ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವುದನ್ನು ವಿರೋಧಿಸಿ ಶಾಸಕರಾದ ಅಶೋಕ ಪಟ್ಟಣ ನೇತೃತ್ವದಲ್ಲಿ ರಾಮದುರ್ಗ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಮದುರ್ಗದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ರಾಜ್ಯಪಾಲರ ನಡೆಯ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ರಾಮದುರ್ಗ ಶಾಸಕರಾದ ಅಶೋಕ ಪಟ್ಟಣ ಮಾತನಾಡಿ, “ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ಪಕ್ಷದ ವರ್ಚಸ್ಸನ್ನು ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಜನಪರ ಯೋಜನೆಗಳು, ಗ್ಯಾರಂಟಿಗಳಿಂದ ರಾಜ್ಯದ ಜನರ ಮನೆ ಮನ ಮುಟ್ಟುತ್ತಿವೆ. ರಾಜ್ಯದ ಜನತೆ ಯಾವತ್ತೂ ಸಿದ್ದರಾಮಯ್ಯನವರ ಹಾಗೂ ಕಾಂಗ್ರೆಸ್ ಪರವಾಗಿ ಇದ್ದು, ಕಾಂಗ್ರೆಸ್ ಪಕ್ಷದ ಜನಪ್ರಿಯತೆ ಸಹಿಸಲಾರದೇ ಮಾಡುತ್ತಿರುವ ಕುತಂತ್ರ ಎಂದಿಗೂ ಫಲಿಸುವುದಿಲ್ಲ” ಎಂದರು.
ಇದನ್ನು ಓದಿದ್ದೀರಾ? ಕಲಬುರಗಿ | ಕೋಲ್ಕತ್ತಾ ಘಟನೆ, ದಲಿತ ಯುವಕನ ಕೊಲೆ ಖಂಡಿಸಿ ದಲಿತ ಸೇನೆ ಪ್ರತಿಭಟನೆ
ಈ ಸಂದರ್ಭದಲ್ಲಿ ರಾಮದುರ್ಗ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದು, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
