ರಾಯಚೂರು | ಕಲ್ಲಿದ್ದಲು ಕಳ್ಳತನ; ಗುತ್ತಿಗೆದಾರ ಮತ್ತು ರೈಲ್ವೇ ಸ್ಟೇಷನ್ ಮಾಸ್ಟರ್ ವಿರುದ್ಧ ಎಫ್‌ಐಆರ್

Date:

ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸೇರಿದ ಕಲ್ಲಿದ್ದಲನ್ನು ಅಕ್ರಮವಾಗಿ ಸಾಗಾಟ ಮಾಡಿದ್ದ ಪ್ರಕರಣದಲ್ಲಿ ರಾಯಚೂರಿನ ಯರಮರಸ್‌ ರೈಲೈ ನಿಲ್ದಾಣದ ಸ್ಟೇಷನ್ ಮಾಸ್ಟರ್ ಮತ್ತು ಗುತ್ತಿಗೆದಾರ ಶ್ರೀನಿವಾಸುಲು ವಿರುದ್ಧ ಎಫ್‌ಐಆರ್ ದಾಖಲಾಗಿದೆ.

- Advertisement -

ಕಲ್ಲಿದ್ದಲು ಕಳ್ಳತನವಾಗಿರುವ ಬಗ್ಗೆ ಯರಮರಸ್ ವಿದ್ಯುತ್ ಉತ್ಪಾದನಾ ಘಟಕದ ಕಾರ್ಯನಿರ್ವಾಹಕ ನಿರ್ದೇಶಕ ಮಹೇಂದ್ರ ಅವರು ರಾಯಚೂರು ಗ್ರಾಮೀಣ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ಕುರಿತು ಕೆಪಿಟಿಸಿಎಲ್‌ ತನಿಖಾ ಸಮಿತಿ ತನಿಖೆ ನಡೆಸಿದ್ದು, ಕಳ್ಳತನ ಬಯಲಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ವಿದ್ಯುತ್ ಘಟಕಗಳಿಗೆ ಸರಬರಾಜು ಮಾಡಬೇಕಿದ್ದ ಕಲ್ಲಿದ್ದಲನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಅನಧಿಕೃತ ಜಾಗಕ್ಕೆ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಅಕ್ರಮದಲ್ಲಿ ಸ್ಟೇಷನ್ ಮಾಸ್ಟರ್ ಮತ್ತು ಗುತ್ತಿಗೆದಾರರ ಕೈವಾಡ ಇರುವುದು ಕಂಡುಬಂದಿದ್ದು, ಇಬ್ಬರ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ.

ಶ್ರೀನಿವಾಸುಲು ಅವರು ರಾಘವೇಂದ್ರ ಎಂಟರ್ ಪ್ರೈಸಸ್ ಹೆಸರಿನಲ್ಲಿ ರೈಲ್ವೆ ವ್ಯಾಗನ್ ಸ್ಬಚ್ಛಗೊಳಿಸುವ ಗುತ್ತಿಗೆ ಪಡೆದಿದ್ದರು. ಅವರು ಕಳೆದ ವಾರ (ನವೆಂಬರ್ 19, 20) ಐದು ಲಕ್ಷ ಮೌಲ್ಯದ 120 ಮೆಟ್ರಿಕ್ ಟನ್ ಕಚ್ಚಾ ಕಲ್ಲಿದ್ದಲು ಕಳ್ಳತನ ಮಾಡಿ, ಯರಮರಸ್ ರೈಲು ನಿಲ್ದಾಣದ ಹೊರ ಭಾಗದಲ್ಲಿ ಶೇಖರಿಸಿದ್ದರು ಎಂದು ಆರೋಪಿಸಲಾಗಿದೆ.

ವ್ಯಾಗನ್‌ನಲ್ಲಿ ಬರುವ ಕಲ್ಲಿದ್ದಲನ್ನು ವಿದ್ಯುತ್‌ ಘಟಕಗಳ ಪ್ರಾಂಗಣದಲ್ಲಿ ಸಂಪೂರ್ಣವಾಗಿ ಸುರಿಯಬೇಕು. ವ್ಯಾಗನ್ ಖಾಲಿಯಾದ ಬಳಿಕ ರೈಲು ಹಿಂದಿರುಗಲು ಹಸಿರು ನಿಶಾನೆ ನೀಡಬೇಕು. ಆದರೆ, ವ್ಯಾಗನ್‌ಗಳಲ್ಲಿ ದೊಡ್ಡ ಪ್ರಮಾಣದ ಕಲ್ಲಿದ್ದಲನ್ನು ಉಳಿಸಿಕೊಂಡು, ರೈಲನ್ನು ವಾಪಸ್ ಕಳುಹಿಸಲಾಗಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...