ಶಿಡ್ಲಘಟ್ಟ |ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕೆಗಳು ಬೇಡ; ಸಚಿವರ ವಿರುದ್ಧ ಸಿಡಿದ ರೈತ ಸಂಘ

Date:

Advertisements

ಶಿಡ್ಲಘಟ್ಟ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ، ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ತೀವ್ರ ಆಕ್ರೋಶ, ಧರಣಿಗೆ ಅವಕಾಶ ನೀಡದಿರಲು ಪ್ರಯತ್ನ ಪೊಲೀಸರ ಮಧ್ಯೆ ವಾಗ್ದಾದ, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟಿ ಹೋಬಳಿಯಲ್ಲಿ ಯಾವುದೇ ಕಾರಣಕ್ಕೂ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಬಿಡುವುದಿಲ್ಲ ಎಂದು ಜಿಲ್ಲಾ ಆಡಳಿತಕ್ಕೆ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಹಳ್ಳಿ ಚಂದ್ರಶೇಖರ್ ಬಣ) ಎಚ್ಚರಿಕೆ ನೀಡಿದೆ.

ತಾಲೂಕಿನ ಜಂಗಮಕೋಟೆ ಹೋಬಳಿಯಲ್ಲಿ ಕೆ ಐ ಎ ಡಿ ಬಿ ಮೂಲಕ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನ ಪ್ರಕ್ರಿಯೆ ನಿಲ್ಲಿಸಬೇಕು ಅಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಜಿಲ್ಲಾಡಳಿತ ಮತ್ತು ಸರ್ಕಾರ ರೈತರ ಸಹನೆಯನ್ನು ಪರೀಕ್ಷೆ ಮಾಡುವ ದುಸ್ಸಾಹಸ ಮಾಡಬಾರದು ಎಂದು ಆಗ್ರಹಿಸಿದರು.

Advertisements

ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ನೇತೃತ್ವದಲ್ಲಿ ಶಿಡ್ಲಘಟ್ಟ ನಗರದ ಸಾರಿಗೆ ಬಸ್ ನಿಲ್ದಾಣದಿಂದ ತಾಲೂಕ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಎಂ ಸಿ ಸುಧಾಕರ್ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಂ ರಾಜಣ್ಣ, ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ, ಸೀಕಲ್ ಆನಂದ್‌ಗೌಡ, ದೇವನಹಳ್ಳಿ ಗೋಪಿ ಭಾಗವಹಿಸಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಂಗಮಕೋಟೆ ಭಾಗದಲ್ಲಿ ಕೈಗಾರಿಕೆಗಾಗಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೂಡಲೇ ನಿಲ್ಲಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಮಾತನಾಡಿ ಜಿಲ್ಲಾ ಮತ್ತು ತಾಲೂಕಾ ಆಡಳಿತ ರೈತ ಸಂಘಗಳ ಮಧ್ಯೆ ಘರ್ಷಣೆ ತಂದಿಡುವ ಉನ್ನಾರ ಮಾಡುತ್ತಿದೆ ಜಿಲ್ಲಾ ಉಸ್ತುವಾರಿ ಸಚಿವರ ಬಗ್ಗೆ ಅಪಾರ ಗೌರವ ಇದೆ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅವರು ಕ್ರಮ ಕೈಗೊಳ್ಳಬೇಕು ರೈತರು ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದಾರೆ ಅವರ ಸಹನೆಯನ್ನು ಪರೀಕ್ಷಿಸುವ ಕೆಲಸವನ್ನು ಜಿಲ್ಲಾ ಮತ್ತು ತಾಲೂಕು ಆಡಳಿತ ಮಾಡಬಾರದು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಅಶ್ವಿನ್ ಅವರಿಗೆ ಮನವಿ ಪತ್ರ ಸಲ್ಲಿಸಿದ ರೈತ ಸಂಘದ ಪದಾಧಿಕಾರಿಗಳು ಜಂಗಮಕೋಟೆ ಬಳಿ ಕೈಗಾರಿಕೆಗಳ ಸ್ಥಾಪನೆಗೆ ಭೂಸ್ವಾಧೀನದ ಪ್ರಕ್ರಿಯೆ ನಿಲ್ಲಿಸಬೇಕು ಇಲ್ಲದಿದ್ದ ಪಕ್ಷದಲ್ಲಿ ಹೋರಾಟವನ್ನು ತೀವ್ರಗೊಳಿಸುತ್ತೇವೆ ಆಗ ಆಗಬಹುದಾದ ಅನಾಹುತಗಳಿಗೆ ಜಿಲ್ಲಾಡಳಿತ ನೇರ ಹೊಣೆಯಾಗಲಿದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯ ವೇಳೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿದAತೆ ಡಿ ವೈ ಎಸ್ ಪಿ ಮುರಳಿಧರ್ ಅವರ ನೇತೃತ್ವದಲ್ಲಿ ಪೊಲೀಸರ ಸರ್ಪಗಾಲು ವ್ಯವಸ್ಥೆ ಮಾಡಲಾಗಿತ್ತು. ತಾಲೂಕು ಕಚೇರಿಗೆ ರೈತರು ಮುತ್ತಿಗೆ ಹಾಕುತ್ತಾರೆ ಎಂಬ ಭೀತಿಯಿಂದ ಬ್ಯಾರಿಕೇಡ್‌ಗಳಿಂದ ಮುಖ್ಯ ಪ್ರವೇಶ ದ್ವಾರವನ್ನು ಮುಚ್ಚಲಾಗಿತ್ತು.

