ದಾವಣಗೆರೆ ಜಿಲ್ಲೆಯ ಹಲವೆಡೆ ಸುರಿದ ಮಳೆ; ಸ್ಥಳೀಯರಲ್ಲಿ ಮಂದಹಾಸ

Date:

ಕಳೆದ 8 ದಿನಗಳ ಹಿಂದಷ್ಟೇ ಧಿಡೀರನೆ ಸುರಿದು ಜನರಲ್ಲಿ ಉಲ್ಲಾಸ ಮೂಡಿಸಿದ್ದ ಮಳೆ ಗುರುವಾರ ಸಂಜೆ ದಾವಣಗೆರೆ ತಾಲೂಕಿನ ಹೆಬ್ಬಾಳ್‌ ಗ್ರಾಮ, ಹೆಬ್ಬಾಳ್ ಬಡಾವಣೆ, ಹುಣಸೇಕಟ್ಟೆ, ಮಂಡಲೂರು, ಹಾಲುವರ್ತಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ಮೂಲಕ ಸ್ಥಳೀಯರಲ್ಲಿ ಖುಷಿ ತಂದಿದೆ.

- Advertisement -

ಹಾಲುವರ್ತಿ, ಮಂಡಲೂರು, ಹೆಬ್ಬಾಳ್, ಹುಣಸೇಕಟ್ಟೆ ಸುತ್ತಮುತ್ತ ಗುರುವಾರ ಸಂಜೆ ಸುರಿದ ಸಾಧಾರಣ ಮಳೆಯಿಂದಾಗಿ ಸುಮಾರು ಹೊತ್ತು ಭೂಮಿ ನೆನೆಯುವಂತಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಧಿಡೀರ್ ಸುರಿದ ಮಳೆಯಿಂದಾಗಿ ಮನೆಗಳಲ್ಲಿ ಏಕಾಏಕಿ ಮಳೆ ನೀರು ಸೋರುತ್ತಿದ್ದುದರಿಂದ ಹೆಂಚುಗಳನ್ನು ಸರಿಪಡಿಸಲು ಮನೆಗಳ ಪುರುಷರು, ಮಕ್ಕಳು ಏಣಿ ಹಾಕಿಕೊಂಡು, ಹೆಂಚು ಸರಿಪಡಿಸಲು ಮುಂದಾಗಿದ್ದರು. ಸಂಜೆ ದಾವಣಗೆರೆ ನಗರದಲಿ ತಂಪು ಗಾಳಿ ಬೀಸಿ, ಮಳೆ ಮೋಡ ಆವರಿಸಿದ್ದರೂ ಮಳೆಯಾಗಿಲ್ಲ.

ಹವಾಮಾನ ಇಲಾಖೆ ಕೆಲ ದಿನಗಳ ಹಿಂದೆ ಏಪ್ರಿಲ್ 8ರಿಂದ ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸೂಚನೆ ನೀಡಿದ್ದರೂ, ಯಾವುದೇ ಮುನ್ಸೂಚನೆ ಕಾಣದೆ ಬಿಸಿಲಿನ ಬೇಗೆಗೆ ಜನ, ರೈತರು ಕಂಗೆಟ್ಟಿದ್ದರು.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಚುನಾವಣೆಯಲ್ಲಿ ಪಂಚಮಸಾಲಿ ಸಮಾಜ ತಟಸ್ಥವಾಗಿರಲು ಸ್ವಾಭಿಮಾನ ಯುವಪಡೆ ಕರೆ

ದಾವಣಗೆರೆ ನಗರದ ಹಲವೆಡೆ ಹಾಗೂ ಜಿಲ್ಲೆಯ ಕೊಡಗನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ಶುಕ್ರವಾರ ಸಂಜೆಯೂ ತುಂತುರು ಮಳೆ ಸ್ಪರ್ಶವಾಗಿದ್ದು, ಜನ ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...