ರಾಯಚೂರು | ತುಂಗಭದ್ರ ಎಡದಂಡೆ ಕಾಲುವೆ ಕೆಳ ಭಾಗಕ್ಕೆ ನೀರು ಹರಿಸಲು ರೈತ ಸಂಘ ಆಗ್ರಹ

Date:

  • ರೈತರು ತಾಳ್ಮೆ ಕಳೆದುಕೊಂಡರೆ ಅಧಿಕಾರಿಗಳಿಗೂ ಹಾಗೂ ಜನಪ್ರತಿನಿಧಿಗಳಿಗೆ ಉಳಿಗಾಲವಿಲ್ಲ.
  • ಈ ಭಾಗದ ರೈತರಿಗೆ ಬೇಕಾದ ನೀರು ಒದಗಿಸುವಲ್ಲಿ ಸರ್ಕಾರ ಹಾಗೂ ಅಧಿಕಾರಿಗಳು ವಿಫಲರಾಗಿದ್ದಾರೆ.

ತುಂಗಭದ್ರ ಎಡದಂಡೆ ಕಾಲುವೆ ಕೆಳಭಾಗಕ್ಕೆ ನೀರು ಹರಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲಿಸಿ ಸಿರವಾರ ಪಟ್ಟಣದಲ್ಲಿ ಸ್ವಯಂ ಪ್ರೇರಿತವಾಗಿ ಬಂದ್‌ ಘೋಷಿಸಿದ ವ್ಯಾಪಾರಸ್ಥರು ಹೋರಾಟಕ್ಕೆ ಬೆಂಬಲ ಸೂಚಿಸಿದರು.

ರೈತರ ಪ್ರತಿಭಟನೆ ಕರೆ ಹಿನ್ನಲೆಯಲ್ಲಿ ಬೆಳಿಗ್ಗೆಯಿಂದಲೇ ಸಿರವಾರ ಪಟ್ಟಣದಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ವ್ಯಾಪಾರಸ್ಥರು ರೈತರ ಹೋರಾಟಕ್ಕೆ ಬೆಂಬಲಿಸಿದರು. ಪಟ್ಟಣದ ನೀರಾವರಿ ಇಲಾಖೆ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ ರೈತರು ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಶಾಸಕ ಗಂಗಾಧರ ನಾಯಕ ಮಾತನಾಡಿ, “ರೈತರು ತಾಳ್ಮೆ ಕಳೆದುಕೊಂಡರೆ ಅಧಿಕಾರಿಗಳಿಗೂ ಹಾಗೂ ಜನಪ್ರತಿನಿಧಿಗಳಿಗೆ ಉಳಿಗಾಲ ಇರುವುದಿಲ್ಲ. ಸಿರವಾರ ತಾಲೂಕಿನಲ್ಲಿ ರೈತರು ಪ್ರತಿ ವರ್ಷ ತುಂಗಭದ್ರ ಕಾಲುವೆ ನೀರಿಗಾಗಿ ಹೋರಾಟ ನಡೆಸುತ್ತಲೇ ಇದ್ದಾರೆ. ನಾವುಗಳ ಹೋರಾಟ ಮಾಡಿದರೂ ನೀರು ಪಡೆಯದ ದೌರ್ಭಾಗ್ಯ ನಮ್ಮದಾಗಿದೆ, ನಾವು ಕೇಳುತ್ತಿರುವುದು ನಮ್ಮ ಪಾಲಿನ ನೀರಾಗಿದೆ. ಅದನ್ನು ನಾವು ಹೋರಾಟದ ಮೂಲಕವೇ ಪಡೆಯುವುದು ವಿಪರ್ಯಸವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಮಾತನಾಡಿ, “ಈ ಭಾಗದ ರೈತರಿಗೆ ಬೇಕಾದ ನೀರು ಒದಗಿಸುವಲ್ಲಿ ಸರ್ಕಾರ ಹಾಗೂ ಅಧಿಕಾರಿಗಳು ವಿಫಲರಾಗಿದ್ದಾರೆ. ನೀರಾವರಿ ಇಲಾಖೆ ಎನ್ನುವುದು ರೈತರಿಗಾಗಿ ಕೆಲಸ ಮಾಡಬೇಕು ಬದಲಿಗೆ ಬೇಕಾಬಿಟ್ಟಿಯಾಗಿ ಕೆಲಸ ಮಾಡಬಾರದು, ಇನ್ನು ಈ ಭಾಗದ ಜನ ಪ್ರತಿನಿಧಿಗಳು ಮೇಲ್ಭಾಗದಲ್ಲಿ ಜರುಗುತ್ತಿರುವ ಅಕ್ರಮ ನೀರಾವರಿಯ ಬಗ್ಗೆ ದ್ವನಿ ಎತ್ತಬೇಕು, ಅಂದಾಗ ಮಾತ್ರ ನಮ್ಮ ರೈತರಿಗೆ ನೀರು ಸಿಗಲು ಸಾಧ್ಯ. ಇಲ್ಲವಾದಲ್ಲಿ ನಮ್ಮ ರೈತರು ಮಳೆಯನ್ನು ನಂಬಿಕೊಂಡು ಬೆಳೆಗಳನ್ನು ಬೆಳೆಯಬೇಕಾದಿತು. ಕೃಷಿ ಕೆಲಸ ತೊರೆದು ಬೇರೆ ಕೆಲಸಕ್ಕೆ ಹೋಗಬೇಕಾದ ಪರಿಸ್ಥಿರಿ ಬರುತ್ತದೆ, ಅನ್ನದಾತನಿಗೆ ಕೆಲಸವಿಲ್ಲ ಎಂದಾದರೆ ಅಧಿಕಾರಿಗಳಾಗಲಿ ಜನಪ್ರತಿನಿಧಿಗಳಾಗಲಿ ಹೊಟ್ಟೆಗೆ ಅನ್ನ ಸಿಗುವುದಿಲ್ಲ ಎನ್ನುವುದು ಅರಿತುಕೊಳ್ಳಬೇಕು” ಎಂದು ಕಿಡಿಕಾರಿದರು.