ಶಿಡ್ಲಘಟ್ಟ ತಾಲೂಕು ಕಚೇರಿ ಮುಂದೆ ಧರಣಿ ನಡೆಸಲು ಜಮಖಾನಾ ಹಾಕುವ ಸಂದರ್ಭದಲ್ಲಿ ಆರಕ್ಷಕ ವೃತ್ತ ನಿರೀಕ್ಷಕ ಶ್ರೀನಿವಾಸ್ ಮತ್ತು ರೈತ ಸಂಘದ ಬೈರೇಗೌಡ ಮತ್ತವರ ನಡುವೆ ಮಾತಿನ ಚಕಮುಕಿ ನಡೆಯಿತು ಕೊನೆಗೂ ರೈತರು ಜಮಖಾನೆ ಹಾಕಿ ಧರಣಿ ಕುಳಿತುಕೊಂಡರು ಇದೇ ವೇಳೆಯಲ್ಲಿ ಕೆಲಕಾಲ ನೂಕುನುಗ್ಗಾಟದ ಪರಿಸ್ಥಿತಿ ನಿರ್ಮಾಣವಾಯಿತು.

ಜಂಗಮಕೋಟೆ ಪ್ರದೇಶದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ವಿಚಾರದಲ್ಲಿ ತಾಲ್ಲೂಕು ದಂಡಾಧಿಕಾರಿ ಬಿ.ಎನ್.ಸ್ವಾಮಿ ಸುಳ್ಳು ವರದಿಯನ್ನು ಸಲ್ಲಿಸಿದ್ದಾರೆ ಇವರ ಧೋರಣೆಯಿಂದ ನಮಗೆ ತೊಂದರೆಯಾಗಿದೆ ಎಂದು ಆರೋಪಿಸಿ ತಾಲೂಕಿನ ಬಸವಪಟ್ಟಣ
ನಂಜುAಡಪ್ಪ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ಮಾಡಿದರು ನಂತರ ಅವರಿಂದ ವಿಷದ ಬಾಟಲು ಕಿತ್ತುಕೊಂಡರು.

ಪ್ರತಿಭಟನೆಯಲ್ಲಿ ರೈತ ಸಂಘ ಹಾಗೂ ಹಸಿರೆ ಸೇನೆಯ ಜಿಲ್ಲಾಧ್ಯಕ್ಷ ರಾಮನಾಥ್, ಉಪಾಧ್ಯಕ್ಷ ವೇಣುಗೋಪಾಲ್, ತಾಲೂಕು ಸಂಘದ ಅಧ್ಯಕ್ಷ ತಾದೂರು ಮಂಜುನಾಥ್, ಹಿತ್ತಲಹಳ್ಳಿ ಎಚ್.ಕೆ.ರಮೇಶ್, ವೇಣುಗೋಪಾಲ್, ಗುಡಿಹಳ್ಳಿಕೆಂಪಣ್ಣ, ಮುನಿನಂಜಪ್ಪ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X