ಸಿಂಧನೂರು | ಜನಪರ ಚಳುವಳಿಗಳು ಪರ್ಯಾಯ ರಾಜಕೀಯ ಶಕ್ತಿಯಾಗಬೇಕು; ಶಂಕರ್ ವಾಲೀಕಾರ

Date:

ಜನಪರ ಚಳುವಳಿಗಳು ಪರ್ಯಾಯ ರಾಜಕೀಯ ಶಕ್ತಿಯಾಗಿ ಬೆಳೆಯಬೇಕಾದ ಅಗತ್ಯವಿದ್ದು, ಮಾನವೀಯ ಮೌಲ್ಯಗಳನ್ನು ಕಾಪಾಡುವ ಎಲ್ಲರೂ ಒಂದಾಗಬೇಕು ಎಂದು ಪ್ರಗತಿಪರ ಚಿಂತಕ ಹಾಗೂ ಉಪನ್ಯಾಸಕ ಶಂಕರ್ ವಾಲೀಕಾರ ಅಭಿಪ್ರಾಯಪಟ್ಟರು.

ನಗರದ ಟೌನ್ ಹಾಲ್‌ನಲ್ಲಿ ನಡೆದ ಕರ್ನಾಟಕ ಜನಶಕ್ತಿ ಕಾರ್ಯಕರ್ತರು ಹಾಗೂ ಹಿತೈಷಿಗಳ ವಲಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಶೋಷಿತ ಸಮುದಾಯಗಳು ಇನ್ನೂ ವಿಭಜಿತವಾಗಿರುವುದು ದುರ್ಬಲತೆಯಾಗಿದೆ ಎಂದು ಹೇಳಿದರು.

ಬಸವ ತತ್ವ, ಅಂಬೇಡ್ಕರ್ ತತ್ವ, ಪೆರಿಯಾರ್ ಸೇರಿದಂತೆ ಮಹಾನ್ ನಾಯಕರ ಚಿಂತನೆಗಳನ್ನು ಆಧಾರವಾಗಿಸಿಕೊಂಡು ಅವರ ಆಶಯಗಳ ಸಾಧನೆಗಾಗಿ ಎಲ್ಲರೂ ಒಂದಾಗಿ ಬಲಿಷ್ಠ ಶಕ್ತಿಯಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.

- Advertisement -

ನಂತರ ಮಾತನಾಡಿದ ಹಿರಿಯ ಹೋರಾಟಗಾರ ಹಾಗೂ ದಲಿತ ಮುಖಂಡ ಎಂ.ಆರ್. ಭೇರಿ, ವೈರಿತ್ವದಿಂದ ಮಾನವತ್ವ ನಾಶವಾಗುವುದಿಲ್ಲ; ಮಾನವತ್ವದಿಂದ ವೈರಿತ್ವವೇ ನಾಶವಾಗುತ್ತದೆ. ಸಮಾಜದಲ್ಲಿ ದ್ವೇಷಕ್ಕಿಂತ ಪ್ರೀತಿಯೇ ಅಗತ್ಯವಾಗಿದ್ದು, ಪ್ರೀತಿಗೆ ಸೃಜನಶೀಲ ಶಕ್ತಿಯಿದೆ, ಆದರೆ ದ್ವೇಷಕ್ಕೆ ಅಂತಹ ಶಕ್ತಿ ಇಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ನ್ಯಾಯ, ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವವನ್ನು ವಿರೋಧಿಸುವವರ ಕೈಯಲ್ಲೇ ಅಧಿಕಾರವಿರುವುದು ವಿಷಾದನೀಯ. ಮನುವಾದಿಗಳ ಆಕರ್ಷಕ ಮಾತುಗಳಿಗೆ ನಾವು ಮರುಳಾಗಿದ್ದೇವೆ. ಇಂತಹ ಪರಿಸ್ಥಿತಿಯನ್ನು ಎದುರಿಸಲು ಎಲ್ಲರೂ ಒಂದಾಗಿ ಸಂಘಟಿತರಾಗಬೇಕಾಗಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಬಣ್ಣ ಬಣ್ಣದ ಧ್ವಜಗಳನ್ನು ಹಿಡಿದು ಕೈ ಕೈ ಮಿಲಾಯಿಸಿ ಹಲಿಗೆ ಬಾರಿಸುವ ಮೂಲಕ ನಾವೆಲ್ಲಾ ಒಂದಾಗಿದ್ದೇವೆ ಎಂದು ಸಂದೇಶ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೊಲೆ ಪ್ರಕರಣ; 10 ಮಂದಿಗೆ ಜೀವಾವಧಿ ಶಿಕ್ಷೆ

ಕಾರ್ಯಕ್ರಮದಲ್ಲಿ ಹಿರಿಯ ದಲಿತ ಹೋರಾಟಗಾರ ಭೀಮಣ್ಣ ನಗನೂರು, ಕರ್ನಾಟಕ ಜನಶಕ್ತಿ ರಾಜ್ಯ ಮುಖಂಡ ಕೆ ಎಲ್ ಅಶೋಕ್, ಜನ ಸಂಗ್ರಾಮ ಪರಿಷತ್ ಜಿಲ್ಲಾ ಮುಖಂಡ ಅಸ್ಲಾಂ ಪಾಷಾ, ಜಾನ್ ವೆಸ್ಲಿ, ಮಂಜುನಾಥ ಗಾಂಧಿನಗರ, ಅಶೋಕ ನಂಜಲದಿನ್ನಿ, ರೈತ ಮುಖಂಡ ಅಮೀನ್ ದಿದ್ದಿಗಿ, ನಾರಾಯಣ ಬೆಳಗುರ್ಕಿ, ಸರಸ್ವತಿ, ಇನ್ನಿತರರು ಇದ್ದರು.




WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...