ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಅವಾಂತರ; ಒಂದೇ ದಿನ ಮೂರು ಜೀವ ಬಲಿ

Date:

ರಾಜ್ಯದ ವಿವಿಧ ಭಾಗಗಳಲ್ಲಿ ಭಾನುವಾರ ಸಂಜೆ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಕಲಬುರಗಿ, ಯಾದಗಿರಿ ಜಿಲ್ಲೆಯ ಪ್ರತ್ಯೇಕ ಕಡೆಗಳಲ್ಲಿ ಮಳೆಯ ಅವಾಂತರಕ್ಕೆ ಮೂರು ಜೀವ ಬಲಿಯಾದ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಸಿಡಿಲು ಬಡಿದು  ಇಬ್ಬರು ಮೃತಪಟ್ಟಿದ್ದಾರೆ.

ವಾಡಿ ಪಟ್ಟಣದ ರೈಲ್ವೆ ಕಾಲೋನಿಯ ಏಕನಾಥ್ ವಾಘಮೂಡೆ (55), ಸತೀಶ್ ಶಳಕೆ (40) ಮೃತರು. ಗುಡುಗು ಸಹಿತ ಮಳೆ ಆರಂಭವಾದ ವೇಳೆ ರಕ್ಷಣೆಗಾಗಿ ಮರದಡಿ ನಿಂತಿದ್ದಾಗ ಸಿಡಿಲು ಬಡಿದು ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೊಬೈಲ್ ಟವರ್ ರಾಡ್ ಕಳಚಿ ಬಿದ್ದು ವಿದ್ಯಾರ್ಥಿನಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ನಡೆದಿದೆ. ಸುಮಾ ಗಾಯಗೊಂಡ ಯುವತಿ. ಈಕೆಯನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಳೆ ಅವಾಂತರಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ: 

ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನಾದ್ಯಂತ ಭಾನುವಾರ ಸಂಜೆ ಗಾಳಿ, ಗುಡುಗು, ಸಿಡಿಲು ಸಹಿತ ಸುರಿದ ಭಾರಿ ಮಳೆಯಿಂದಾಗಿ ನಾಲ್ಕು ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ.

ಗುರುಮಠಕಲ್ ಪಟ್ಟಣದ ಉಪ್ಪಾರಗಡ್ಡಾ ಬಡಾವಣೆ ನಿವಾಸಿ ತಿಮ್ಮಪ್ಪಾ ಯಾದವ ಎಂಬುವರ ಪುತ್ರಿ ಮಾನಸಿ (4) ಗಾಳಿಯ ರಭಸಕ್ಕೆ ಮನೆಯ ತಗಡಿನ ಶೀಟ್‌ ಮೇಲೆಟ್ಟಿದ್ದ ಕಲ್ಲು ತಲೆ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಮೋದಿ ಆತ್ಮಸ್ಥೈರ್ಯ ಕಳೆದುಕೊಂಡು ಭಾಷಣ ಮಾಡುವಾಗ ತೊದಲುತ್ತಿದ್ದಾರೆ: ಅಖಿಲೇಶ್ ಯಾದವ್

ಮೃತ ಬಾಲಕಿ ಮನೆಗೆ ತಹಸೀಲ್ದಾರ್‌ ಶ್ರೀನಿವಾಸ ಚಾಪೆಲ್‌ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಲ್ಮೀಕಿ ನಿಗಮ ಅಕ್ರಮ | ಜಾರಿ ನಿರ್ದೇಶನಾಲಯದಿಂದ ಪ್ರತ್ಯೇಕ ತನಿಖೆ ಆರಂಭ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ಜಾರಿ...

ಧಾರವಾಡ | ಬಹುತ್ವ ಗಟ್ಟಿಗೊಳಿಸುವುದೇ ಮೇ ಸಾಹಿತ್ಯ ಮೇಳದ ಮುಖ್ಯ ಉದ್ದೇಶ: ಬಸವರಾಜ ಸೂಳಿಬಾವಿ

ಅಸಮಾನತೆಯನ್ನೇ ಜೀವಾಳವೆನ್ನುವಂತೆ ವರ್ತಿಸುವ ಪಕ್ಷಗಳು, ಸಂಘಟನೆಗಳು ಇರುವಾಗ ಸಮಾನತೆಯನ್ನು ಎಲ್ಲಿ ಕಾಣಲು...

ರೈತರೊಂದಿಗೆ ಉದ್ದಿಮೆದಾರರಿಂದ ನೇರ ಖರೀದಿ ವ್ಯವಸ್ಥೆಗೆ ಚಿಂತನೆ: ಸಚಿವ ಚಲುವರಾಯಸ್ವಾಮಿ

ಕೃಷಿ ನವೋದ್ಯಮಗಳ ಪ್ರೋತ್ಸಾಹ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಸದಾ ಸಿದ್ದವಿದೆ. ರೈತರೊಂದಿಗೆ...