ರಾಜ್ಯದಲ್ಲಿ ಜುಲೈ ತಿಂಗಳಿನಲ್ಲಿ ಅಬ್ಬರಿಸಿದ್ದ ಮುಂಗಾರು ಮಳೆ ಮತ್ತೆ ಮರೆಯಾಗಿದೆ. ಈಗ, ಆಗಸ್ಟ್ ಕೊನೆಯ ವಾರದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲಿ ಆಗಸ್ಟ್ 30ವರೆಗೆ ಉತ್ತಮ ಮಳೆ ಬೀಳಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಪ್ರದೇಶವಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡು ಪ್ರದೇಶದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ ದಕ್ಷಿಣ ಒಳನಾಡು ಪ್ರದೇಶ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.
ಬೆಂಗಳೂರಿನಲ್ಲಿ ಗುರುವಾರವೂ ಮೋಡ ಕವಿದ ವಾತಾವರಣವಿದ್ದು, ಇದೂ ಕೂಡ ಮಳೆ ಬೀಳುವ ನಿರೀಕ್ಷೆ ಇದೆ.
ಅಂದಹಾಗೆ, ಉತ್ತರ ಭಾರತದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಿಮಾಚಲ ಪ್ರದೇಶ ತತ್ತರಿಸಿಹೋಗಿದೆ. ಹಲವಾರು ಭೂಕುಸಿತಗಳು ಸಂಭವಿಸಿದ್ದು, ಇದೂವರೆಗೂ ಸುಮಾರು 356 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಅಲ್ಲದೆ, ಅರುಣಾಚಲ ಪ್ರದೇಶ, ಉತ್ತರ ಪ್ರದೇಶ, ಅಸ್ಸಾಂ, ಮೇಘಾಲಯದಲ್ಲಿಯೂ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.