ಬೀದರ್‌ | ರೈತರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ರೈತ ಸಂಘ ಆಗ್ರಹ

Date:

ರಾಜ್ಯ ಸರ್ಕಾರ ಬರಗಾಲ ಪೀಡಿತ ಜಿಲ್ಲೆಯನ್ನಾಗಿ ಘೋಷಿಸಿ ಸುಮಾರು 6 ತಿಂಗಳು ಕಳೆದ ನಂತರ ರೈತರಿಗೆ ಬರ ಪರಿಹಾರ ನೀಡುತ್ತಿದ್ದು, ಶೀಘ್ರದಲ್ಲಿ ಉಳಿದ ಬರ ಪರಿಹಾರ ಹಣ ರೈತರ ಖಾತೆಗೆ ಜಮಾ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಒತ್ತಾಯಿಸಿದರು.

- Advertisement -

ಬೀದರ್‌ನಲ್ಲಿ ಪ್ರತಿಭಟನೆ ನಡೆಸಿದ ರೈತಸಂಘದ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಅತಿವೃಷ್ಠಿ, ಅನಾವೃಷ್ಠಿಯಿಂದ ಜಿಲ್ಲೆಯ ರೈತರು ತತ್ತರಿಸಿದ್ದಾರೆ. ರೈತ ಬೆಳೆದ ಒಂದಿಷ್ಟು ಬೆಳೆಗೆ ವೈಜ್ಞಾನಿಕವಾಗಿ ಬೆಲೆ ಸಹ ಸಿಗುತ್ತಿಲ್ಲ. ಇಂತಹ ಕೇಡುಗಾಲದಲ್ಲಿ ಅನೇಕ ಸಮಸ್ಯೆಗಳು ಎದುರಿಸುತ್ತಿರುವ ರೈತರಿಗೆ ಸರ್ಕಾರ ಸಕಾಲಕ್ಕೆ ಪರಿಹಾರ ನೀಡದೇ ಅನ್ಯಾಯ ಮಾಡುತ್ತಿದೆ” ಎಂದು ರೈತ ಮುಖಂಡರು ಬೇಸರ ವ್ಯಕ್ತಪಡಿಸಿದರು.

“ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಗಳು ಪ್ರಾರಂಭವಾಗಿ ಸುಮಾರು 3 ತಿಂಗಳು ಕಳೆದಿವೆ. ಆದರೆ ಇಲ್ಲಿಯವರೆಗೆ
ರೈತರ ಖಾತೆಗೆ ಪೂರ್ತಿ ಬಿಲ್‌ ಪಾವತಿಸಿಲ್ಲ. ಮೊದಲೇ ಬರಗಾಲದಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಕಾರ್ಖಾನೆಯ ಆಡಳಿತ ಮಂಡಳಿ ಬಿಲ್ ಪಾವತಿಸಲು ವಿಳಂಬ ಮಾಡದೇ, ಉಳಿದ ಹಣ ಶೀಘ್ರದಲ್ಲಿ ರೈತರ ಖಾತೆಗೆ ಜಮಾ ಮಾಡಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಔರಾದ ತಹಸೀಲ್ದಾರ್‌ ಕಚೇರಿಯಲ್ಲಿ ಇಲ್ಲ ʼಶುದ್ಧ ಕುಡಿಯುವ ನೀರುʼ

ಈ ಸಂದರ್ಭದಲ್ಲಿ ರೈತ ಸಂಘದರೈತ ಜಿಲ್ಲಾಧ್ಯಕ್ಷ ಸಿದ್ರಾಮಪ್ಪಾ ಆಣದೂರೆ, ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದರ, ಜಿಲ್ಲಾ ಉಪಾಧ್ಯಕ್ಷ ಶಂಕ್ರೆಪ್ಪಾ ಪಾರಾ, ಭಾಲ್ಕಿ ತಾಲೂಕಾಧ್ಯಕ್ಷ ಬಾಬುರಾವ ಜೋಳದಾಬಕೆ, ಬೀದರ್‌ ತಾಲೂಕಾಧ್ಯಕ್ಷ ನಾಗಯ್ಯಾ ಸ್ವಾಮಿ, ಕಮಲನಗರ ತಾಲೂಕಾಧ್ಯಕ್ಷ ಪ್ರವೀಣ ಕುಲಕರ್ಣಿ ಸೇರಿದಂತೆ ರೈತ ಮುಖಂಡರಾದ ಶಿವಾನಂದ ಹುಡಗೆ, ಚಂದ್ರಪ್ಪಾ ಪಾಟೀಲ್‌ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...