ಸಿಂಧನೂರು | ಎಫ್‌ಐಡಿ ರದ್ದು, ಜೋಳದ ಬಾಕಿ ಹಣ ಪಾವತಿಗೆ ಆಗ್ರಹಿಸಿ ಜೂ.22 ರಂದು ರಸ್ತೆ ತಡೆ ಪ್ರತಿಭಟನೆ

Date:

ಎಫ್‌ಐಡಿ ಕಡ್ಡಾಯ ರದ್ದುಗೊಳಿಸುವುದು, ಜೋಳ ಖರೀದಿಸಿದ ಬಾಕಿ ಹಣ ಪಾವತಿಸುವಂತೆ ಸೇರಿ ನಾನಾ ರೈತರ ಬೇಡಿಕೆಗೆ ಆಗ್ರಹಿಸಿ ಜೂ.22 ರಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ಶಕ್ತಿನಗರದ ಮೇನ್ ಗೇಟ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸುವುದಾಗಿ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣಪ್ಪ ಮರಳಿ ಹೇಳಿದರು.

- Advertisement -

ನಗರದ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ ಅನುಸರಿಸುವಲ್ಲಿ ಒಂದೇ ನಾಣ್ಯದ ಎರಡು ಮುಖಗಳಾಗಿ ನಡೆದುಕೊಳ್ಳುತ್ತಿವೆ. ರಸಗೊಬ್ಬರ ಖರೀದಿಗೆ ಜಾರಿಗೊಳಿಸಲಾಗಿರುವ ಎಫ್‌ಐಡಿ ಕಡ್ಡಾಯವನ್ನು ರದ್ದುಗೊಳಿಸುವದು, ವಿದ್ಯುತ್ ವಿತರಣಾ ಕೇಂದ್ರಗಳನ್ನು ಖಾಸಗೀಕರ ಕೈಬಿಟ್ಟು ಡಾ.ಸ್ವಾಮಿನಾಥನ್ ಆಯೋಗದ ವರದಿ ಜಾರಿ, ಜೋಳ ಖರೀಧಿಸಿದ ಹಣ ಪಾವತಿಸುವಂತೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ರೈತರ ಆದಾಯ ದ್ವಿಗುಣಗೊಳಿಸುವದಾಗಿ ಹೇಳಿದ್ದ ನರೇಂದ್ರ ಮೋದಿಯವರು ವರ್ಷಗಳು ಉರುಳಿದರೂ ಆದಾಯ ದ್ವಿಗುಣಗೊಳಿಸುವ ಬದಲು ಕೃಷಿ ವೆಚ್ಚ ನಿಯಂತ್ರಣವಿಲ್ಲದೇ ಹೆಚ್ಚಿಸಲು ಕಾರಣವಾಗಿದ್ದಾರೆ ಎಂದರು. ರಸಗೊಬ್ಬರ ಖರೀದಿಗೆ ಜಾರಿಗೊಳಿಸಲಾಗಿರುವ ಎಫ್‌ಐಡಿ ಕಡ್ಡಾಯಗೊಳಿಸದ ಪರಿಣಾಮ ವಯೋವೃದ್ದ ರೈತರು ರಸಗೊಬ್ಬರ ಖರೀದಿ ಮಾಡಲು ಸಾಧ್ಯವಾಗದೇ ಹೋಗಿದೆ. ಯೂರಿಯಾ, ಡಿಎಪಿ ಗೊಬ್ಬರ ಬೆಲೆ ಹೆಚ್ಚಿಸಿರುವ ಜೊತೆಗೆ ನಿಗಧಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ಗಮನಕ್ಕೆ ತಂದರು ತಡೆಯಲು ಸರ್ಕಾರಗಳಿಂದ ಸಾಧ್ಯವಾಗಿಲ್ಲ ಎಂದು ಆರೋಪಿಸಿದರು.

