ಕೊಡಗಿನ ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಆವರಿಸಿದ್ದ ಕಾವೇರಿ ನದಿಯ ಪ್ರವಾಹ ಇಳಿಕೆಗೊಂಡಿದ್ದು, ಸಂಚಾರಕ್ಕೆ ಮುಕ್ತವಾಗಿದೆ.
ಕಳೆದ ಎರಡ್ಮೂರು ದಿನಗಳಿಂದ ಮಡಿಕೇರಿ ತಾಲೂಕಿನ ನಾಪೋಕ್ಲು ವ್ಯಾಪ್ತಿಯಲ್ಲಿ ಸುರಿದ ಧಾರಾಕಾರ ಮಳೆಗೆ ಕಾವೇರಿ ನದಿ ಮೈದುಂಬಿ ಹರಿದ ಹಿನ್ನೆಲೆಯಲ್ಲಿ ರಸ್ತೆಗಳು ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿತ್ತು. ಇದೀಗ ನಾಪೋಕ್ಲು-ಮೂರ್ನಾಡು ಸಂಪರ್ಕ ರಸ್ತೆಯ ಬೊಳಿಬಾಣೆಯಲ್ಲಿ ಕಾವೇರಿನದಿ ಪ್ರವಾಹ ಇಳಿಕೆಯಾಗಿದ್ದು, ವಾಹನ ಸಂಚಾರ ಆರಂಭಗೊಂಡಿದೆ.
ನಾಪೋಕ್ಲು ಚೆರಿಯಪರಂಬು ಕಲ್ಲುಮೊಟ್ಟೆ ಸಂಪರ್ಕ ರಸ್ತೆಯಲ್ಲಿ ಪ್ರವಾಹದಲ್ಲಿ ಇಳಿಕೆ ಕಂಡಿದ್ದು, ಇಂದು ಮಧ್ಯಾಹ್ನದಿಂದ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಉಡುಪಿ | ನೆರೆ ಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ
ನಾಪೋಕ್ಲು ಕೊಟ್ಟಮುಡಿ, ಬೆಟ್ಟಗೇರಿ, ಕೈಕಾಡು ಪಾರಾಣೆ, ಕಕ್ಕಬ್ಬೆ ಮಾರ್ಗವಾಗಿ ವಿರಾಜಪೇಟೆಗೆ ತೆರಳುವ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ.