ಸಿಂಧನೂರು | ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕುಡಿಯುವ ನೀರಿಗೂ ತತ್ವಾರ; ರೋಗಿಗಳ ಪರದಾಟ!

Date:

ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಇಲ್ಲದೆ ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುವ ಸಾರ್ವಜನಿಕರಿಗೆ ಕನಿಷ್ಠ ಕುಡಿಯುವ ನೀರಿನ ಸೌಲಭ್ಯವೂ ದೊರೆಯದಿರುವುದು ಆಸ್ಪತ್ರೆಯ ಆಡಳಿತ ವ್ಯವಸ್ಥೆಯ ವಿರುದ್ಧ ಅಸಮಾಧಾನಕ್ಕೆ ಕಾರಣವಾಗಿದೆ.

- Advertisement -

ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಿರುವುದರಿಂದ ರೋಗಿಗಳು ಮತ್ತು ಅವರ ಸಂಬಂಧಿಕರು ಅನಿವಾರ್ಯವಾಗಿ ಹೊರಗಿನ ಹೋಟೆಲ್‌ಗಳಲ್ಲಿ ಬಾಟಲಿ ನೀರು ಖರೀದಿಸಬೇಕಾಗಿದೆ. ಹಣವಿರುವವರು ನೀರು ಖರೀದಿಸುತ್ತಿದ್ದರೆ, ಬಡವರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಚಿಕಿತ್ಸೆ, ಔಷಧಿ ಹಾಗೂ ಇತರೆ ವೆಚ್ಚಗಳಿಂದ ಆರ್ಥಿಕ ಸಂಕಷ್ಟ ಅನುಭವಿಸುತ್ತಿರುವ ಕುಟುಂಬಗಳಿಗೆ ನೀರಿಗಾಗಿ ಹಣ ಖರ್ಚು ಮಾಡುವುದು ಹೆಚ್ಚುವರಿ ಹೊರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ರಾತ್ರಿ ವೇಳೆ ನೀರಿನ ಸಮಸ್ಯೆ ಮತ್ತಷ್ಟು ಗಂಭೀರವಾಗುತ್ತಿದೆ. ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ಬಾಯಾರಿಕೆಯಾದಾಗ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದಾರೆ. ರಾತ್ರಿ ಸಮಯದಲ್ಲಿ ಹೊರಗೆ ಹೋಗಿ ನೀರು ತರುವುದು ಎಲ್ಲರಿಗೂ ಸಾಧ್ಯವಾಗುತ್ತಿಲ್ಲ. ಇದರಿಂದ ವೃದ್ಧರು, ಮಹಿಳೆಯರು ಹಾಗೂ ಮಕ್ಕಳೊಂದಿಗೆ ಬಂದಿರುವ ಕುಟುಂಬಗಳು ಹೆಚ್ಚಿನ ಸಂಕಷ್ಟ ಎದುರಿಸುತ್ತಿವೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹನಮ್ಮ ಮಾತನಾಡಿ, “ಕುಡಿಯುವ ನೀರು ತರುವುದಕ್ಕಾಗಿಯೇ ಒಬ್ಬರು ಇರಬೇಕಾದ ಪರಿಸ್ಥಿತಿ ಇದೆ. ವೈದ್ಯರು ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಮಾತ್ರೆ ಹಾಗೂ ಔಷಧಿಗಳನ್ನು ತೆಗೆದುಕೊಳ್ಳುವಂತೆ ಸೂಚಿಸುತ್ತಾರೆ. ಆದರೆ ಮಾತ್ರೆ ನುಂಗುವುದಕ್ಕೂ ನೀರು ಸಿಗದಂತಾಗಿದೆ. ವೈದ್ಯರ ಸೂಚನೆಯಂತೆ ಔಷಧಿ ತೆಗೆದುಕೊಳ್ಳಲು ಸಿದ್ಧರಿದ್ದರೂ ನೀರಿನ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿಸುವಂತಾಗಿದೆ” ಎಂದು ಅಳಲು ತೋಡಿಕೊಂಡರು.