ಕಾಂಗ್ರೇಸ್ ಮುಖಂಡ ಚುಕ್ಕಿ ಸೂಗಪ್ಪ ಸಾಹುಕಾರ ಮಾತನಾಡಿ, “ತುಂಗಭದ್ರ ಎಡದಂಡೆ ಕಾಲುವೆಗೆ ನೀರು ಬಾರದೇ ರೈತರು ಕಂಗಾಲಾಗಿದ್ದಾರೆ. ಇದರ ಬಗ್ಗೆ ಅಧಿಕಾರಿಗಳಿಗೆ ಕೇಳಿದರೆ ಮೇಲ್ಭಾಗದಲ್ಲಿ ನೀರು ಸರಿಯಾಗಿ ನಿರ್ವಹಣೆಯಾಗುತ್ತಿಲ್ಲ ಎಂದು ಸಬೂಬು ಕೊಡುತ್ತಾರೆ. ರೈತರು ಸುಮ್ಮನಿದ್ದಾರೆ ಎಂದರೆ ಅವರ ಕೈಯಲ್ಲಿ ಏನು ಮಾಡಲು ಸಾಧ್ಯವಿಲ್ಲ ಎನ್ನುವುದು ಅರ್ಥವಲ್ಲ, ಬದಲಿಗೆ ರೈತರು ತಾಳ್ಮೆಯಿಂದ ಇದ್ದಾರೆ. ಸಮಪರ್ಕವಾಗಿ ನೀರು ಹರಿಸದೇ ಹೋದಲ್ಲಿ ಮೇಲ್ಭಾಗದಲ್ಲಿ ಎಲ್ಲಾ ರೈತರೊಂದಿಗೆ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ ? ರಾಯಚೂರು | ಗ್ರಾಮಗಳ ಸಮಗ್ರ ಅಭಿವೃದ್ಧಿ ಒತ್ತಾಯಿಸಿ ಪ್ರತಿಭಟನೆ

ಪ್ರತಿಭಟನೆಯಲ್ಲಿ ಸಿರವಾರ ತಾಲೂಕಿನ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ರೈತಪರ ಸಂಘಟನೆ ಮುಖಂಡರು ಹಾಗೂ ಕನ್ನಡಪರ ಹಾಗೂ ದಲಿತಪರ ಸಂಘಟನೆ ಮುಖಂಡರು ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡಿದರು.

ಬಿಗಿ ಪೋಲಿಸ್ ಬಂದೋಬಸ್ತ್ : ರೈತರು ಹಮ್ಮಿಕೊಂಡಿರುವ ಹೋರಾಟದಲ್ಲಿ ಯಾವುದೆ ಅಹಿತಕರ ಘಟನೆ ಜರುಗದಂತೆ ಸಿರವಾರ ಸಿಪಿಐ ಶಶಿಕಾಂತ್.ಎ, ಸಿರವಾರ ಪಿ.ಎಸ್.ಐ ಗುರುಚಂದ್ರ ಯಾದವ್ ನೇತೃತ್ವದಲ್ಲಿ ಪಟ್ಟಣದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಒದಗಿಸಲಾಗಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಿಸಿಲಿನ ತಾಪಕ್ಕೆ ನಿರ್ಜಲೀಕರಣ; ಇಬ್ಬರು ಮಕ್ಕಳು ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಭೀಕರ ಬಿಸಿಲಿನ ತಾಪಕ್ಕೆ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಮಾಂಗಲ್ಯ ಧಾರಣೆ ಬಳಿಕ ಮತಗಟ್ಟೆಗೆ ಬಂದು ಮತ ಚಲಾಯಿಸಿದ ದಂಪತಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಚುನಾವಣೆ ಹಾಗೂ ಮತದಾನ ಬಹಳ ಮುಖ್ಯ ಪಾತ್ರ ವಹಿಸುತ್ತದೆ....

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ...