ತಾಲ್ಲೂಕಿನ ಉಮಲೂಟಿ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಯುವ ವಕೀಲರೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತರನ್ನು ಅನೀಪ ಬೀರಮಲ್ಲಪ್ಪ ನಾಯ್ಕರ (30) ಎಂದು ಗುರುತಿಸಲಾಗಿದೆ. ಗ್ರಾಮದ ಕೃಷಿ ಹೊಂಡಕ್ಕೆ ಕುರಿಗಳಿಗೆ ಮೈ ತೊಳೆಯಲು ತೆರಳಿದ್ದ ವೇಳೆ ಕಾಲುಜಾರಿ ಹೊಂಡಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಹೊಂಡದ ಹೂಳಿನಲ್ಲಿ ಸಿಲುಕಿಕೊಂಡ ಪರಿಣಾಮ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ, ಹೊಂಡದಿಂದ ಅನೀಪ ಅವರ ಮೃತದೇಹವನ್ನು ಹೊರತೆಗೆದರು. ಬಳಿಕ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.
ಮೃತ ಅನೀಪ ಅವರು ಉಮಲೂಟಿ ಗ್ರಾಮದ ನಿವಾಸಿಯಾಗಿದ್ದು, ವೃತ್ತಿಯಲ್ಲಿ ವಕೀಲರಾಗಿದ್ದರು. ಕಳೆದ ಮೇ 2026ರಲ್ಲಿ ಅವರ ವಿವಾಹ ನಡೆದಿತ್ತು. ಮದುವೆಯಾದ ಕೆಲವೇ ತಿಂಗಳಲ್ಲಿ ಸಂಭವಿಸಿದ ಈ ದುರಂತ ಕುಟುಂಬಸ್ಥರು ಹಾಗೂ ಗ್ರಾಮಸ್ಥರನ್ನು ಶೋಕಸಾಗರದಲ್ಲಿ ಮುಳುಗಿಸಿದೆ.
ಈ ಸುದ್ದಿ ಓದಿದ್ದೀರಾ? ಸಿಂಧನೂರು | ಮನೆಯ ಮುಂದೆ ಜೋಳಿಗೆಯಲ್ಲಿ ಮಲಗಿದ್ದ ಮಗುವಿನ ಮೇಲೆ ನಾಯಿಗಳ ದಾಳಿ: ಒಂದೂವರೆ ವರ್ಷದ ಮಗು ಸಾವು
ತುರುವಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.