ಈ ಬಗ್ಗೆ ವಿರುಪಮಾ ಉದ್ಬಾಳ ಮಾತನಾಡಿ, “ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಗರ್ಭಿಣಿಯರು, ಬಾಣಂತಿಯರು, ನವಜಾತ ಶಿಶುಗಳು ಹಾಗೂ ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಇಂತಹ ಸೂಕ್ಷ್ಮ ವಿಭಾಗದಲ್ಲಿ ಕನಿಷ್ಠ ಮೂಲಸೌಕರ್ಯಗಳು ಸಮರ್ಪಕವಾಗಿ ಇಲ್ಲದಿರುವುದು ಆತಂಕಕಾರಿ ಸಂಗತಿ. ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾದ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಇರುವುದು ಸರಿಯಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

WhatsApp Image 2026 11 11 at 10.30.08 PM

ಆಸ್ಪತ್ರೆಗೆ ಬರುವ ಪ್ರತಿಯೊಬ್ಬ ರೋಗಿಯೂ ಆರ್ಥಿಕವಾಗಿ ಸದೃಢರಾಗಿರುವುದಿಲ್ಲ. ದೂರದ ಗ್ರಾಮಗಳಿಂದ ಚಿಕಿತ್ಸೆಗೆ ಬರುವ ಬಡ ಕುಟುಂಬಗಳು ಈಗಾಗಲೇ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಇಂತಹ ಸಂದರ್ಭದಲ್ಲಿ ಕನಿಷ್ಠ ಕುಡಿಯುವ ನೀರಿಗೂ ಹಣ ಖರ್ಚು ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ಅವರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಅವರು ಹೇಳಿದರು.

ಅಧಿಕಾರಿಗಳ ವಿರುದ್ಧ ಆಕ್ರೋಶ

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಆಡಳಿತದ ಪ್ರಮುಖ ಜವಾಬ್ದಾರಿಯಾಗಿದೆ. ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾದರೆ ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಆಸ್ಪತ್ರೆಯ ನೀರಿನ ಟ್ಯಾಂಕ್‌ಗಳು, ಶುದ್ಧೀಕರಣ ಘಟಕಗಳು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಪರಿಶೀಲಿಸಬೇಕು. ರಾತ್ರಿ ವೇಳೆಯೂ ರೋಗಿಗಳಿಗೆ ನೀರು ಲಭ್ಯವಾಗುವಂತೆ ಅಗತ್ಯ ಸಿಬ್ಬಂದಿ ಮತ್ತು ನಿರ್ವಹಣಾ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಈ ಸಮಸ್ಯೆಯನ್ನು ಆಸ್ಪತ್ರೆಯ ಆಡಳಿತ ಮಂಡಳಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ತಕ್ಷಣ ಪರಿಹಾರ ಕಲ್ಪಿಸಬೇಕು. ಆಸ್ಪತ್ರೆಯ ಎಲ್ಲ ವಾರ್ಡ್‌ಗಳಲ್ಲಿಯೂ ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ರೋಗಿಗಳು ಹಾಗೂ ಅವರ ಸಂಬಂಧಿಕರು ಆಗ್ರಹಿಸಿದ್ದಾರೆ.

WhatsApp Image 2026 11 11 at 10.30.09 PM

ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ವೈದ್ಯಕೀಯ ಸೇವೆ ಮತ್ತು ಔಷಧಿಗಳ ಜೊತೆಗೆ ಕುಡಿಯುವ ನೀರಿನಂತಹ ಕನಿಷ್ಠ ಮೂಲಭೂತ ಸೌಲಭ್ಯವನ್ನೂ ಒದಗಿಸಲು ಸಾಧ್ಯವಾಗದಿದ್ದರೆ ಸರ್ಕಾರಿ ಆಸ್ಪತ್ರೆಗಳ ಸೇವೆಯ ಉದ್ದೇಶವೇನು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಇದನ್ನೂ ಓದಿ : ಅನುಭವ ಮಂಟಪ ಉತ್ಸವ | ಹಂಸಲೇಖ, ಸಿ.ಆರ್.ಚಂದ್ರಶೇಖರ್‌ ಸೇರಿ ನಾಲ್ವರಿಗೆ ಪ್ರಶಸ್ತಿ ಘೋಷಣೆ

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು...

ಬಿಜೆಪಿಗೆ ಯಾಕಿಷ್ಟೊಂದು ಆತಂಕ: ರಾಮನವಮಿ-ಅಯೋಧ್ಯೆ ಪ್ರವಾಸದ ನಡುವೆ ಅಖಿಲೇಶ್ ಯಾದವ್ ಪ್ರಶ್ನೆ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡುವ ತಮ್ಮ ಯೋಜಿತ ಪ್ರವಾಸದ ಕುರಿತು...