ಮಂತ್ರಾಕ್ಷತೆ ವಿಚಾರದಲ್ಲಿ ಪರಸ್ಪರ ಬಡಿದಾಡಿಕೊಂಡ ಸಂಘಪರಿವಾರ-ಪುತ್ತಿಲ ಪರಿವಾರ!

Date:

ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ರಾಮಮಂದಿರದ ಅಕ್ಷತೆ ವಿತರಣೆ ಮಾಡುತ್ತಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡವರು ಎನ್ನಲಾದ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಂಡೂರು ಎಂಬಲ್ಲಿ ನಡೆದಿದೆ.

ಸಂತೋಷ್ ಎಂಬಾತ ಹಲ್ಲೆಗೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತ ಎಂದು ಗುರುತಿಸಲಾಗಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಂತೋಷ್ ಮುಂಡೂರು ಗ್ರಾಮದಲ್ಲಿ ರಾಮಮಂದಿರದ ಅಕ್ಷತೆ ಹಂಚುವ ಜವಾಬ್ದಾರಿ ಹೊತ್ತಿದ್ದರು. ಆದರೆ ಇದಕ್ಕೆ ಸ್ಥಳೀಯ ನಿವಾಸಿಗಳಾದ ಪುತ್ತಿಲ ಪರಿವಾರದ ಬೆಂಬಲಿಗರು ಎನ್ನಲಾದ ಧನಂಜಯ್ ಮತ್ತು ತಂಡ ವಿರೋಧ ವ್ಯಕ್ತಪಡಿಸಿದ್ದರು ಎಂದು ಆರೋಪಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವೇಳೆ ಮಾತಿಗೆ ಮಾತು ಬೆಳೆದಿದ್ದು, ಅದೇ ದ್ವೇಷದಲ್ಲಿ ಸಂತೋಷ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ತಡೆಯಲು ಬಂದ ಸಂತೋಷ ತಾಯಿಯ ಮೇಲೂ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ಸಂತೋಷ್ ಹಾಗೂ ಅವರ ತಾಯಿ ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಇದೊಂದು ರಾಜಕೀಯ ಪ್ರೇರಿತ ಹಲ್ಲೆಯಾಗಿದ್ದು, ಹಲ್ಲೆ ನಡೆಸಿದವರನ್ನು ತಕ್ಷಣವೇ ಬಂಧಿಸುವಂತೆ ಸರಕಾರ ಮತ್ತು ಪೋಲಿಸ್ ಇಲಾಖೆಯನ್ನು ಒತ್ತಾಯಿಸಿದರು. ಘಟನೆ ಕುರಿತಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...