ರಾಯಚೂರು | ಸಂಪುಟದಿಂದ ಸಚಿವ ಶಿವಾನಂದ ಪಾಟೀಲ್‌ ಕೈಬಿಡಲು ರೈತ ಸಂಘ ಒತ್ತಾಯ

Date:

Advertisements

ರೈತರು ʼಬರಗಾಲ ಬರಲೆಂದು ಕಾಯುತ್ತಾರೆʼ ಎಂದು ಕೀಳು ಮಟ್ಟದ ಹೇಳಿಕೆ ನೀಡಿದ ಸಚಿವ ಶಿವಾನಂದ ಪಾಟೀಲ್‌ ಅವರನ್ನು ಸಂಪುಟದಿಂದ ಕೈಬಿಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಆಗ್ರಹಿಸಿದರು.

ರಾಯಚೂರು ನಗರದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿ, “ರೈತ ಕುಟುಂಬದಿಂದ ಬಂದಿರುವುದಾಗಿ ಹೇಳುತ್ತಲೇ ಎರಡನೇ ಬಾರಿಗೆ ಸಚಿವರಾದ ಶಿವಾನಂದ ಪಾಟೀಲ್ ರೈತರನ್ನು ಪದೇ ಪದೇ ಅವಮಾನಿಸುತ್ತಿದ್ದಾರೆ. ಈ ಹಿಂದೆ ಸಚಿವ ಶಿವಾನಂದ ಪಾಟೀಲ್‌ ರೈತರು 5 ಲಕ್ಷ ಪರಿಹಾರಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ರೈತ ಸಮುದಾಯಕ್ಕೆ ಅವಮಾನಿಸಿದ್ದರು. ಈಗ ಪರಿಹಾರಕ್ಕಾಗಿ ಬರಗಾಲ ಬರಲಿ ಎಂದು ರೈತರ ನಿರೀಕ್ಷಿಸುತ್ತಿದ್ದಾರೆ ಎಂದು ಹೇಳಿರುವುದು ಖಂಡನೀಯ. ಇಂತಹ ಬೇಜವಾಬ್ದಾರಿಯಾಗಿ ಹೇಳಿಕೆ ನೀಡುವ ಶಾಸಕ, ಸಚಿವರುಗಳಿಗೆ ತರಬೇತಿಯನ್ನಾದರೂ ನೀಡಿ ಬುದ್ದಿ ಕಲಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದುರುದ್ದೇಶದಿಂದ ರೈತರ ವಿರುದ್ದ ಮಾತನಾಡಿದ ಸಚಿವ ಶಿವಾನಂದ ಪಾಟೀಲ್ ಸಚಿವರಾಗಿ ಮುಂದುವರೆಯಲು ಅನರ್ಹರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವರ ಹೇಳಿಕೆಯನ್ನು ಸಮರ್ಥಿಸುವುದು ಬಿಟ್ಟು ಕೂಡಲೇ ಅವರನ್ನು ತಮ್ಮ ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಹೋರಾಟ ರೂಪಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

Advertisements

“ನಾರಾಯಣಪುರು ಬಲದಂಡೆ ಮತ್ತು ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿ ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆ ರಕ್ಷಣೆಗೆ ಸಮಪರ್ಕಕ ನೀರು ಹರಿಸಬೇಕು. ಕೃಷ್ಣ ಅಚ್ಚುಕಟ್ಟು ಪ್ರಾಧಿಕಾರದವರು ಬರೀ ಹತ್ತು ನಿಮಿಷ ಸಭೆ ನಡೆಸಿ ರೈತರೊಂದಿಗೆ ಚರ್ಚಿಸದೇ ನೀರು ಹರಿಸುವುದನ್ನು ನಿರ್ಧರಿಸಲಾಗಿದೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಮೆಣಸಿನಕಾಯಿ ಬೆಳೆಗೆ ನೀರು ಹರಿಸದೇ ಹೋದಲ್ಲಿ 400 ಕೋಟಿ ರೂ. ಅಧಿಕ ಮೌಲ್ಯದ ಫಸಲು ಹಾನಿಯಾಗುತ್ತದೆ. ನಾರಾಯಣಪುರ ಜಲಾಶಯದಲ್ಲಿ 51 ಟಿಎಂಸಿ ನೀರು ಸಂಗ್ರಹವಿದೆ. ಆದರೆ ಕೆಬಿಜೆಎನ್‌ಎಲ್ ಅಧಿಕಾರಿಗಳು ಅವೈಜ್ಞಾನಿಕವಾಗಿ ನೀರಿನ ಲೆಕ್ಕ ಹಾಕಿ 13 ಟಿಎಂಸಿ ನೀರು ಆವಿಯಾಗುವದಾಗಿ ಅಂದಾಜಿಸಲಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ನೀರು ಆವಿಯಾಗುವದಿಲ್ಲ. ಹೂ ಬಿಡುವ ಹಂತದಲ್ಲಿರುವ ಮೆಣಸಿನಕಾಯಿ ಬೆಳೆಗೆ ಅಗತ್ಯವಿರುವ ನೀರು ಹರಿಸಲು ನಿರ್ಧರಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಿಎಸ್‌ಎಸ್‌ಕೆ ಆಡಳಿತ ಮಂಡಳಿ ವಜಾಕ್ಕೆ ಆಗ್ರಹ

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್ ಇಂಗಳದಾಳ, ಬೂದಯ್ಯ ಸ್ವಾಮಿ, ದೇವರಾಜ ನಾಯಕ, ಗೋವಿಂನಾಯಕ, ಭೀಮರೆಡ್ಡಿ, ಗೋಕುಲಸಾಬ್, ಬಸವರಾಜ ಇದ್ದರು.

ವರದಿ : ಹಫೀಜುಲ್ಲ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X