ಸಿಂಧನೂರು | ಪೊಲೀಸ್ ಠಾಣೆಯಲ್ಲಿ ವಕೀಲರ ಮೇಲೆ ಹಲ್ಲೆ ಆರೋಪ: ನ್ಯಾಯವಾದಿಗಳಿಂದ ನ್ಯಾಯಾಲಯ ಕಲಾಪ ಬಹಿಷ್ಕಾರ

Date:

ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ತುರ್ವಿಹಾಳ ಪೊಲೀಸ್ ಠಾಣೆಯ ಪಿಎಸ್ಐ ಸುಜಾತ ನಾಯಕ ವಕೀಲರೊಬ್ಬರ ಮೇಲೆ ಸೋಮವಾರ ಬೆಳಿಗ್ಗೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಖಂಡಿಸಿ ಸಿಂಧನೂರು ತಾಲ್ಲೂಕು ನ್ಯಾಯವಾದಿಗಳ ಸಂಘವು ಸೋಮವಾರ ನ್ಯಾಯಾಲಯದ ಕಲಾಪವನ್ನು ಬಹಿಷ್ಕರಿಸಿದೆ ಎಂದು ತಿಳಿದುಬಂದಿದೆ.

- Advertisement -

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತುರ್ವಿಹಾಳದ ವಕೀಲ ಅರಳಯ್ಯ ಅವರ ಸಹೋದರರಿಂದ ಪೊಲೀಸರು ಖಾಲಿ ಹಾಳೆಯ ಮೇಲೆ ಸಹಿ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಆಕ್ಷೇಪ ವ್ಯಕ್ತಪಡಿಸಿದ ವಕೀಲ ಅರಳಯ್ಯ ಅವರು ಖಾಲಿ ಹಾಳೆಯ ಮೇಲೆ ಸಹಿ ಪಡೆಯುವುದು ಸರಿಯಲ್ಲ. ಇಂತಹ ಕ್ರಮಕ್ಕೆ ಯಾವ ಕಾನೂನು ಅವಕಾಶ ನೀಡುತ್ತದೆ?” ಎಂದು ಪೊಲೀಸರನ್ನು ಪ್ರಶ್ನಿಸಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಈ ವಿಚಾರವಾಗಿ ನಡೆದ ಮಾತಿನ ಚಕಮಕಿಯ ಬಳಿಕ ಠಾಣೆಯ ಪಿಎಸ್ಐ ಅವರು ವಕೀಲ ಅರಳಯ್ಯ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ವಕೀಲರು ಮತ್ತು ತುರ್ವಿಹಾಳ ಪೊಲೀಸ್ ಠಾಣೆಯ ಸಿಬ್ಬಂದಿ ನಡುವೆ ನಡೆದ ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ವೈರಲ್ ಆಗಿದೆ.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಗಾಂಜಾ ಮಾರಾಟ; ಮೂವರ ಬಂಧನ

ಈ ಕುರಿತು ಪ್ರತಿಕ್ರಿಯಿಸಿದ ಶೇಖರ್ ದುಮತಿ ವಕೀಲ ಇತ್ತೀಚಿನ ದಿನಗಳಲ್ಲಿ ಪೊಲೀಸ್ ಠಾಣೆಗಳಲ್ಲಿ ವಕೀಲರಿಗೆ ಸೂಕ್ತ ಗೌರವ ದೊರೆಯುತ್ತಿಲ್ಲ. ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಕರ್ನಾಟಕ ಜನಶಕ್ತಿ ಜಿಲ್ಲಾ ಮುಖಂಡ ಶಿವಪುತ್ರ ತುರ್ವಿಹಾಳ ಕಾನೂನಾತ್ಮಕವಾಗಿ ಪ್ರಶ್ನೆ ಕೇಳಲು ಹೋದ ವಕೀಲರ ಮೇಲೆಯೇ ಪೊಲೀಸರು ಹಲ್ಲೆ ನಡೆಸಿರುವುದು ಅತ್ಯಂತ ಖಂಡನೀಯ ಹಾಗೂ ಅಕ್ಷಮ್ಯ ಘಟನೆ. ಕಾನೂನು ಅರಿತಿರುವ ವಕೀಲರಿಗೇ ಈ ರೀತಿಯ ಪರಿಸ್ಥಿತಿ ಎದುರಾದರೆ, ಸಾಮಾನ್ಯ ಜನರ ಗತಿ ಏನಾಗಬಹುದು ಎಂಬ ಆತಂಕ ಮೂಡುತ್ತದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ಪಿಎಸ್‌ಐ ಅವರನ್ನು ಕೂಡಲೇ ಅಮಾನತುಗೊಳಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...