ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

Date:

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40-45 ಕಿ.ಮೀ. ಇರಲಿದ್ದು, 55 ಕಿ.ಮೀವರೆಗೂ ತಲುಪುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಜಿಟಿ ಜಿಟಿ ಮಳೆಯೊಂದಿಗೆ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಸುದ್ದಿ ಓದಿದ್ದೀರಾ? ಜನರ ಮೇಲೆ ಕಾಡುಪ್ರಾಣಿಗಳ ದಾಳಿ ಆಗದಂತೆ ಶಾಶ್ವತ ಕ್ರಮ ಕೈಗೊಳ್ಳಿ: ಎಚ್‌ಡಿ ಕುಮಾರಸ್ವಾಮಿ

ಉಳಿದಂತೆ ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಮಂಡ್ಯ ಹಾಗೂ ರಾಮನಗರ, ಚಾಮರಾಜನಗರ ಸೇರಿದಂತೆ ರಾಯಚೂರಿನ ಕೆಲವು ಕಡೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಮಳೆಯಾದರೂ, ಹಲವು ಕಡೆಗಳಲ್ಲಿ ಉಷ್ಣಾಂಶದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಗಾಂಧಿ ಗ್ರಾಮ ಪುರಸ್ಕಾರʼಕ್ಕೆ 233 ಗ್ರಾಮ ಪಂಚಾಯಿತಿ ಆಯ್ಕೆ: ಪ್ರಿಯಾಂಕ್‌ ಖರ್ಗೆ

ಅ.2ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ 4 ಗ್ರಾಮ...

ಬೆಳಗಾವಿ | ಮೋಡ ಬಿತ್ತನೆ ಕಾರ್ಯಾಚರಣೆ ಆರಂಭ; ಯಶಸ್ವಿಯಾದರೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಯತ್ನ

ಬರಪೀಡಿತ ರೈತರಿಗೆ ನೆರವಾಗಲು ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾವಿ ಶುಗರ್ಸ್ ಪ್ರೈವೇಟ್ ಲಿಮಿಟೆಡ್...

ತುಮಕೂರು | ವಸತಿ ನಿಲಯಕ್ಕೆ ಎಸಿ, ತಹಶೀಲ್ದಾರ್​​ ದಿಢೀರ್​ ಭೇಟಿ; ವಾರ್ಡನ್​ಗೆ ಎಚ್ಚರಿಕೆ

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿರುವ ಮೆಟ್ರಿಕ್ ನಂತರದ‌ ಬಾಲಕರ ವಸತಿನಿಲಯಕ್ಕೆ ಉಪ...

ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಸಿದ್ದರಾಮಯ್ಯ

ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ...