ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ನೂತನ ಅಧ್ಯಕ್ಷರಾಗಿ ಸಿಂಧನೂರು ವಿಧಾನಸಭಾ ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು.
ಬೆಂಗಳೂರಿನ ನಿಗಮದ ಕಚೇರಿಯಲ್ಲಿ ಸರಸ್ವತಿ ಮತ್ತು ಗಣಪತಿ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿದ ಹಂಪನಗೌಡ ಬಾದರ್ಲಿ ಅವರು, ‘ರೈತರ ಸರ್ವಾಂಗೀಣ ಹಿತಕ್ಕೆ ತಕ್ಕಂತೆ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತೇನೆ’ ಎಂದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ
ದಾಸಶ್ರೇಷ್ಠ ಕನಕದಾಸರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸುವ ಮೂಲಕ ಅವರ 539ನೇ ಜಯಂತಿಯನ್ನು ಆಚರಿಸಲಾಯಿತು. ಮಾಜಿ ಸಚಿವ ಅಮರೇಗೌಡ ಬಯ್ಯಾಪುರ, ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಹಾಗೂ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.



