ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ₹56 ಸಾವಿರ ದಂಡ ವಿಧಿಸಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎ. ಸೋಮಶೇಖರ ಆದೇಶಿಸಿದ್ದಾರೆ.
ಪ್ರಕರಣ ಹಿನ್ನೆಲೆ: ತಾಲ್ಲೂಕಿನ ಹಟ್ಟಿ ಗ್ರಾಮದ ಶಂಕ್ರಪ್ಪ ಬಸಪ್ಪ ತಳವಾರ 2023ರ ಅಕ್ಟೋಬರ್ 28ರಂದು ರಾತ್ರಿ ಮದ್ಯಪಾನ ಮಾಡಿ ಮನೆಗೆ ಬಂದು ಬಾಗಿಲು ಬಡೆದು ಮನೆಯೊಳಗೆ ಅತಿಕ್ರಮವಾಗಿ ಪ್ರವೇಶಿಸಿ ಅತ್ಯಾಚಾರವೆಸಗಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣಯಲ್ಲಿ ದೂರು ದಾಖಲಾಗಿತ್ತು. ಸಿಪಿಐ ವೀರಾರೆಡ್ಡಿ ಅವರು ತನಿಖೆ ಕೈಗೊಂಡು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶ ಎ.ಸೋಮಶೇಖರ ಅವರು ಸಾಕ್ಷ್ಯಾಧಾರಗಳನ್ನು ಪರಾಮರ್ಶಿಸಿ (ಸೆ.16) ಮಂಗಳವಾರ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಹಾಗೂ ದಂಡದ ಮೊತ್ತದಲ್ಲಿ ₹50 ಸಾವಿರ ಬಾಧಿತಳಿಗೆ ನೀಡಬೇಕು ಎಂದು ತೀರ್ಪು ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ
ಸರ್ಕಾರಿ ಅಭಿಯೋಜಕ ಮಂಜುನಾಥ ಭೇರಿಗಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.




