ಸಿಂಧನೂರು | ಡಿ.31ರವರೆಗೆ ತುಂಗಭದ್ರಾ ಎಡದಂಡೆ ನಾಲೆಗೆ ನೀರು ಹರಿಸಿ; ಇಲ್ಲದಿದ್ದರೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ: ರೈತರ ಒತ್ತಾಯ

Date:

ತುಂಗಭದ್ರಾ ಜಲಾಶಯದಿಂದ ರೈತರ ಕೃಷಿ ಬೆಳೆಗಳ ರಕ್ಷಣೆಗಾಗಿ ಡಿಸೆಂಬರ್ 31ರವರೆಗೆ ತುಂಗಭದ್ರಾ ಎಡದಂಡೆ ಮುಖ್ಯ ನಾಲೆಗೆ ನಿರಂತರವಾಗಿ ನೀರು ಹರಿಸಬೇಕು. ಒಂದು ವೇಳೆ ನೀರು ಹರಿಸಲು ಸಾಧ್ಯವಾಗದಿದ್ದರೆ ನೀರಿನ ಅಭಾವದಿಂದ ಬೆಳೆ ನಷ್ಟ ಅನುಭವಿಸುವ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ತುಂಗಭದ್ರಾ ಜಲಾಶಯ ರೈತ ಒಕ್ಕೂಟ ಹೋರಾಟ ಸಮಿತಿ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಒತ್ತಾಯಿಸಿವೆ.

- Advertisement -

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರುಪಾದಿ ಕೆ. ಗೋಮರ್ಸಿ, ಎಡದಂಡೆ ನಾಲೆಯ ನೀರನ್ನು ಅವಲಂಬಿಸಿ ಸಾವಿರಾರು ರೈತರು ಭತ್ತ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದಿದ್ದಾರೆ. ಕೃಷಿ ಚಟುವಟಿಕೆಗಳಿಗಾಗಿ ರೈತರು ಲಕ್ಷಾಂತರ ರೂಪಾಯಿ ಸಾಲ ಮಾಡಿ ಬಂಡವಾಳ ಹೂಡಿದ್ದಾರೆ. ಇಂತಹ ಸಂದರ್ಭದಲ್ಲಿ ನಾಲೆಗೆ ಸಮರ್ಪಕವಾಗಿ ನೀರು ಹರಿಸದಿದ್ದರೆ ಬೆಳೆಗಳು ಒಣಗಿ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾಲಜ್ಞಾನ ಸಾರಿದ ಮಂಟೇದಲಿಂಗಯ್ಯ’: ನೀಲಗಾರರ ಸ್ವರವಚನಗಳಲ್ಲಿ ಅಡಗಿರುವ ಜನಪದ...

ಕಾಲದ ಬದಲಾವಣೆಯನ್ನು ಗ್ರಹಿಸುವ ಕಾಲಜ್ಞಾನ, ಎಲ್ಲರೊಳಗೂ ಬೆಳಗುವ ಪರಂಜ್ಯೋತಿಯ ತತ್ವ, ಕಪಟ ಧಾರ್ಮಿಕ ಆಚರಣೆಗಳನ್ನು ಪ್ರಶ್ನಿಸುವ ಮಂಟೇಸ್ವಾಮಿಯ ನಿಲುವು ಮತ್ತು ತಲೆಮಾರುಗಳಿಂದ ಈ ಮಹಾಕಾವ್ಯವನ್ನು ಜೀವಂತವಾಗಿಟ್ಟಿರುವ ನೀಲಗಾರರ ಗಾಯನ ಪರಂಪರೆ ತಂಬೂರಿಯ ನಾದ ಮೊಳಗುತ್ತದೆ....

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ...

