ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ತಾಲೂಕಿನ ಎಲ್ಲ ಶಾಲೆಗಳಿಗೆ ನಾಳೆ(ಜುಲೈ 16) ರಜೆ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜು.16ರ ಮಂಗಳವಾರ ರಜೆಯನ್ನು ತಹಶಿಲ್ದಾರ್ ಆದೇಶದ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ ಘೋಷಿಸಿದ್ದಾರೆ. ಕಾಲೇಜುಗಳಿಗೆ ರಜೆ ಘೋಷಿಸಿಲ್ಲ.
ಹಾಗೆಯೇ, ಹೊಸನಗರ ತಾಲೂಕಿನ ಎಲ್ಲ ಶಾಲೆಯ ಜೊತೆಗೆ ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ.