ಸಿಂಧನೂರು | ದಲಿತರ ಅಭಿವೃದ್ಧಿಯಿಲ್ಲದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ: ಅರ್ಜುನ ಗೊಳಸಂಗಿ

Date:

ಸ್ವಾತಂತ್ರ್ಯಕ್ಕೆ ಸುಮಾರು ಏಳು ದಶಕಗಳು ಕಳೆದರೂ ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಇನ್ನೂ ಸಂಪೂರ್ಣವಾಗಿ ನಿವಾರಣೆಯಾಗಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ ಇದ್ದರೂ ಬಂಡವಾಳಶಾಹಿಗಳ ಪ್ರಭಾವ ಹೆಚ್ಚುತ್ತಿರುವ ಕಾರಣ ದಲಿತ ಸಮುದಾಯದವರು ಇನ್ನೂ ಹಲವು ಕ್ಷೇತ್ರಗಳಲ್ಲಿ ಹಿಂದುಳಿದ ಸ್ಥಿತಿಯಲ್ಲಿದ್ದಾರೆ. ದಲಿತ ಸಮುದಾಯದ ಸಮಗ್ರ ಅಭಿವೃದ್ಧಿಯಾಗುವವರೆಗೆ ದೇಶದ ನಿಜವಾದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ದಲಿತ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರು ಅರ್ಜುನ ಗೊಳಸಂಗಿ ಅಭಿಪ್ರಾಯಪಟ್ಟರು.

- Advertisement -

ಅವರು ಸಿಂಧನೂರು ನಗರದ ಮಹಿಳಾ ಕಾಲೇಜಿನಲ್ಲಿ ನಡೆದ ದಲಿತ ಸಾಹಿತ್ಯ ಪರಿಷತ್ ಸದಸ್ಯರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಸಮಾಜದ ಕಟ್ಟಕಡೆಯ ದಲಿತ ವ್ಯಕ್ತಿಗೂ ಸಂವಿಧಾನಬದ್ಧವಾಗಿ ದೊರೆಯಬೇಕಾದ ನ್ಯಾಯ ಇನ್ನೂ ಸಂಪೂರ್ಣವಾಗಿ ತಲುಪಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ ಇದ್ದರೂ ಅಧಿಕಾರ ಮತ್ತು ಸಂಪತ್ತಿನ ಮೇಲೆ ಬಂಡವಾಳಶಾಹಿಗಳ ಹಿಡಿತ ಹೆಚ್ಚಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ತಳಸಮುದಾಯಗಳ ಮೇಲಿನ ಶೋಷಣೆ ಮತ್ತು ಅಸ್ಪೃಶ್ಯತೆ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ಅಸ್ಪೃಶ್ಯತೆ ಮುಕ್ತ ರಾಷ್ಟ್ರ ನಿರ್ಮಾಣ ಮಾಡುವುದು ದಲಿತ ಸಾಹಿತ್ಯ ಪರಿಷತ್‌ನ ಮೂಲ ಆಶಯವಾಗಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳು ಪ್ರತಿಯೊಬ್ಬರಿಗೂ ದೊರೆಯುವಂತಾಗಬೇಕು ಎಂದು ಅವರು ಹೇಳಿದರು.

ಬಯಲು ಬಹಿರ್ದೆಸೆ ಮುಕ್ತ, ಗುಡಿಸಲು ಮುಕ್ತವೆಂದು ರಾಜ್ಯ ಮತ್ತು ರಾಷ್ಟ್ರ ನಿರ್ಮಿಸುವ ಕುರಿತು ರಾಜ್ಯ ಮತ್ತು ಕೇಂದ್ರ ಸರಕಾರ ಘೋಷಣೆಗಳಾಗಿಯೇ ಉಳಿದಿವೆ. ದಲಿತರಿಗೆ ಮುಖ್ಯಮಂತ್ರಿ ಆಗುವ ಅರ್ಹತೆ ಇದ್ದರೂ ಸಹ ವ್ಯವಸ್ಥಿತ ಕುತಂತ್ರದ ಮೂಲಕ ಅಧಿಕಾರವನ್ನು ಕಸಿದುಕೊಳ್ಳಲಾಗುತ್ತಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ದಲಿತ ಮತ್ತು ಮುಸ್ಲಿಮರು ಮುಖ್ಯಮಂತ್ರಿ ಆಗದಿರುವುದು ದುರಂತದ ಸಂಗತಿ ರಾಜಕೀಯ ಅಧಿಕಾರ ಅಷ್ಟೇ ಅಲ್ಲ, ಪತ್ರಿಕೆಗಳು ಮತ್ತು ಟಿವಿ ಚಾನಲ್‌ಗಳು ಬಂಡವಾಳಶಾಹಿಗಳ ಹಿಡಿತದಲ್ಲಿವೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಹುಸೇನಪ್ಪ ಅಮರಾಪುರ, ತಾಯರಾಜ್, ಡಿ. ಎಚ್. ಕಂಬಳಿ, ಶರಣು ಮುದ್ದಮ್ಮಗುಡ್ಡಿ, ಕರಿಗೂಳಿ, ಶೋಭಾ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....