ಗುಡುಗು ಸಹಿತ ಮಳೆ ಮುಂದುವರಿಕೆ; 19 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಣೆ

Date:

ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 19 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

- Advertisement -

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ ಹಾಗೂ ಗದಗ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ(ಗಂಟೆಗೆ 50ರಿಂದ 60 ಕಿ.ಮೀ. ವೇಗ) ಮಳೆಯಾಗುವ ಸಾಧ್ಯತೆಯಿದೆ. ಇಲ್ಲಿ ಆಲಿಕಲ್ಲು ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ದಾವಣಗೆರೆ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ(ಗಂಟೆಗೆ 40ರಿಂದ 50 ಕಿ.ಮೀ. ವೇಗ) ಸಾಧಾರಣ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಜಾತಿ ಗಣತಿಯನ್ನು ‘ಕಸ’ ಎಂದರೂ ಒಬಿಸಿಗಳ ಮೌನ ಸರಿಯಲ್ಲ: ಎ.ನಾರಾಯಣ

ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳ ಕೆಲವೆಡೆ ಮುಂದಿನ ಒಂದು ವಾರ ಮಳೆ ಯಾಗುವ ಸಾಧ್ಯತೆಯಿದ್ದು, ಇದೇ 30ರಂದು 26 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಮೇ ಮೊದಲ ವಾರದಲ್ಲಿ ಮಳೆ ಹೆಚ್ಚಳವಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...