ದೊಡ್ಡಬಳ್ಳಾಪುರ | ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ; ಗಾಯಿತ್ರಿ

Date:

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಕೃಷಿ ವಿಜ್ಞಾನ ಕೇಂದ್ರ. ಹಾಡೋನಹಳ್ಳಿ ಆವರಣದಲ್ಲಿ ರೈತರಿಗಾಗಿ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

- Advertisement -

ಈ ವೇಳೆ ಬೆಂಗಳೂರು ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಮಾತನಾಡಿ, ಜಿಲ್ಲೆಯಲ್ಲಿ ಈಗ ಅಂತರ್ಜಲ ಕಡಿಮೆಯಾಗಿ 1600 ಅಡಿ ಆಳ ಹೋದರು ಬೋರ್‌ವೆಲ್‌ ನಲ್ಲಿ ನೀರು ಸಿಗುತ್ತಿಲ್ಲ. ಆದ್ದರಿಂದ ಮಳೆ ನೀರನ್ನು ಕೃಷಿ ಹೊಂಡದ ಮೂಲಕ ಹಾಗು ವಿವಿಧ ಕ್ರಮಗಳ ಮೂಲಕ ನೀರನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ನೀರಿನ ಮಿತ ಬಳಕೆ, ಸೂಕ್ಷ್ಮ ನೀರಾವರಿ ತಾಂತ್ರಿಕತೆಗಳು ಮತ್ತು ನೀರಿನ ಮರು ಪೂರೈಕೆ ವಿಧಾನಗಳನ್ನು ಕೃಷಿಯಲ್ಲಿ ಅಳವಡಿಸಿಕೊಳ್ಳಿ. ಇದರಿಂದ ನೀರಿನ ಅಭಾವ ಸೃಷ್ಟಿ ಕಡಿಮೆಯಾಗಲಿದೆ ಎಂದು ರೈತರಿಗೆ ಮಾಹಿತಿ ನೀಡಿದರು.

ದೊಡ್ಡಬಳ್ಳಾಪುರದ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಹನುಮಂತರಾಯ ಬಿ.ಜಿ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೀರಿನ ಅಭಾವ ಕಾಡುತ್ತಿದೆ. ಲಭ್ಯವಿರುವ ನೀರಿನಲ್ಲಿ ಶೇ.70 ರಷ್ಟು ಕೃಷಿಗೆ ಬಳಕೆ ಮಾಡಲಾಗುತ್ತಿದೆ. ಹಾಗಾಗಿ ಮಳೆ ನೀರನ್ನು ಚೆನ್ನಾಗಿ ಶೇಖರಣೆ ಮಾಡಿ ಕೃಷಿಗೆ ಪರಿಮಾಮಕಾರಿಯಾಗಿ ನೂತನ ತಂತ್ರಜ್ಞಾನವಾದ sensor ಸ್ವಯಂಚಾಲಿತ ನೀರಾವರಿ ಮೂಲಕ ಭೂಮಿಗೆ ಎಷ್ಟು ನೀರು ಬೇಕೋ ಅಷ್ಟು ನೀರು ಕೊಟ್ಟು ನೀರಿನ ನಿರ್ವಹಣೆ ಮಾಡಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯಕ್ರಮ ನಿರ್ವಹಣಾ ಘಟಕದ ನಿಷಿತ, ಕೃಷಿ ತಜ್ಞೆ ದೀಪ್ತಿ, ಜಿಲ್ಲಾ ಕೃಷಿ ತರಬೇತಿ ಕೇಂದ್ರ ಆರ್.ಕೆ. ಶಾಲಾದ ಸಹಾಯಕ ಕೃಷಿ ನಿರ್ದೇಶಕಿ ಸುಮಂಗಲ, ಕೃಷಿ ಅಧಿಕಾರಿ ನವೀನ್ ಮತ್ತು ಕಸ್ತೂರಯ್ಯ, ಜೈನ್ ನೀರಾವರಿ ಸಂಸ್ಥೆಯ ತೋಷಿತ್ ರೈ, ಫೈಲೋ ಸಂಸ್ಥೆಯ ಅನಿಲ್, ತಾಲ್ಲೂಕಿನ ಸಿಬ್ಬಂಧಿಗಳು ಹಾಗೂ ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...