ಧಾರವಾಡ | ರಂಗಾಯಣ ನಿರ್ದೇಶಕ, ಹಾಸ್ಯ ನಟ ರಾಜು ತಾಳಿಕೋಟಿ ನಿಧನ

Date:

ಧಾರವಾಡ ರಂಗಾಯಣ ನಿರ್ದೇಶಕ, ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯ ಚಿತ್ರನಟ ರಾಜು ತಾಳಿಕೋಟಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

- Advertisement -

ಉಡುಪಿಯಲ್ಲಿ ಚಲನಚಿತ್ರದ ಚಿತ್ರೀಕರಣ ಮುಗಿದ ನಂತರ ರೂಮ್ ನಲ್ಲಿ ವಿಶ್ರಾಂತಿ ತೆಗೆದುಕೊಳ್ಳುವಾಗ ಹೃದಯಘಾತವಾಗಿದೆ. ನಂತರ ಮಣಿಪಾಲ್ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ವೈದ್ಯರು ಪರೀಕ್ಷಿಸಿ ನೋಡಲು ರಾಜು ತಾಳಿಕೋಟಿ ಇನ್ನಿಲ್ಲ ಎಂದು ದೃಢಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಲಿಯುಗದ ಕುಡುಕ, ಕುಡುಕರ ಸಾಮ್ರಾಜ್ಯ ಎಂಬ ಹಾಸ್ಯ ನಾಟಕಗಳ ಮೂಲಕ ಖ್ಯಾತಿ ಹೊಂದಿದ್ದ ರಾಜು ತಾಳಿಕೋಟಿ, ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದವರು. ಹಲವು ಹಾಸ್ಯ ನಾಟಕ ಮತ್ತು ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ. ಪ್ರಸ್ತುತ ವಿಜಯಪುರ ಜಿಲ್ಲೆಯ ತಾಳಿಕೋಟಿಯಲ್ಲಿ ವಾಸವಾಗಿದ್ದರು. ಇವರು ಖಾಸ್ಗತೇಶ್ವರ ನಾಟಕ ಮಂಡಳಿ ಮೂಲಕ ರಂಗಭೂಮಿಗೆ ಪ್ರವೇಶ ಮಾಡುತ್ತಾರೆ. ಬಿಗ್ ಬಾಸ್‌-7 ರ ಸ್ಪರ್ಧಿ ಕೂಡ ಆಗಿದ್ದರು. ಇತ್ತೀಚಿಗೆ ಹಲವು ಚರ್ಚೆ ಮತ್ತು ವಿರೋಧಗಳ ನಡುವೆಯೂ ಧಾರವಾಡ ರಂಗಾಯಣ ನಿರ್ದೇಶಕರಾಗಿ ಆಯ್ಕೆ ಆಗಿದ್ದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಆರ್‌ಎಸ್‌ಎಸ್ ಪಥಸಂಚಲನ; ಮಾರ್ಗ ಬದಲಾವಣೆಯಿಂದ ಪ್ರಯಾಣಿಕರು ಪರದಾಟ

ನಾಟಕ ರಂಗದಿಂದ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ರಾಜು ತಾಳಿಕೋಟಿ ಬಣ್ಣದ ಲೋಕಕ್ಕೆ ಬರುವ ಮೊದಲೇ ಹಾಸ್ಯ ನಾಟಕಗಳ ಕ್ಯಾಸೇಟಗಳ ಮೂಲಕ ಜನಪ್ರಿಯರಾಗಿದ್ದರು. ನಾಟಕಗಳಲ್ಲಿ ಅವರು ನಿರ್ವಹಿಸುತ್ತಿದ್ದ ಹಾಸ್ಯ ಪಾತ್ರಗಳು ಮತ್ತು ಸಣ್ಣ ಪುಟ್ಟ ಪಾತ್ರಗಳೂ ಸಹ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದವು. ಯಾವುದೇ ಸಂಭಾಷಣೆಯಲ್ಲಾಗಲಿ ಉತ್ತರ ಕರ್ನಾಟಕದ ಭಾಷಾ ಶೈಲಿಯನ್ನು ಬಿಟ್ಟುಕೊಡುತ್ತಿರಲಿಲ್ಲ. ರಂಗಾಯಣದ ಮೂಲಕ ಮರೆಯಾಗುತ್ತಿರುವ ನಾಟಕ ಸಂಸ್ಕೃತಿಯನ್ನು ಇನ್ನಷ್ಟು ಮುನ್ನಲೆಗೆ ತರುವ, ಪ್ರೇಕ್ಷಕರಲ್ಲಿ ನಾಟಕದ ಅಭಿರುಚಿ ಹೆಚ್ಚಿಸುವ ಉದ್ದೇಶದಿಂದ ಹಲವು ನಾಟಕ ಪ್ರದರ್ಶನಗಳನ್ನು ಹಮ್ಮಿಕೊಳ್ಳುವ ಕನಸನ್ನು ಹೊತ್ತಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...