ಖಾತೆ ಕ್ಯಾತೆ | ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದರಾ ರಾಮಲಿಂಗಾರೆಡ್ಡಿ?

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಪೂರ್ತಿ ಭರ್ತಿಯಾಗಿದ್ದು, ಸಿಎಂ, ಡಿಸಿಎಂ ಸೇರಿ ಒಟ್ಟು 34 ಸಚಿವರಿದ್ದಾರೆ. ಆದರೆ, ಸಚಿವ ಸ್ಥಾನ ಸಿಕ್ಕವರಲ್ಲೇ ಖಾತೆ ಕ್ಯಾತೆ ಆರಂಭವಾಗಿದೆ.

ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಖಾತೆಗೆ ಸಂಬಂಧಿಸಿದಂತೆ ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ. ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಖಾತೆ ಹಂಚಿಕೆ ವಿಚಾರ ದೊಡ್ಡ ಸದ್ದು ಮಾಡಿತು.

ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆ ಸುದ್ದಿಯೂ ಪ್ರಸಾರವಾಯಿತು. ಅದರಲ್ಲಿ ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಇಲಾಖೆ ನೀಡಲಾಗಿದೆ ಎಂದು ಮಾಹಿತಿ ಬಿತ್ತರವಾಯಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಬೆಳವಣಿಗೆ ಬೆನ್ನಲ್ಲೇ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಸಂಸದ ಡಿ ಕೆ ಸುರೇಶ್ ಅವರ ಮನವೊಲಿಸುವ ಕಸರತ್ತು ನಡೆಸಿದ್ದಾರೆ.

ರಾಮಲಿಂಗಾರೆಡ್ಡಿ ಅವರು ಸಾರಿಗೆ ಖಾತೆ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದು, ಬೇರೆ ಖಾತೆ ನೀಡಿ ಎಂದು ಪಟ್ಟು ಹಿಡಿದಿದ್ದಾರೆ. ಅಲ್ಲದೇ ತಮಗೆ ಸಾರಿಗೆ ಇಲಾಖೆ ನೀಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳುತ್ತಿದ್ದಾರೆ ಎನ್ನಲಾಗಿದೆ.

ಭಾನುವಾರ ಬೆಳಗ್ಗೆ 11 ಗಂಟೆಯಿಂದಲೂ ಬೆಂಗಳೂರಿನ ಲಕ್ಕಸಂದ್ರ ಬಡಾವಣೆಯಲ್ಲಿರುವ ನಿವಾಸದಲ್ಲಿ ರಾಮಲಿಂಗಾರೆಡ್ಡಿ ಜೊತೆಗೆ ಡಿ ಕೆ ಸುರೇಶ್ ನಿರಂತರ ಮಾತುಕತೆ ನಡೆಸಿದ್ದು, ಮನವೊಲಿಕೆಗೆ ಪ್ರಯತ್ನಿಸುತ್ತಿದ್ದಾರೆ. ಆದರೂ ರಾಮಲಿಂಗಾರೆಡ್ಡಿ ಮಾತ್ರ ತಮ್ಮ ಹಠದಿಂದ ಹಿಂದೆ ಸರಿಯುತ್ತಿಲ್ಲ ಎನ್ನಲಾಗಿದೆ. ಇದರಿಂದ ಅಂತಿಮವಾಗಿ ಖುದ್ದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ದಿಢೀರ್ ರಾಮಲಿಂಗಾರೆಡ್ಡಿ ನಿವಾಸಕ್ಕೆ ತೆರಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...