ಹಿಂಗಾರು ಮತ್ತು ಮುಂಗಾರು ಜೋಳ ಖರೀದಿ ಸಂಬಂಧಕ್ಕೆ ರೈತರು ಸುಮಾರು ಬಾರಿ ಮನವಿ ಮಾಡಿದರು ರಾಜ್ಯ ಕಾಂಗ್ರೆಸ್ ಸರ್ಕಾರ ಜೋಳ ಖರೀದಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿದರು.
ಮಾನ್ವಿ ನಗರದ ಬಸವ ವೃತ್ತದಲ್ಲಿ ಜಮಾಯಿಸಿದ ಜೆಡಿಎಸ್ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಕೆಲಹೊತ್ತು ರಸ್ತೆ ಮೇಲೆ ಮಲಗಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ನಂತರ ಬಸ್ ನಿಲ್ದಾಣ ದಿಂದ ತಹಶೀಲ್ದಾರ ಕಚೇರಿವರಗೆ ಮೆರವಣಿಗೆ ನಡೆಸಿ ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಅಧಿಕಾರಿಗಳು ಜೋಳ ಖರೀದಿ ಪ್ರಕ್ರಿಯೆ ಆರಂಭವಾದಾಗ ರೈತರು ಜೋಳ ಖರೀದಿಗೆ ನೊಂದಾಯಿಸಿದ್ದರು.ನಂತರ ಕೆಲವೇ ದಿನಗಳಲ್ಲಿ ಅಧಿಕಾರಿಗಳು ಏಕಾಏಕಿ ಜೋಳ ಖರೀದಿ ಪ್ರಕ್ರಿಯೆ ಸ್ಥಗಿತಗೊಳಿಸಿದ್ದಾರೆ.ಮಾರಾಟಕ್ಕೆ ನೊಂದಾಯಿಸಿದ್ದ ರೈತರ ಜೋಳ ಖರೀದಿಸಿದೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

ಜೋಳ ಖರೀದಿ ಸಂಬಂಧಕ್ಕೆ ಮಾನ್ವಿ ಮತ್ತು ಸಿರವಾರ ತಾಲ್ಲೂಕುಗಳ ನೂರಾರು ರೈತರು ಸುಮಾರು ದಿನಗಳಿಂದ ಜೋಳ ಮಾರಾಟ ಮಾಡದೆ ಆರ್ಥಿಕವಾಗಿ ನಷ್ಟ ಅನುಭವಿಸುತ್ತಿದ್ದಾರೆ ಹಾಗೂ ರೈತರು ಬ್ಯಾಂಕ್ ಗಳಲ್ಲಿ ಸಾಲ ಪಡೆದ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳು ನೋಟಿಸ್ ನೀಡುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ನಕಲಿ ನೋಟು ಚಲಾವಣೆ ಮಾಡುತ್ತಿದ್ದ 10 ಜನ ಅರೆಸ್ಟ್
ಪ್ರತಿ ವರ್ಷ ಸರ್ಕಾರ ರೈತರು ಜೋಳ ರಾಶಿ ಮಾಡುವ ಮುಂಚೆ ಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಹಾಗೂ ತಕ್ಷಣವೇ ಜೋಳ ಮಾರಾಟ ಮಾಡಿದ ರೈತರ ಖಾತೆಗೆ ಹಣ ಜಮಾ ಮಾಡಬೇಕು. ರೈತರು ಬೆಳೆದ ಎಲ್ಲಾ ಬೆಳೆಗಳಿಗೆ ಎಂ.ಎಸ್.ಸ್ವಾಮಿನಾಥನ್ ವರದಿಯ ಶಿಫಾರಸುಗಳ ಅನ್ವಯ ವೈಜ್ಞಾನಿಕ ಬೆಲೆ ನಿಗದಿಗೊಳಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಜೆಡಿಎಸ್ ಕಾರ್ಯಕರ್ತರು ,ರೈತರು ,ಇನ್ನಿತರರು ಇದ್ದರು.