ರಾಜ್ಯದಲ್ಲಿ ಮಳೆ; ಕೆಲವೆಡೆ ರೆಡ್‌ ಅಲರ್ಟ್‌ ಘೋಷಣೆ

Date:

Advertisements

ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಜುಲೈ 6 ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೊಷಿಸಲಾಗಿದೆ. ಚಾಮರಾಜನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಹಲವು ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆಯಾಗಿದ್ದು, ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಲ್ಲೂರಿನಲ್ಲಿ ಮನೆಗೆ ಭಾಗಶಃ ಹಾನಿಯಾಗಿದೆ. ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಕೊಟ್ಟಿಗೆಗೆ ಸಿಡಿಲು ಬಡಿದು ಹಸು ಮೃತಪಟ್ಟಿದೆ.

ಮಂಗಳೂರು ನಗರವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 2, 3ರಂದು ಯಲ್ಲೊ ಅಲರ್ಟ್‌ ಹಾಗೂ 4 ರಿಂದ 6ರವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

Advertisements

ಕಾರವಾರ, ಅಂಕೋಲಾ, ಭಟ್ಕಳ, ಹೊನ್ನಾವರ, ಕುಮಟಾ ಮತ್ತು ಜೊಯಿಡಾದಲ್ಲಿ ಮಳೆಯಾಗಿದೆ. ಮಳೆ, ಗಾಳಿಯ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದ ಅಬ್ಬರವೂ ಹೆಚ್ಚಿದೆ. ಬೃಹತ್ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಸಮುದ್ರದ ಅಬ್ಬರದ ನಡುವೆಯೂ ಪ್ರವಾಸಿಗರು ಕಡಲತೀರಕ್ಕೆ ಭೇಟಿ ನೀಡುತ್ತಿದ್ದಾರೆ. ಪೊಲೀಸ್ ಕಾವಲು ನಿಯೋಜಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಕಾರ್ಮಿಕ ವಲಯದಲ್ಲಿ ಮಹಿಳೆಯರ ಭಾಗವಹಿಸುವಿಕೆ ಕುಸಿತ ಕಳವಳಕಾರಿ: ಸಚಿವ ಕೃಷ್ಣಭೈರೇಗೌಡ

ಕೊಡಗು ಜಿಲ್ಲೆಯ ಕರಿಕೆ ಗ್ರಾಮದಲ್ಲಿ ಗಾಳಿ–ಮಳೆಯಿಂದ ನಿವಾಸಿಯೊಬ್ಬರ ಮನೆಯ ಚಾವಣಿ ಕುಸಿದಿದ್ದು, ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾಗಿದೆ. ಜೋರು ಗಾಳಿ ಬೀಸುತ್ತಿದ್ದು, ಅಲ್ಲಲ್ಲಿ ಮರಗಳು ನೆಲಕ್ಕುರುಳಿರುವುದು ವರದಿಯಾಗಿದೆ. 

ವಿಜಯಗರ ಜಿಲ್ಲೆಯ ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಹೂವಿನ ಹಡಗಲಿ ಹಾಗೂ ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆ ಭಾಗದಲ್ಲಿ ಮಳೆಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X