ಒಂದು ಎಕರೆ ಭೂಮಿಗೆ ಮೂರು ಕ್ವಿಂಟಾಲ್‌ ಯೂರಿಯಾ, ಗೊಬ್ಬರ ಬೇಕು. ಒಂದು ಎಕರೆ ಒಂದು ಚೀಲ ಕೊಡುವದಾಗಿ ಹೇಳಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದರು. ರೈತರು ಕೃಷಿಯನ್ನು ಬಿಟ್ಟು ಹೋಗುವ ನೀತಿಗಳು ಸರ್ಕಾರ ರೂಪಿಸುತ್ತಿವೆ. ರೈತರ ಕೃಷಿ ಪಂಪಸೆಟ್,ಭಾಗ್ಯಜ್ಯೋತಿ, ಕುಟೀರ ಜ್ಯೋತಿಗಳಿಗೆ ಉಚಿತವಾಗಿ ವಿದ್ಯುತ್ ನೀಡುವ ಸರ್ಕಾರ ವಿದ್ಯುತ್ ವಿತರಣಾ ಕೇಂದ್ರಗಳನ್ನು ಟಾಟಾ ಪವರ್ ಇವರಿಗೆ ವಹಿಸುವ ಮೂಲಕ ಉಚಿತ ವಿದ್ಯುತ್ ಕಡಿತಗೊಳಿಸಲು ಹುನ್ನಾರ ನಡೆಸಿದೆ ಎಂದು ಆಕ್ರೋಶಿಸಿದರು.

2006 ರಲ್ಲಿ ಡಾ.ಸ್ವಾಮಿನಾಥನ್ ಆಯೋಗ ಹಿಂದಿನ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ವರದಿ ನೀಡಿದೆ. ಈಗ ಪ್ರಧಾನಿ ನರೇಂದ್ರ ಮೋದಿ ಸೇರಿ ಕಾಂಗ್ರೆಸ್ ಸಹ ಜಾರಿಗೆ ಮುಂದಾಗಿಲ್ಲ. ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ರೈತ ವಿರೋಧಿಯಾಗಿವೆ. ರೈತರಿಂದ ಮೂರು ತಿಂಗಳ ಹಿಂದೆ ಖರೀದಿಸಿರುವ ಜೋಳದ ಹಣ ಇಂದಿಗೂ ಪಾವತಿಸುತ್ತಿಲ್ಲ. ಕೂಡಲೇ ಹಣ ಪಾವತಿಗೆ ಆಗ್ರಹಿಸಿ ಶಕ್ತಿನಗರದಲ್ಲಿ ರಸ್ತೆ ತಡೆ ನಡೆಸುವದಾಗಿ ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾಧ್ಯಕ್ಷ ರಾಮಯ್ಯ ಜವಳಗೇರಾ, ಚನ್ನಪ್ಪ ಹುಣಸಿಹಾಳ ಹುಡಾ, ರಾಮಬಾಬು , ಗಂಗಪ್ಪ ಏಗನೂರು, ಜಷ್ಮೀರ ಅಲಿ, ಶ್ರೀನಿವಾಸ, ನಿಂಗಪ್ಪ ವಡ್ಲೂರು, ಹನುಮಂತ್ರಾಯ ಸೇರಿ ಅನೇಕರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

ರಾಜ್ಯ ಸರ್ಕಾರ 2026ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಯಾದಗಿರಿ | ಮಕ್ಕಳ ಸುರಕ್ಷತೆ ಸಮಾಜದ ಹೊಣೆ: ಪೋಕ್ಸೋ, ಬಾಲ್ಯವಿವಾಹ ತಡೆಗೆ ಕಾನೂನು ಅರಿವು ಅಭಿಯಾನ

ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಸುರಕ್ಷಿತ...

ಕಲಬುರಗಿ | ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರ: ದುರಸ್ತಿಗೆ ದಲಿತ ಸೇನೆ ಆಗ್ರಹ

ಮಳಖೇಡದಿಂದ ಚಿತ್ತಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ...

ಕಲಬುರಗಿ ಜಿಲ್ಲೆಯ 4.77 ಲಕ್ಷ ಮತದಾರರು ಎಲ್ಲಿ ಹೋದರು? ಎಸ್‌ಐಆರ್ ವಿರುದ್ಧ ಸಿಪಿಐ ತೀವ್ರ ಆಕ್ರೋಶ

ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಲಕ್ಷಾಂತರ ಮತದಾರರ ಹೆಸರುಗಳು...