ರಾಯಚೂರು | ಜೋಳ ಖರೀದಿಗೆ ಒತ್ತಾಯಿಸಿ ; ಜೆಡಿಎಸ್ ಪ್ರತಿಭಟನೆ

Date:

ಹಿಂಗಾರು ಮತ್ತು ಮುಂಗಾರು ಜೋಳ ಖರೀದಿ ಸಂಬಂಧಕ್ಕೆ ರೈತರು ಸುಮಾರು ಬಾರಿ ಮನವಿ ಮಾಡಿದರು ರಾಜ್ಯ ಕಾಂಗ್ರೆಸ್ ಸರ್ಕಾರ ಜೋಳ ಖರೀದಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿದರು.

ಮಾನ್ವಿ ನಗರದ ಬಸವ ವೃತ್ತದಲ್ಲಿ ಜಮಾಯಿಸಿದ ಜೆಡಿಎಸ್‌ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಕೆಲಹೊತ್ತು ರಸ್ತೆ ಮೇಲೆ ಮಲಗಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ನಂತರ ಬಸ್ ನಿಲ್ದಾಣ ದಿಂದ ತಹಶೀಲ್ದಾರ ಕಚೇರಿವರಗೆ ಮೆರವಣಿಗೆ ನಡೆಸಿ ತಹಶೀಲ್ದಾ‌ರ್ ಅಬ್ದುಲ್ ವಾಹಿದ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಅಧಿಕಾರಿಗಳು ಜೋಳ ಖರೀದಿ ಪ್ರಕ್ರಿಯೆ ಆರಂಭವಾದಾಗ ರೈತರು ಜೋಳ ಖರೀದಿಗೆ ನೊಂದಾಯಿಸಿದ್ದರು.ನಂತರ ಕೆಲವೇ ದಿನಗಳಲ್ಲಿ ಅಧಿಕಾರಿಗಳು ಏಕಾಏಕಿ ಜೋಳ ಖರೀದಿ ಪ್ರಕ್ರಿಯೆ ಸ್ಥಗಿತಗೊಳಿಸಿದ್ದಾರೆ.ಮಾರಾಟಕ್ಕೆ ನೊಂದಾಯಿಸಿದ್ದ ರೈತರ ಜೋಳ ಖರೀದಿಸಿದೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

- Advertisement -
1000131621

ಜೋಳ ಖರೀದಿ ಸಂಬಂಧಕ್ಕೆ ಮಾನ್ವಿ ಮತ್ತು ಸಿರವಾರ ತಾಲ್ಲೂಕುಗಳ ನೂರಾರು ರೈತರು ಸುಮಾರು ದಿನಗಳಿಂದ ಜೋಳ ಮಾರಾಟ ಮಾಡದೆ ಆರ್ಥಿಕವಾಗಿ ನಷ್ಟ ಅನುಭವಿಸುತ್ತಿದ್ದಾರೆ ಹಾಗೂ ರೈತರು ಬ್ಯಾಂಕ್ ಗಳಲ್ಲಿ ಸಾಲ ಪಡೆದ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳು ನೋಟಿಸ್ ನೀಡುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಈ ಸುದ್ದಿ ಓದಿದ್ದೀರಾ? ರಾಯಚೂರು | ನಕಲಿ ನೋಟು ಚಲಾವಣೆ ಮಾಡುತ್ತಿದ್ದ 10 ಜನ ಅರೆಸ್ಟ್

ಪ್ರತಿ ವರ್ಷ ಸರ್ಕಾರ ರೈತರು ಜೋಳ ರಾಶಿ ಮಾಡುವ ಮುಂಚೆ ಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಹಾಗೂ ತಕ್ಷಣವೇ ಜೋಳ ಮಾರಾಟ ಮಾಡಿದ ರೈತರ ಖಾತೆಗೆ ಹಣ ಜಮಾ ಮಾಡಬೇಕು. ರೈತರು ಬೆಳೆದ ಎಲ್ಲಾ ಬೆಳೆಗಳಿಗೆ ಎಂ.ಎಸ್.ಸ್ವಾಮಿನಾಥನ್ ವರದಿಯ ಶಿಫಾರಸುಗಳ ಅನ್ವಯ ವೈಜ್ಞಾನಿಕ ಬೆಲೆ ನಿಗದಿಗೊಳಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಜೆಡಿಎಸ್ ಕಾರ್ಯಕರ್ತರು ,ರೈತರು ,ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...