ರಾಮದುರ್ಗ | ವಲಸೆ ಅಭ್ಯರ್ಥಿಗೆ ಟಿಕೆಟ್‌, ಬಿಜೆಪಿ ಮುಖಂಡರ ಮುನಿಸು – ಕಾಂಗ್ರೆಸ್‌ಗೆ ವರದಾನ

Date:

Advertisements
2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯು ಲಿಂಗಾಯತ ಸಮುದಾಯದವರಾಗಿದ್ಧರು. ಆ ಸಂಧರ್ಭದಲ್ಲಿ ಲಿಂಗಾಯತ ಮತಗಳು ಹಂಚಿಕೆಯಾಗಿದ್ದು, ಈ  ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಲಿಂಗಾಯತರಲ್ಲದ ಕಾರಣದಿಂದ ಲಿಂಗಾಯತ ಮತಗಳು ಹಂಚಿಕೆಯಾಗುವ ಸಾಧ್ಯತೆಗಳಿಲ್ಲ. ಇದು ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚು ಧನಾತ್ಮಕವಾಗಿದೆ.

ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ – ಬಿಜೆಪಿ ನಡುವೆ ನೇರ ಪೈಪೋಟಿಯಿದ್ದರೂ ಕಾಂಗ್ರೆಸ್‌ಗೆ ಹೆಚ್ಚು ಅನೂಕೂಲಕರ ವಾತಾವರಣವಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ವಿಧಾನಸಭಾ ಕ್ಷೇತ್ರವು ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ 1939ರ ಏಪ್ರಿಲ್ ಜೈಲು ದುರಂತ‌ಕ್ಕೆ ಹೆಸರಾಗಿರುವ ಕ್ಷೇತ್ರ. ಈ ಬಾರಿಯ ಚುನಾವಣೆಯಲ್ಲಿ ಆಶ್ಚರ್ಯಕರ ವಾತಾವರಣವನ್ನು ನಿರ್ಮಾಣವಾಗಿದೆ.

ಬಿಜೆಪಿಗಾಗಿ ಕೆಲಸ ಮಾಡಿದ ಮತ್ತು ಬಿಜೆಪಿ ಶಾಸಕರಾಗಿದ್ದ ಮಹಾದೇವಪ್ಪ ಯಾದವಾಡ ಸೇರಿದಂತೆ ಇನ್ನೂ ನಾಲ್ಕು ಮಂದಿ ಸ್ಥಳೀಯ ಅಭ್ಯರ್ಥಿಗಳಿಗೆ ಬಿಜೆಪಿ ಈಬಾರಿ ಟಿಕೆಟ್ ನೀಡಿಲ್ಲ. ಬದಲಿಗೆ ಸ್ಥಳೀಯರಲ್ಲದ ಕೆಲವು ವರ್ಷಗಳಿಂದೀಚೆಗೆ ರಾಮದುರ್ಗ ತಾಲೂಕಿಗೆ ಆಗಮಿಸಿದ್ದು, ಪಕ್ಷದಲ್ಲಿ ಎಂದೂ ಗುರುತಿಸಿಕೊಳ್ಳದ ಉದ್ಯಮಿಯೊಬ್ಬರಿಗೆ ಟಿಕೆಟ್ ನೀಡಿರುವುದು ಬಿಜೆಪಿ ಕಾರ್ಯಕರ್ತರಲ್ಲಿ ಅಸಮಧಾನ ಮತ್ತು ಭೀನ್ನಾಭಿಪ್ರಾಯ ಉಂಟುಮಾಡಿದೆ. ಹಾಗೆಯೇ ಕಾಂಗ್ರೆಸ್‌ ಎರಡು ಬಾರಿ ಶಾಸಕರಾಗಿದ್ದ ಅಶೋಕ ಪಟ್ಟಣವರಿಗೆ ಟಿಕೆಟ್ ನೀಡಿ ಕಣಕ್ಕಿಳಿಸಿದೆ.

Advertisements

2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅಲ್ಪ ಮತಗಳ ಅಂತರದಿಂದ ಜಯಗಳಿಸಿದ್ಧರು. ಆದರೆ, ಈ ಬಾರಿ ಅವರಿಗೆ ಟಿಕೆಟ್ ನಿರಾಕರಿಸಿದ್ದು, ಅಸಮಾಧಾನಕ್ಕೆ ಕಾರಣವಾಗಿದೆ. ಈ ಕಾರಣದಿಂದಾಗಿ ಬಿಜೆಪಿಯ ಯಾವುದೇ ಪ್ರಚಾರ ಸಭೆಗಳಲ್ಲಿ ಅವರು ಭಾಗಿಯಾಗಿಲ್ಲ. ಕುರುಬ ಸಮುದಾಯದ ಪ್ರಕಾಶ ಮುದೋಳ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ಇದೆ. ಕಾಂಗ್ರೆಸ್‌ ಸರ್ಕಾರದ ಆಡಳಿತಾವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು, ಶೈಕ್ಷಣಿಕವಾಗಿ ಕ್ಷೇತ್ರದ ಅಭಿವೃದ್ಧಿ ಹಾಗೂ ನೀರಾವರಿ ಯೋಜನೆಗಳನ್ನು ಜಾರಿ ಮಾಡಿರುವುದು ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿಗೆ ಹೆಚ್ಚು ಅನೂಕೂಲಕರವಾಗಲಿದೆ.

