ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದ 151 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವೇದಿಕೆ ಮೇಲಿಂದ ತೆರಳಿದ ಬೆನ್ನಲ್ಲೇ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇದೇ ವೇಳೆ ಸಚಿವ ಈಶ್ವರ ಖಂಡ್ರೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದು, ಪರಿಸ್ಥಿತಿ ಗಮನಿಸಿದ ಸಿಬ್ಬಂದಿ ಅವರನ್ನು ತಕ್ಷಣ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು.
ಶಾರ್ಟ್ ಸರ್ಕ್ಯೂಟ್‌ನಿಂದ ವೇದಿಕೆ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಂತೆ ಸ್ಥಳದಲ್ಲಿದ್ದ ಜನರಲ್ಲಿ ಕೆಲಕಾಲ ಗಾಬರಿ ಉಂಟಾಯಿತು. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಫೈರ್ ಉಪಕರಣಗಳ ನೆರವಿನಿಂದ ಬೆಂಕಿಯನ್ನು ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.
ಈ ಸುದ್ದಿ ಓದಿದ್ದೀರಾ? ಬಿಸಿಲಿನ ತಾಪಕ್ಕೆ ಮನರೇಗಾ ಕಾರ್ಮಿಕರ ಸಾವು: ಕೆಲಸದ ಸಮಯ ಪರಿಷ್ಕರಣೆ ಕೂಲಿ ಕಾರ್ಮಿಕರಿಗೆ ಅನ್ವಯಿಸುವುದಿಲ್ಲವೇ?
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.




