ಸಿಂಧನೂರು | ಪೊಲೀಸರಂತೆ ನಟಿಸಿ ಬೈಕ್ ಸವಾರನಿಂದ ಚಿನ್ನಾಭರಣ ಕಳವು

Date:

ಸಿಂಧನೂರು ಪೊಲೀಸರೆಂದು ನಂಬಿಸಿ ಬೈಕ್ ಸವಾರನನ್ನು ಅಡ್ಡಗಟ್ಟಿದ ಇಬ್ಬರು ಅಪರಿಚಿತರು, ಆತನ ಬಳಿಯಿದ್ದ ಚಿನ್ನಾಭರಣಗಳನ್ನು ವಂಚಿಸಿ ಕಳ್ಳತನ ಮಾಡಿರುವ ಘಟನೆ ನಗರದ ರಾಯಚೂರು ರಸ್ತೆಯ ವೈ.ಎಸ್.ಆರ್ ಶಾಲೆ ಸಮೀಪ ನಡೆದಿದೆ.

- Advertisement -

ತಾಲ್ಲೂಕಿನ ಜವಳಗೇರಾ ಗ್ರಾಮದ ಎಂ. ಅಮರೇಶ ಅವರು ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ಇಬ್ಬರು ವ್ಯಕ್ತಿಗಳು ತಾವು ಪೊಲೀಸರು ಎಂದು ವಾಹನ ನಿಲ್ಲಿಸಿದ್ದಾರೆ. ಮುಂದೆ ಕಳ್ಳರಿದ್ದಾರೆ, ನಿಮ್ಮ ಮೈಮೇಲಿನ ಚಿನ್ನಾಭರಣಗಳನ್ನು ತೆಗೆದು ಕೊಡಿ. ಅವುಗಳನ್ನು ಚೀಲದಲ್ಲಿ ಸುರಕ್ಷಿತವಾಗಿ ಹಾಕಿಕೊಡುವುದಾಗಿ ಹೇಳಿ ನಂಬಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಗಲಕೋಟೆ | ಉತ್ಪಾದನೆ ಕುಸಿತ, ಭರ್ಜರಿ ಬೇಡಿಕೆ: ದಾಖಲೆ...

ಮುಂಗಾರು ಮಳೆಯ ಕೊರತೆ, ಭೀಕರ ಬರದ ಪರಿಣಾಮ ಹೊಲಗಳಲ್ಲಿ ಮೆಕ್ಕೆಜೋಳದ ಇಳುವರಿ ಕುಸಿದಿದೆ. ಆದರೆ, ಮಾರುಕಟ್ಟೆಯಲ್ಲಿ ಮಾತ್ರ ಮೆಕ್ಕೆಜೋಳಕ್ಕೆ ಚಿನ್ನದ ಬೆಲೆ ಬಂದಿದೆ! ಕಡಿಮೆ ಬೆಲೆಯಿಂದ ವರ್ಷಗಟ್ಟಲೆ ನಷ್ಟ ಅನುಭವಿಸಿದ್ದ ಬೆಳೆಗಾರರಿಗೆ ಈ...

ಏಳು ಕೊಲೆಗಳು ಮತ್ತು ಮನುಷ್ಯ ಮೃಗ!: ಕ್ರೋಧ, ಕ್ರೌರ್ಯ,...

ಮನುಷ್ಯತ್ವದ ಮುಖವಾಡ ಕಳಚಿದಾಗಒಳಗಿನ ಮೃಗ ಎಚ್ಚರಗೊಳ್ಳುತ್ತದೆ…ವಿವೇಕದ ಬೆಳಕು ಆರಿದಾಗಕ್ರೋಧವೇ ದಾರಿದೀಪವಾಗುತ್ತದೆ… ಬುದ್ಧಿಯೇ ಅದರ ಆಯುಧವಾದಾಗಸೇಡಿನ ಯೋಚನೆ ಸಂಚಾಗುತ್ತದೆ…ಪರರ ನೋವಿನಲ್ಲಿ ಸುಖ ಕಾಣುವ ಮನಸ್ಸುಕ್ರೌರ್ಯದ ಪರಮಾವಧಿ ತಲುಪುತ್ತದೆ… ಸುತ್ತಲಿನವರ ಮೌನ, ನಿರ್ಲಕ್ಷ್ಯಕೆಲವೊಮ್ಮೆ ಅಪಾಯಕ್ಕೆ ಆಹ್ವಾನವಾಗುತ್ತದೆ…ಕಾಲ ಮಿಂಚುವ ಮುನ್ನ...

