ಸಿಂಧನೂರು | ಉಪಹಾರದಲ್ಲಿ ಕಬ್ಬಿಣ ಅಂಶದ ವಸ್ತು ಪತ್ತೆ: 30 ವಿದ್ಯಾರ್ಥಿಗಳು ಅಸ್ವಸ್ಥ

Date:

ಉಪಹಾರದಲ್ಲಿ ಕಬ್ಬಿಣ ಅಂಶದ ವಸ್ತು ಪತ್ತೆಯಾದ ಹಿನ್ನಲೆ ಬೆಳಗಿನ ಉಪಹಾರ ಸೇವಿಸದೇ ಶಾಲೆಗೆ ತೆರಳಿದ್ದ ನಗರದ ಪೊಲೀಸ್ ಠಾಣೆಯ ಎದುರುಗಡೆ ಇರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ವಸತಿ ನಿಲಯದ 30 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ಜರುಗಿದೆ.

- Advertisement -

ಬೆಳಗ್ಗೆ ವಸತಿ ನಿಲಯದಲ್ಲಿ ಉಪಹಾರಕ್ಕಾಗಿ ಚಿತ್ರನ್ನ ಮಾಡಿದ್ದು, ವಿದ್ಯಾರ್ಥಿನಿಯರು ಉಪಹಾರ ಸೇವಿಸುವಾಗ ಓರ್ವ ವಿದ್ಯಾರ್ಥಿನಿಯ ತಟ್ಟೆಯಲ್ಲಿ ಪಾತ್ರೆ ತೊಳೆಯುವ ಕಬ್ಬಿಣದ ಅಂಶದ ವಸ್ತು ಪತ್ತೆಯಾಗಿದೆ. ನಂತರ ಎಲ್ಲ ವಿದ್ಯಾರ್ಥಿನಿಯರು ಉಪಹಾರ ತೊರೆದು ಉಪವಾಸವೇ ಶಾಲೆಗೆ ತೆರಳಿದ್ದು, ಏಕಾಏಕಿ 30 ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿ ಅಸ್ವಸ್ಥರಾಗಿದ್ದಾರೆ. ನಂತರ ವಿದ್ಯಾರ್ಥಿಗಳನ್ನು ನಗರದ ತಾಯಿ ಮಕ್ಕಳ ಆಸ್ಪತ್ರೆಗೆ ಚಿಕಿತ್ಸೆಗಾಗಿ ವಿದ್ಯಾರ್ಥಿಗಳನ್ನು ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಹೊಟ್ಟೆ ನೋವಿನಿಂದ ವಿದ್ಯಾರ್ಥಿನಿಯರು ಸಂಕಷ್ಟ ಎದುರಿಸುತ್ತಿದ್ದು, ತಾಯಿ ಮಕ್ಕಳ ಆಸ್ಪತ್ರೆಯ ವೈದ್ಯರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರೆಸಿದ್ದಾರೆ. ವಸತಿ ನಿಲಯದಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ವಾರ್ಡನ್ ದೀರ್ಘಕಾಲಿಕ ರಜೆ ಮೇಲೆ ತೆರಳಿದ್ದು, ಪ್ರಸ್ತುತ ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ನಟರಾಜ್  ಅವರಿಗೆ ವಸತಿ ನಿಲಯದ ವಾರ್ಡನ್ ಹುದ್ದೆಯ ಪ್ರಭಾರ ನೀಡಲಾಗಿದೆ.‌ ಘಟನೆ ನಡೆದಾಗ ವಸತಿ ನಿಲಯದಲ್ಲಿ ನಟರಾಜ ಅವರ ಅನುಪಸ್ಥಿತಿ ಕಂಡು ಬಂದಿದ್ದು, ಕಚೇರಿ ಕೆಲಸದ ಜೊತೆ ಜೊತೆಗೆ ವಾರ್ಡನ್ ಕೆಲಸ ನಿಭಾಯಿಸುತ್ತಿರುವುದು ಕರ್ತವ್ಯ ಲೋಪಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮದ್ಯಪಾನ ಮಾಡಿ ಶಾಲೆಗೆ ಬಂದ ಶಿಕ್ಷಕ; ಪಾಲಕರು, ಗ್ರಾಮಸ್ಥರಿಂದ ತರಾಟೆ

ಕಳೆದ ಒಂದು ತಿಂಗಳಿನಲ್ಲಿ ವಸತಿ ನಿಲಯಗಳ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಮೂರು ಪ್ರಕರಣಗಳು ನಡೆದಿದ್ದು, ಅಧಿಕಾರಿಗಳ ಲೋಪ ಎದ್ದು ಕಾಣುತ್ತಿದೆ. ಸ್ಥಳೀಯ ಶಾಸಕರು, ಅಧಿಕಾರಿಗಳು ಈ ಬಗ್ಗೆ ಅನೇಕ ಸಭೆ ನಡೆಸಿ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಿದರೂ ಮತ್ತೆ ಮತ್ತೆ ವಿದ್ಯಾರ್ಥಿಗಳು ಅಸ್ವಸ್ಥರಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿರುವುದು ಆಡಳಿತ ಕಾರ್ಯವೈಖರಿಯ ಬಗ್ಗೆ ವಿದ್ಯಾರ್ಥಿಗಳ ಪಾಲಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಜಂತರ್ ಮಂತರ್‌ ಪ್ರತಿಭಟನೆಗೆ ದೆಹಲಿ ಪೊಲೀಸರ ನಿರ್ಬಂಧ; AIDSO ಖಂಡನೆ!

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಪೊಲೀಸರು ನಿರ್ಬಂಧ ಹೇರಿರುವುದನ್ನು ವಿಜಯನಗರ...

ಗದಗ | ಎಸ್ಸಿ, ಎಸ್ಟಿ ಜನಸಂಖ್ಯೆಗೆ ಅನುಗುಣವಾಗಿ  ಮೀಸಲಾತಿ ಪ್ರಮಾಣ ಹೆಚ್ಚಿಸಿ: ಬಾಲು ರಾಠೊಡ್ ಆಗ್ರಹ

"ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ...

ಹಾವೇರಿ | ರಾಜ್ಯ ಮಟ್ಟದ ಮಲ್ಲಕಂಬ ಸ್ಪರ್ಧೆ

ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಮಟ್ಟದ 14/17 ವಯೋಮಿತಿಯ ಬಾಲಕ...

ರಾಯಚೂರು | ಪೋತ್ನಾಳ ಹಳ್ಳಕ್ಕೆ ನೀರು ಹರಿಸಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಅಮೀನ್ ಪಾಷಾ ದಿದ್ದಗಿ

ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಜನರು ಹಾಗೂ ಜಾನುವಾರುಗಳಿಗೆ...