ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಸಾತನೂರು ಗ್ರಾಮದ ಬಳಿ ಘಟನೆ ನಡೆದಿದೆ. ಹತ್ಯೆಗೀಡಾದವರನ್ನು ಅಚ್ಚಲು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ನಂಜೇಶ್ (45) ಎಂದು ಗುರುತಿಸಲಾಗಿದೆ. ಜಮೀನು ವಿವಾದದ ಕಾರಣಕ್ಕೆಅವರನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಸಾತನೂರು ಗ್ರಾಮದ ಡಾಬಾವೊಂದರ ಬಳಿ ನಂಜೇಶ್ ನಿಂತಿದ್ದಾಗ, ಮಾರಕಾಸ್ತ್ರಗಳೊಂದಿಗೆ ಏಕಾಏಕಿ ನುಗ್ಗಿದ ನಾಲ್ಕೈದು ಮಂದಿ ದುಷ್ಕರ್ಮಿಗಳು ಅವರ ಮೇಲೆ ಭೀಕರವಾಗಿ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ನಂಜೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಘಟನೆ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.