ಮೀಸಲಾತಿ ಬಗ್ಗೆ ಮಾತನಾಡುವ ಮೊದಲು ತಮ್ಮ ಕುಟುಂಬದ ರಾಜಕೀಯ...

ಮೂರು ತಲೆಮಾರುಗಳಿಂದ ರಾಜಕೀಯ ಅಧಿಕಾರ ಅನುಭವಿಸುತ್ತಿರುವ ದೇವೇಗೌಡರ ಕುಟುಂಬಕ್ಕೆ ಇತರರ ಮೀಸಲಾತಿಯ ಬಗ್ಗೆ ಮಾತನಾಡುವ ನೈತಿಕ ಅರ್ಹತೆ ಇದೆಯೇ? “ಮೀಸಲು ಅನುಕೂಲ ಪಡೆದವರೇ ಮತ್ತೆ ಮತ್ತೆ ಪಡೆಯುತ್ತಿದ್ದಾರೆ, ನನ್ನ ಜನ ಅನಾಥರಾಗಿದ್ದಾರೆ” ಎಂಬ ಕೇಂದ್ರ...

ಅವರ ಮಾತು ನಂಬಿದ ಅಮರೇಶ ಅವರು ಎರಡು ತೊಲೆಯ ಚಿನ್ನದ ಸರ ಹಾಗೂ ಒಂದು ತೊಲೆಯ ಉಂಗುರವನ್ನು ನೀಡಿದ್ದಾರೆ. ಆರೋಪಿಗಳು ಆಭರಣಗಳನ್ನು ಚೀಲದಲ್ಲಿ ಹಾಕಿರುವುದಾಗಿ ಹೇಳಿ ಮತ್ತೊಂದು ಚೀಲವನ್ನು ಅಮರೇಶ ಅವರಿಗೆ ಹಸ್ತಾಂತರಿಸಿದ್ದಾರೆ. ಸ್ವಲ್ಪ ದೂರ ಸಾಗಿದ ಬಳಿಕ ಅನುಮಾನಗೊಂಡು ಚೀಲ ಪರಿಶೀಲಿಸಿದಾಗ ಅದರಲ್ಲಿ ಚಿನ್ನಾಭರಣಗಳ ಬದಲಿಗೆ ಕಲ್ಲುಗಳು ಇರುವುದು ಪತ್ತೆಯಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಲಿಂಗಸುಗೂರು ಹಿರೇಉಪ್ಪೇರಿ ಗ್ರಾಮದಲ್ಲಿ ಸಾಗವಾನಿ ಮರ ಅಕ್ರಮ ಸಾಗಾಟ ಜಪ್ತಿ

ತಕ್ಷಣವೇ ಅಮರೇಶ ಅವರು ಸಿಂಧನೂರು ನಗರ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಂದಾಪುರದಲ್ಲಿ ಸಂಭ್ರಮದ ‘ನಮ್ಮೂರ ದೀಪಾವಳಿ – ನಮ್ಮೂರ ಪ್ರತಿಭೆಗಳಿಗೆ’ ಕಾರ್ಯಕ್ರಮ

ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಅಕ್ಷರ ಸಾಂಸ್ಕೃತಿಕ ಸಂಸ್ಥೆ ಹಾಗೂ...

ಕುಂದಾಪುರ–ಹೊಸಂಗಡಿ ರಸ್ತೆಯಲ್ಲಿ ಸಾವಿನ ಭೀತಿ: ಭಾರೀ ವಾಹನಗಳ ಸಂಚಾರಕ್ಕೆ ಕಡಿವಾಣ ಹಾಕಿ

ಕುಂದಾಪುರದಿಂದ ಹೊಸಂಗಡಿಯವರೆಗಿನ ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ರಸ್ತೆ ಅಗಲೀಕರಣ ಕಾಮಗಾರಿಯನ್ನು...

ಚಿಕ್ಕಮಗಳೂರು | ಅಕ್ರಮ ಮಾದಕ ವಸ್ತು ಸೇವನೆ:  ಪ್ರಕರಣ ದಾಖಲು 

ನಗರದ ಐ.ಜಿ ರಸ್ತೆಯಲ್ಲಿ ಗಸ್ತಿನಲ್ಲಿರುವಾಗ ಮಧುವನ ಲೇ ಔಟ್ ನ ಪಾರ್ಕ್...