ರಭಸವಾಗಿ ಹರಿಯುತ್ತಿದ್ದ ನದಿಗೆ ಗಂಡನನ್ನು ತಳ್ಳಿದ ಹೆಂಡತಿ? ಸೇತುವೆ ಮೇಲೆ ಹೈಡ್ರಾಮಾ

Date:

Advertisements

ಫೋಟೋ ತೆಗೆಯುವ ನೆಪದಲ್ಲಿ ಪತ್ನಿ ತನ್ನ ಗಂಡ ತಾತಪ್ಪನನ್ನು ಕೃಷ್ಣಾ ನದಿಗೆ ತಳ್ಳಿರುವ ಆರೋಪದ ಘಟನೆ ರಾಯಚೂರು ತಾಲ್ಲೂಕಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನಡೆದಿದೆ.

ನದಿಗೆ ಬಿದ್ದ ಯುವಕನ ಕಿರುಚಾಟ ಕೇಳಿ ಅಕ್ಕ-ಪಕ್ಕದ ಜಮೀನಿನವರು ಓಡೋಡಿ ಬಂದಿದ್ದಾರೆ. ಬ್ಯಾರೇಜ್ ಮಾರ್ಗವಾಗಿ ಹೊರಟಿದ್ದ ವಾಹನ ಸವಾರರು ಹಾಗೂ ಕೆಬಿಜೆಎನ್‌ಎಲ್ ಸಿಬ್ಬಂದಿ ಕೂಡಲೇ ಕಾರ್ಯಪ್ರವೃತ್ತರಾಗಿ ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಯುವಕನನ್ನು ರಕ್ಷಿಸಿದ್ದಾರೆ.

ಏಪ್ರಿಲ್‌ 10ರಂದು ಮೂರು ತಿಂಗಳ ಹಿಂದೆಯಷ್ಟೇ ಗದ್ದೆಮ್ಮ ಮತ್ತ ತಾತಪ್ಪ ಮದುವೆಯಾಗಿದ್ದು, ಈ ನವ ದಂಪತಿ ಸೇತುವೆ ಮಾರ್ಗದಿಂದ ತೆರಳುವ ಸಂದರ್ಭದಲ್ಲಿ ಬ್ಯಾರೇಜ್ ಮೇಲೆ ಮೇಲೆ ನಿಂತು ಫೋಟೋ ತೆಗೆಸಿಕೊಳ್ಳಲು ನಿರ್ಧರಿಸಿದೆ. ಮೊದಲು ಪತ್ನಿಯ ಫೋಟೋ ತೆಗೆದ ಪತಿ ಬಳಿಕ ತನ್ನ ಫೋಟೋ ತೆಗೆಯುವಂತೆ ಪತ್ನಿಗೆ ಹೇಳಿದ್ದಾನೆ. ಈ ವೇಳೆ ಸೇತುವೆ ಕಟ್ಟೆಯ ಮೇಲೆ ನಿಲ್ಲಿಸಿ ಸಮೀಪದಿಂದ ಫೋಟೊ ಕ್ಲಿಕ್ಕಿಸುವ ನೆಪದಲ್ಲಿ ಪತಿಯನ್ನು ನದಿಗೆ ತಳ್ಳಿದ್ದಾಳೆ ಎನ್ನುವ ಆರೋಪ ಕೇಳಿಬಂದಿದೆ.

Advertisements

ತಾತಪ್ಪನಿಗೆ ಈಜು ಬಂದಿದ್ದರಿಂದ ಹೇಗೋ ಪ್ರಯಾಸಪಟ್ಟು ಈಜಿಕೊಂಡು ಹೋಗಿ ಕಲ್ಲು ಬಂಡೆಯ ಮೇಲೆ ಕುಳಿತು ರಕ್ಷಣೆಗಾಗಿ ಕೂಗಿದ್ದಾರೆ. ಇದೇ ವೇಳೆ “ಕಾಪಾಡಿ ಬ್ರೋ, ಅವಳನ್ನು ಹಿಡಿರಿ ಬ್ರೋ, ಯಾರಿಗಾದ್ರೂ ಫೋನ್ ಮಾಡಿ ಬ್ರೋ ಅಂತ ಜೋರಾಗಿ ಕಿರುಚಿದ್ದಾನೆ” ಎಂದು ವಿಡಿಯೋದಲ್ಲಿ ಸೆರೆಯಾಗಿದೆ. ದಾರಿಹೋಕರು ಇದನ್ನು ಗಮನಿಸಿ ಸ್ಥಳೀಯರಿಂದ ಹಗ್ಗ ತರಿಸಿ ಪ್ರಯಾಸಪಟ್ಟು ರಕ್ಷಣೆ ಮಾಡಿದ್ದಾರೆ.

ನದಿಯಿಂದ ಪಾರಾಗಿ ಬಂದ ಪತಿ, ನನ್ನ ಪತ್ನಿಯೇ ಕೆಳಕ್ಕೆ ತಳ್ಳಿದ್ದಳು ಎಂದು ಆರೋಪಿಸಿದ್ದಾನೆ. ಆದರೆ ಆಕೆ ಗಂಡನೇ ಕಾಲು ಜಾರಿ ಬಿದ್ದಿದ್ದಾನೆ ಎಂದು ಮಹಿಳೆ ವಾದಿಸಿದ್ದಾಳೆ. ಇವರಿಬ್ಬರ ಸಂಭಾಷಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X