿನ ಸಮಸ್ಯೆ ಪ್ರತಿಭಟನೆಯಲ್ಲಿ ಕಾಂಗ್ರೆಸ್–ಜೆಡಿಎಸ್ ಮುಖಂಡರ ಮಾತಿನ ಚಕಮಕಿ

ಸಿಂಧನೂರು ತಾಲ್ಲೂಕಿನ ಬೂದಿಹಾಳ ಕ್ಯಾಂಪಿನಲ್ಲಿ ಕೆಳಭಾಗದ ರೈತರಿಗೆ ನೀರಿನ ಸಮಸ್ಯೆ ಪರಿಹರಿಸುವಂತೆ...

ರಾಯಚೂರು | ಸಮಯಕ್ಕೆ ಬಾರದ ಬಸ್‌; ಶಾಲಾ ವಿದ್ಯಾರ್ಥಿಗಳ ಪರದಾಟ

ಲಿಂಗಸುಗೂರು ತಾಲ್ಲೂಕು ಮುದಗಲ್ ಪಟ್ಟಣದಿಂದ ಅಂಕಲಿಮಠ - ಮೂದೇನೂರು ಗ್ರಾಮಕ್ಕೆ ತೆರಳುವ...

ರಾಯಚೂರು | ಜಿಲ್ಲೆಯಲ್ಲಿ 2,570 ಗಣೇಶ ಮೂರ್ತಿ ಪ್ರತಿಷ್ಠಾಪನೆ, 14 ಕಡೆ ನಿರ್ಬಂಧ: ಎಸ್ ಪಿ ಅರುಣಾಂಗ್ಷುಗಿರಿ

ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಲು ಅಗತ್ಯ ಪೊಲೀಸ್ ಬಂದೋಬಸ್ತ್...