‘ಉತ್ತರ ಕನ್ನಡದ ಚಿರಾಪುಂಜಿ’ ಕ್ಯಾಸಲ್ ರಾಕ್‌ನಲ್ಲಿ ಮಳೆ ವೈಭವ ಕುಸಿತ; ಸ್ಥಳೀಯರಲ್ಲಿ ಆತಂಕ

Date:

ಉತ್ತರ ಕನ್ನಡ: ಪಶ್ಚಿಮ ಘಟ್ಟದ ಮಡಿಲಿನಲ್ಲಿರುವ, ಒಂದು ಕಾಲದಲ್ಲಿ ಅತೀ ಹೆಚ್ಚು ಮಳೆ ಸುರಿಯುವ ಪ್ರದೇಶವೆಂದು ಖ್ಯಾತಿ ಪಡೆದಿದ್ದ ಕ್ಯಾಸಲ್ ರಾಕ್ ಇದೀಗ ಮಳೆಯ ಅಭಾವದಿಂದ ಕಂಗೆಟ್ಟಿದೆ. ಭೋರ್ಗರೆವ ಮಳೆಗೆ ಹೆಸರಾಗಿದ್ದ ಈ ಪ್ರದೇಶದಲ್ಲಿ ಬದಲಾದ ಹವಾಮಾನ ಮತ್ತು ಪರಿಸರ ಅಸಮತೋಲನದಿಂದ ಮಳೆಗಾಲದ ಲಕ್ಷಣಗಳೇ ಬದಲಾಗಿವೆ.

- Advertisement -

ಹಿಂದೆ ಇಲ್ಲಿ ವರ್ಷಕ್ಕೆ ಸುಮಾರು 6,000 ದಿಂದ 7,000 ಮಿ.ಮೀ. ವರೆಗೆ ಮಳೆ ದಾಖಲಾಗುತ್ತಿತ್ತು. ದಶಕದ ಹಿಂದೆ, ಅಂದರೆ 2011ರಲ್ಲಿ 7,000 ಮಿ.ಮೀ. ಗೂ ಅಧಿಕ ಮಳೆ ಸುರಿದಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕುಸಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಅಷ್ಟೇ ಅಲ್ಲದೆ, ಮಳೆ ಬೀಳುವ ದಿನಗಳ ಸಂಖ್ಯೆಯೂ ಕಡಿಮೆಯಾಗಿದೆ. ಮಳೆಗಾಲದ ಆರಂಭದಿಂದ ಅಂತ್ಯದವರೆಗೆ ನಿರಂತರವಾಗಿ ಸುರಿಯುತ್ತಿದ್ದ ಮಳೆಯ ಬದಲು, ಈಗ ಕೆಲವೇ ದಿನಗಳಲ್ಲಿ ಅತಿಯಾಗಿ ಸುರಿದು, ಉಳಿದ ದಿನಗಳಲ್ಲಿ ದೀರ್ಘಕಾಲದ ಮಳೆರಹಿತ ಸ್ಥಿತಿ ಮುಂದುವರಿಯುತ್ತಿದೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಜೇನುನೊಣ ದಾಳಿಗಿಂತ ಭಯಾನಕ ಅವ್ಯವಸ್ಥೆ: ಮೊರಾರ್ಜಿ ವಸತಿ ಶಾಲೆ ವಿರುದ್ಧ ಗಂಭೀರ ಆರೋಪ

ಕ್ಯಾಸಲ್ ರಾಕ್‌ನಲ್ಲಿ ಸುರಿಯುವ ಮಳೆ ನೀರೇ ಕಾಳಿ ನದಿಯ ಜೀವನಾಡಿ. ಇಲ್ಲಿನ ಮಳೆಯು ಸುಪಾ ಜಲಾಶಯದ ನೀರಿನ ಮಟ್ಟವನ್ನು ಕಾಯ್ದುಕೊಳ್ಳಲು ಅತ್ಯಂತ ನಿರ್ಣಾಯಕ ಪಾತ್ರ ವಹಿಸುತ್ತದೆ. ಆದರೆ ಮಳೆಯ ಈ ಏರುಪೇರು, ಸುಪಾ ಜಲಾಶಯದ ನೀರಿನ ಸಂಗ್ರಹಣೆಯ ಮೇಲೂ ನೇರ ಪರಿಣಾಮ ಬೀರುತ್ತಿದೆ.

ಮಳೆಯ ಅಭಾವದಿಂದಾಗಿ ಸ್ಥಳೀಯ ಹೊಳೆಗಳ ನೀರಿನ ಹರಿವು ತಗ್ಗಿದೆ. ಇದು ಕೃಷಿಕರ ನಿದ್ದೆಗೆಡಿಸಿದೆ. ಅಡಿಕೆ, ಕಾಳುಮೆಣಸಿನಂತಹ ಮಳೆ ಆಧಾರಿತ ಬೆಳೆಗಳಿಗೆ ನೀರಿನ ಕೊರತೆ ಕಾಡಲಾರಂಭಿಸಿದೆ. ಇಷ್ಟೇ ಅಲ್ಲದೆ, ಅರಣ್ಯದ ಒಳಭಾಗದಲ್ಲಿ ನೀರಿನ ಮೂಲಗಳು ಬತ್ತಿ ಹೋಗುತ್ತಿರುವುದರಿಂದ, ವನ್ಯಜೀವಿಗಳು ನೀರನ್ನು ಹುಡುಕಿಕೊಂಡು ಮಾನವ ವಸತಿ ಪ್ರದೇಶಗಳಿಗೆ ಬರುವ ಪ್ರಕರಣಗಳು ಹೆಚ್ಚಾಗುತ್ತಿವೆ.

ಹವಾಮಾನ ವೈಪರೀತ್ಯ, ಅರಣ್ಯನಾಶ ಮತ್ತು ಭೂ ಬಳಕೆಯಲ್ಲಿನ ಬದಲಾವಣೆಗಳೇ ಈ ಪರಿಸ್ಥಿತಿಗೆ ಕಾರಣ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಒಂದು ಕಾಲದಲ್ಲಿ ‘ಮೋಡಗಳ ತವರೂರು’ ಎಂದು ಕರೆಯಲ್ಪಡುತ್ತಿದ್ದ ಈ ಪ್ರದೇಶದಲ್ಲಿ ಮಳೆಯ ವೈಭವ ಕ್ಷೀಣಿಸುತ್ತಿರುವುದು ಕೇವಲ ಸ್ಥಳೀಯ ಸಮಸ್ಯೆಯಲ್ಲ, ಬದಲಾಗಿ ಇಡೀ ಕಾಳಿ ನದಿ ಜಲಾನಯನ ಪ್ರದೇಶದ ಪರಿಸರ ಸಮತೋಲನದ ದೃಷ್ಟಿಯಿಂದ ಗಂಭೀರ ವಿಷಯವಾಗಿದೆ. ಈ ಬಗ್ಗೆ ಸೂಕ್ತ ಪರಿಸರ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...