ಉಡುಪಿ | ನೆರೆ ಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

Date:

ಮಳೆ, ಪ್ರವಾಹದಿಂದ ಯಾವುದೇ ಅನಾಹುತ ಸಂಭವಿಸದಂತೆ ಉಡುಪಿ ಜಿಲ್ಲಾಡಳಿತ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

- Advertisement -

ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭಾನುವಾರ ಅಧಿಕಾರಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼವಿಧಾನ ಮಂಡಲ ಅಧಿವೇಶನ ನಡೆಯುತ್ತಿದ್ದು, ಮಳೆ ಪರಿಸ್ಥಿತಿ ಕುರಿತು ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಭಾನುವಾರ ರಜೆಯಿದ್ದರೂ ಪರಿಶೀಲನೆ ನಡೆಸಲು ಬಂದಿದ್ದೇನೆ. ಮಳೆ, ಪ್ರವಾಹದಿಂದ ಯಾವುದೇ ತೊಂದರೆ, ಪ್ರಾಣ ಹಾನಿ ಸಂಭವಿಸದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದೆʼ ಎಂದು ಹೇಳಿದರು.

ʼ25 ದಿನಗಳ ಹಿಂದೆಯೇ ಜಿಲ್ಲಾ ಮಟ್ಟದ ಮುಂಜಾಗ್ರತಾ ಸಭೆ ನಡೆಸಲಾಗಿದೆ. ಉರುಳುವ ಹಂತದಲ್ಲಿರುವ ಮರಗಳನ್ನು ಕಡಿಯುವಂತೆ ಸೂಚಿಸಿದ್ದೆ. ಹೀಗಾಗಿ ಅರಣ್ಯ ಇಲಾಖೆಯಿಂದ 500 ರಿಂದ 600 ಮರಗಳನ್ನು ತೆರವುಗೊಳಿಸಲಾಗಿದೆ. ಶಾಲೆ ಪಕ್ಕದ ವಿದ್ಯುತ್‌ ತಂತಿ ತೆರವುಗೊಳಿಸಲು ಮೆಸ್ಕಾಂ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆʼ ಎಂದರು.

ʼನಗರದಲ್ಲಿ ಚರಂಡಿಯಿಂದ ಸಮಸ್ಯೆ ಆಗಿತ್ತು, ಸ್ವಚ್ಛಗೊಳಿಸಿದ್ದಾರೆ. ಕಾಲು, ಸಂಕಗಳ ಸಮಸ್ಯೆ ಆಗದಂತೆ ನೋಡಿಕೊಂಡಿದ್ದೇವೆ. ಜಿಲ್ಲಾಡಳಿತದಿಂದ ಹೆಲ್ಪ್ ಲೈನ್ ತೆರೆಯಲಾಗಿದೆ. ಮಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ನೀಡುವ ವಿಚಾರದಲ್ಲಿ ಯಾವುದೇ ತಾರತಮ್ಯ ಆಗಿಲ್ಲʼ ಎಂದು ಸಚಿವೆ ಹೆಬ್ಬಾಳಕರ್ ಸ್ಪಷ್ಟಪಡಿಸಿದರು.

ಈ ವೇಳೆ ಬೈಂದೂರು ಮಾಜಿ ಶಾಸಕ ಗೋಪಾಲ್ ಪೂಜಾರಿ, ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಲ್, ಕುಂದಾಪುರ ವಿಭಾಗದ ಸಹಾಯಕ ಆಯುಕ್ತ ಎಸ್.ಆರ್. ರಶ್ಮಿ, ಡಿಎಫ್ಒ ಗಣಪತಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬಳಿಕ ಸಚಿವರು ಗೃಹ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಯಲ್ ಜೊತೆ ಸಭೆ ನಡೆಸಿ, ಹೆಚ್ಚಿನ ಮಾಹಿತಿ ಪಡೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...