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ ಬಹಳವಾಗಿ ಪ್ರಭಾವಿಸಿದವು. ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ, ಒಬ್ಬ ವಿಧವೆಯಾಗಿ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಧಾರ್ಮಿಕ ಹಿನ್ನೆಲೆಯ ಮಹಿಳೆಯಾಗಿ ಮತ್ತು ವಿದೇಶಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ರೈತರ ಬೆಳೆಗಳನ್ನು ಉಳಿಸಲು ಡಿಸೆಂಬರ್ 31ರವರೆಗೆ ನಾಲೆಗೆ ನಿರಂತರವಾಗಿ ನೀರು ಹರಿಸುವುದು ಅಗತ್ಯವಾಗಿದೆ. ನೀರಿನ ಲಭ್ಯತೆ ಮತ್ತು ಹಂಚಿಕೆ ಕುರಿತು ಸರ್ಕಾರ, ನೀರಾವರಿ ಇಲಾಖೆ ಹಾಗೂ ಈ ಭಾಗದ ಜನಪ್ರತಿನಿಧಿಗಳು ಕೂಡಲೇ ಸೂಕ್ತ ನಿರ್ಧಾರ ಕೈಗೊಂಡು ರೈತರ ಹಿತ ಕಾಪಾಡಬೇಕು. ಕೇವಲ ಭರವಸೆ ನೀಡದೆ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಾಲೆಗೆ ಡಿಸೆಂಬರ್ 31ರವರೆಗೆ ನೀರು ಹರಿಸಲು ಸಾಧ್ಯವಾಗದಿದ್ದರೆ, ಬೆಳೆ ನಷ್ಟ ಅನುಭವಿಸುವ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ಘೋಷಿಸಿ ವಿತರಿಸಬೇಕು. ರೈತರ ಕೃಷಿ ವೆಚ್ಚ ಹಾಗೂ ಸಾಲದ ಹೊರೆಯನ್ನು ಪರಿಗಣಿಸಿ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ರೈತರ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೂಡಲೇ ಸ್ಪಂದಿಸದಿದ್ದರೆ ನವೆಂಬರ್ 18ರಂದು ಸಿಂಧನೂರು ನಗರ ಬಂದ್ ಆಚರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಬಂದ್‌ಗೆ ವ್ಯಾಪಾರಸ್ಥರು, ವರ್ತಕರು, ವಿವಿಧ ಸಂಘಟನೆಗಳು, ಸಾರ್ವಜನಿಕರು ಹಾಗೂ ರೈತರು ಸ್ವಯಂಪ್ರೇರಿತವಾಗಿ ಬೆಂಬಲ ನೀಡುವಂತೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕುಡಿಯುವ ನೀರಿಗೂ ತತ್ವಾರ; ರೋಗಿಗಳ ಪರದಾಟ!

ಈ ಸಂದರ್ಭದಲ್ಲಿ ರಾಮಕೃಷ್ಣ ಬಾಲಯ್ಯ ಕ್ಯಾಂಪ್, ನಿರುಪಾದಿ ಸುಲ್ತಾನಾಪುರ, ಗಿರಿಬಾಬು, ಮಲ್ಲಿಕಾರ್ಜುನ ರೆಡ್ಡಿ ಸಾಸಲಮರಿ, ಶಿವರಾಜ್ ಸಾಸಲಮರಿ, ಹನುಮಪ್ಪ ತಿಡಿಗೋಳ, ವೆಂಕೋಬ ರೆಡ್ಡಿ ಮಲ್ಲಾಪುರ, ನಾಗರಾಜು ಬಿಂಗಿ, ಸೋಮನಗೌಡ ಗೊರೆಬಾಳ, ಯಮನಪ್ಪ ಪಗಡದಿನ್ನಿ, ಅಯ್ಯಪ್ಪ ಬನ್ನಿಗನೂರು, ಅಯ್ಯಪ್ಪ ಮೇಟಿ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಲ್ಲಾಪುರ | ಪುರೋಹಿತರ ಮನೆಗೆ ಕನ್ನ; ₹83,500 ಮೌಲ್ಯದ ತಾಮ್ರ, ಹಿತ್ತಾಳೆ ಪಾತ್ರೆಗಳು ಕಳವು

ಯಲ್ಲಾಪುರ: ಮನೆಯ ಹಿಂದಿನ ಬಾಗಿಲಿನ ಚಿಲಕದ ಹುಕ್ಕನ್ನು ಮುರಿದು ಒಳನುಗ್ಗಿದ ಕಳ್ಳರು...

ದಕ್ಷಿಣ ಕನ್ನಡ | SIR ದುರುಪಯೋಗ ವಿರುದ್ಧ ಎಸ್‌.ಕೆ.ಎಸ್‌.ಎಸ್.ಎಫ್ ಪ್ರತಿಭಟನೆ

SIR ರದ್ದತಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾ...

ಸಾಗರ ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ವರ್ಗಾವಣೆ; ಜಿ.ಹೆಚ್ ಸತ್ಯನಾರಾಯಣ ನೇಮಕ

ಶಿವಮೊಗ್ಗ ಜಿಲ್ಲೆಯ, ಸಾಗರ ಉಪವಿಭಾಗಾಧಿಕಾರಿಯಾಗಿ (AC) ಕಾರ್ಯನಿರ್ವಹಿಸುತ್ತಿದ್ದ ಕೆ.ಎ.ಎಸ್. (ಕಿರಿಯ ಶ್ರೇಣಿ)...

ಧಾರವಾಡ | 47 ಸಾವಿರ ರೈತರಿಗೆ ಬೆಳೆಹಾನಿ ಪರಿಹಾರ: ರೂ. 11.75 ಕೋಟಿ ಬಿಡುಗಡೆಗೆ ಅನುಮೋದನೆ

ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ ಆರಂಭವಾಗಿದ್ದು,...