ಇನ್ನೂ ಕೊರೊನಾ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಸಹಾಯ ಮಾಡಿರುವುದು ಸೇರಿದಂತೆ ಅನೇಕ ಸಮಾಜಿಕ ಕಾರ್ಯಗಳನ್ನು ಮಾಡಿರುವುದು ಬಿಜೆಪಿ ಅಭ್ಯರ್ಥಿ ಚಿಕ್ಕರೇವಣ್ಣನವರಿಗೆ ಅನೂಕೂಲ ಮಾಡಿಕೊಟ್ಟರೂ ಇವರು ಸ್ಥಳೀಯ ಅಭ್ಯರ್ಥಿ ಅಲ್ಲ ಎನ್ನುವ ಅಸಮಧಾನ ಕ್ಷೇತ್ರದ ಜನರಲ್ಲಿದ್ದು, ಇದು ಮುಳುವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಮದುರ್ಗ ವಿಧಾನಸಭಾ ಕ್ಷೇತ್ರದ ಜಾತಿವಾರು ಲೆಕ್ಕಾಚಾರವನ್ನು ಗಮನಿಸಿದಾಗ ಒಟ್ಟು 1,97,821 ಮತದಾರರಿದ್ದು, ಅದರಲ್ಲಿ 1,00,736 ಮಂದಿ ಪುರುಷ ಹಾಗೂ 97,085 ಮಂದಿ ಮಹಿಳಾ ಮತದಾರರಿದ್ದಾರೆ. ಇದರಲ್ಲಿ ಲಿಂಗಾಯತ 42,000, ಪರಿಶಿಷ್ಟ ಪಂಗಡದ 28,000, ಕುರುಬ ಸಮುದಾಯ 20,000, ರೆಡ್ಡಿ ಮತದಾರರು 16,000 ಮಂದಿ, ನೇಕಾರ 12,000, ಲಂಬಾಣಿ 12,000, ಮರಾಠ 3,000 ಸೇರಿದಂತೆ ಇತರೆ ಸಮುದಾಯದ ಮತದಾರರ ಸಂಖ್ಯೆ 16,000ದಷ್ಟಿದೆ. ರಾಮದುರ್ಗ ಕ್ಷೇತ್ರದಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಪಟ್ಟಣ ಕೂಡ ಲಿಂಗಾಯತ ಸಮುದಾಯದವರಾಗಿವುದರಿಂದ ಅನೂಕೂಲವಾಗಲಿದೆ.

ಈ ಸುದ್ದಿ ಓದಿದ್ದೀರಾ? ಹೊಳೆನರಸೀಪುರ ಕ್ಷೇತ್ರ | ಬದಲಾವಣೆ ಬಯಸುತ್ತಿದ್ದಾರೆಯೇ ಮತದಾರರು?

2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯು ಲಿಂಗಾಯತ ಸಮುದಾಯದವರಾಗಿದ್ಧರು. ಆ ಸಂಧರ್ಭದಲ್ಲಿ ಲಿಂಗಾಯತ ಮತಗಳು ಹಂಚಿಕೆಯಾಗಿದ್ದು, ಆದರೆ, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಲಿಂಗಾಯತರಲ್ಲದ ಕಾರಣದಿಂದ ಲಿಂಗಾಯತ ಮತಗಳು ಹಂಚಿಕೆಯಾಗುವ ಸಾಧ್ಯತೆಗಳಿಲ್ಲ. ಇದು ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚು ಧನಾತ್ಮಕವಾಗಿದೆ.

ಬಿಜೆಪಿ ಅಭ್ಯರ್ಥಿ ಕುರುಬ ಸಮುದಾಯದ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯಬಹುದಾದರೂ, ಜೆಡಿಎಸ್ ಅಭ್ಯರ್ಥಿಯೂ ಕುರುಬ ಸಮುದಾಯದವರಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕಾರಣದಿಂದ ಕುರಬ ಸಮುದಾಯದ ಮತಗಳು ಹಂಚಿಕೆಯಾಗಲಿವೆ. ಈ ಎಲ್ಲ ಸಂಗತಿಗಳನ್ನು ಗಮನಿಸಿದರೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಪಟ್ಟಣ ಅವರಿಗೆ ಹೆಚ್ಚು ಅನೂಕೂಲಕರ ವಾತಾವರಣವಿದ್ದು, ಈ ಬಾರಿ ಮತದಾರ ವಿಜಯದ ಮಾಲೆಯನ್ನು ಯಾರಿಗೆ ಹಾಕಲಿದ್ದಾನೆ ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X