ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಸೋಮವಾರ ದಿನವಿಡೀ ಮಳೆ ಸುರಿದಿದೆ. ಪರಿಣಾಮ ನಿರ್ಮಾಣ ಹಂತದಲ್ಲಿರುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಣ್ಣು ಕುಸಿದಿದೆ. ಜಿಲ್ಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು ಬೇಲೂರು ಸೇರಿ ವಿವಿದ ತಾಲೂಕಿನಲ್ಲಿ ಅಬ್ಬರದ ಮಳೆಯಾಗುತ್ತಿದೆ. ಹೇಮಾವತಿ ನದಿ ಉಕ್ಕಿ ಹರಿಯುತ್ತಿದೆ. ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.